ಬಿಹಾರದಲ್ಲೊಂದು ಭೀಭತ್ಸ ಕೃತ್ಯ: !ಅತ್ಯಾಚಾರಕ್ಕೆ ಅವಕಾಶ ನೀಡದ ಯುವತಿಗೆ ಬೆಂಕಿ
ಯುವತಿಯೊಬ್ಬಳು ತನ್ನ ಮೇಲೆ ಅತ್ಯಾಚಾರ ನಡೆಸುವದನ್ನು ತಡೆದ ಬಳಿಕ ಆಕೆಗೆ ಬೆಂಕಿ ಹಚ್ಚಿ ಹತ್ಯೆಗೆ ಯತ್ನಿಸಿದ ಘಟನೆ ಬಿಹಾರದಲ್ಲಿ ನಡೆದಿದೆ.

ಮುಜಾಫರ್ ಪುರ: ಯುವತಿಯೊಬ್ಬಳು ತನ್ನ ಮೇಲೆ ಅತ್ಯಾಚಾರ ನಡೆಸುವದನ್ನು ತಡೆದ ಬಳಿಕ ಆಕೆಗೆ ಬೆಂಕಿ ಹಚ್ಚಿ ಹತ್ಯೆಗೆ ಯತ್ನಿಸಿದ ಘಟನೆ ಬಿಹಾರದಲ್ಲಿ ನಡೆದಿದೆ.
ಘಟನೆಯಲ್ಲಿ ಶೇಕಡಾ 50 ರಷ್ಟು ಸುಟ್ಟಗಾಯಗಳಿಗೆ ಒಳಗಾದ 23 ವರ್ಷದ ಸಂತ್ರಸ್ತೆಗೆ ಇದೀಗ ಮುಜಾಫರ್ ಪುರದ ಆಸ್ಪತ್ರೆಯಲ್ಲಿ ಚಿಕಿತ್ಸೆ ಒದಗಿಸಲಾಗುತ್ತಿದೆ ಎಂದು ಪೋಲೀಸರು ವಿವರಿಸಿದ್ದಾರೆ.ಅಹಿಯಾಪುರ ಪೊಲೀಸ್ ಠಾಣೆಯಲ್ಲಿ ಸಂತ್ರಸ್ಥೆಯ ತಾಯಿ ನೀಡಿದ ದೂರಿನ ಆಧಾರದ ಮೇಲೆ ಆರೋಪಿಗಳನ್ನು ಬಂಧಿಸಲಾಗಿದೆ ಎಂದು ಸ್ಟೇಷನ್ ಹೌಸ್ ಆಫೀಸರ್ (ಎಸ್‌ಎಚ್‌ಒ) ವಿಕಾಸ್ ರೈ ತಿಳಿಸಿದ್ದಾರೆ.
ದೂರಿನಲ್ಲಿ, ವಿವರಿಸಿದಂತೆ ಯುವತಿ ಶನಿವಾರ ಮನೆಯಲ್ಲಿ ಒಬ್ಬಂಟಿಯಾಗಿದ್ದು ನೆರೆಮನೆಯಲ್ಲಿ ವಾಸಿಸುತ್ತಿದ್ದ ಆರೋಪಿ ಮನೆಗೆ ನುಗ್ಗಿ ಆಕೆಯನ್ನು ಅತ್ಯಾಚಾರ ಮಾಡಲು ಯತ್ನಿಸಿದ್ದಾನೆ. ಆಗ ಅದನ್ನು ವಿರೋಧಿಸಿದ್ದ ಯುವತಿಗೆ ಬೆಂಕಿ ಹಚ್ಚಿ ಕೊಲ್ಲಲು ಪ್ರಯತ್ನಿಸಿದ್ದಾನೆ. ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಕೆಲಸ ಮಾಡುತ್ತಿರುವ ಆಕೆಯ ತಾಯಿ ಮನೆಗೆ ಬಂದಾಗ ಯುವತಿ ಸುಟ್ಟ ಗಾಯಗಳೊಡನೆ ನರಳುತ್ತಿದ್ದದ್ದು ಕಂಡು ಆಸ್ಪತ್ರೆಗೆ ಕರೆದೊಯ್ದರು.ಸ್ಥಳೀಯರು ಘಟನೆಯ ಬಗ್ಗೆ ಮಾಹಿತಿ ನೀಡಿದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


