2002 ಗುಜರಾತ್ ಗಲಭೆ ಪ್ರಕರಣ: ನಾನಾವತಿ ಆಯೋಗದಿಂದ ಪ್ರಧಾನಿ ಮೋದಿಗೆ ಕ್ಲೀನ್'ಚಿಟ್
2002 ಗುಜರಾತ್ ಗಲಭೆ ಪ್ರಕರಕ್ಕೆ ಸಂಬಂಧಿಸಿದಂತೆ ಗುಜರಾತ್ ರಾಜ್ಯದ ಅಂದಿನ ನರೇಂದ್ರ ಮೋದಿ ಸರ್ಕಾರಕ್ಕೆ ನಾನಾವತಿ ಆಯೋಗ ಕ್ಲೀನ್'ಚಿಟ್ ನೀಡಿದೆ.

ಗಾಂಧಿನಗರ: 2002 ಗುಜರಾತ್ ಗಲಭೆ ಪ್ರಕರಕ್ಕೆ ಸಂಬಂಧಿಸಿದಂತೆ ಗುಜರಾತ್ ರಾಜ್ಯದ ಅಂದಿನ ನರೇಂದ್ರ ಮೋದಿ ಸರ್ಕಾರಕ್ಕೆ ನಾನಾವತಿ ಆಯೋಗ ಕ್ಲೀನ್'ಚಿಟ್ ನೀಡಿದೆ.
ಗಲಭೆ ಪ್ರಕರಣ ಕುರಿತು ನಾನಾವತಿ ಆಯೋಗ ಸಿದ್ಧಪಡಿಸಿರುವ ವರದಿಯನ್ನು ಗುಜರಾತ್ ರಾಜ್ಯದ ಗೃಹ ಸಚಿವ ಪ್ರದೀಪ್ ಸಿನ್ಹಾ ಜಡೇಜಾ ಅವರು ರಾಜ್ಯ ವಿಧಾನಸಭೆಯಲ್ಲಿ ಮಂಡನೆ ಮಾಡಿದ್ದಾರೆ.
ವರದಿಯಲ್ಲಿ ದಂಗೆ ಪ್ರಕರಣದಲ್ಲಿ ಸರ್ಕಾರದ ಪಾತ್ರವಿಲ್ಲ. ದಂಗೆ ಕುರಿತು ಸಂಜೀವ್ ಭಟ್ ಸುಳ್ಳು ಹೇಳಿದ್ದಾರೆ. ಇದು ಪೂರ್ವನಿಯೋಜಿತ ಗಲಭೆಯಲ್ಲ. ದಂಗೆಯನ್ನು ನಿಯಂತ್ರಿಸಲು ಮೋದಿಯವರು ಯತ್ನ ನಡೆಸಿದ್ದರು ಎಂದು ನಾನಾವತಿ ಆಯೋಗ ತಿಳಿಸಿದ್ದು, ಈ ಮೂಲಕ ಪ್ರಕರಣ ಸಂಬಂಧ ಮೋದಿ ಸರ್ಕಾರಕ್ಕೆ ಕ್ಲೀನ್ ಚಿಟ್ ನೀಡಿದೆ.
ಈ ಹಿಂದೆ ನಾನಾವತಿ ಆಯೋಗದ ವರದಿಯನ್ನು 2008ರಲ್ಲಿ ಮೊದಲ ಬಾರಿಗೆ ಮಂಡನೆ ಮಾಡಲಾಗಿತ್ತು. ಮೊದಲ ವರದಿಯಲ್ಲಿ ರೈಲಿಗೆ ಬೆಂಕಿ ಹೊತ್ತಿಕೊಂಡಿದ್ದರ ಬಗ್ಗೆ ತಿಳಿಸಲಾಗಿತ್ತು. ಇದೊಂದು ಯೋಜಿತ ಪಿತೂರಿಯಾಗಿದ್ದು, ಗೋದ್ರಾ ರೈಲ್ವೇ ಸಮೀಪದಲ್ಲಿ ಸಬರಮತಿ ಏಕ್ಸ್'ಪ್ರೆಸ್ ರೈಲಿನ 5-6 ಬೋಗಿಗಳಿಗೆ ಬೆಂಕಿ ಹಚ್ಚಲಾಗಿತ್ತು ಎಂದು ತಿಳಿಸಲಾಗಿತ್ತು. ಇದಾದ ಬಳಿಕ ಅಂತಿಮ ವರದಿಯನ್ನು 2014ರಲ್ಲಿ ಆನಂದಿ ಬೆನ್ ನೇತೃತ್ವದ ಸರ್ಕಾರದ ಎದುರು ಮಂಡನೆ ಮಾಜಲಾಗಿತ್ತು. ಅಧಿಕೃತ ಮಾಹಿತಿಗಳ ಪ್ರಕಾರ, ಅಲ್ಪ ಸಂಖ್ಯಾತ ಸಮುದಾಯಕ್ಕೆ ಸೇರಿದ ಸುಮಾರು 1000ಕ್ಕೂ ಹೆಚ್ಚು ಜನರು ಗಲಭೆಯಲ್ಲಿ ಸಾವನ್ನಪ್ಪಿದ್ದಾರೆ. ಆದರೆ, ಅನಧಿಕೃತವಾಗಿ ಈ ಸಾವಿನ ಸಂಖ್ಯೆ ಇದಕ್ಕೂ ಹೆಚ್ಚು ಎಂದು ಹೇಳಲಾಗುತ್ತಿದೆ.
ಗಲಭೆ ಪ್ರಕರಣ ಕುರಿತು 2002ರಲ್ಲಿ ಪ್ರಧಾನಮಂತ್ರಿ ನರೇಂದ್ರ ಮೋದಿ ಸರ್ಕಾರ ತನಿಖೆಗೆ ಆಯೋಗವನ್ನು ರಚನೆ ಮಾಡಿತ್ತು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


