ದೇಶ

ನಿಮ್ಮ ಹಕ್ಕು ಕಸಿಯಲು ಯಾರಿಂದಲೂ ಸಾಧ್ಯವಿಲ್ಲ: ಪೌರತ್ವ ತಿದ್ದುಪಡಿ ಮಸೂದೆ ಕುರಿತು 'ಈಶಾನ್ಯ' ಜನತೆಗೆ ಪ್ರಧಾನಿ ಮೋದಿ ಭರವಸೆ

ಪೌರತ್ವ ತಿದ್ದುಪಡಿ ಮಸೂದೆ ಕುರಿತಂತೆ ಈಶಾನ್ಯ ಭಾರತದಲ್ಲಿ ಭುಗಿಲೆದ್ದಿರುವ ಹಿಂಸಾಚಾರಕ್ಕೆ ಸಂಬಂಧಿಸಿದಂತೆ ಇದೇ ಮೊದಲ ಬಾರಿಗೆ ಪ್ರಧಾನಿ ಮೋದಿ ಹೇಳಿಕೆ ನೀಡಿದ್ದು, ನಿಮ್ಮ ಹಕ್ಕು ಕಸಿಯಲು ಯಾರಿಂದಲೂ ಸಾಧ್ಯವಿಲ್ಲ ಎಂದು ಭರವಸೆ ನೀಡಿದ್ದಾರೆ.

ನಿಮ್ಮ ಹಕ್ಕು ಕಸಿಯಲು ಯಾರಿಂದಲೂ ಸಾಧ್ಯವಿಲ್ಲ: ಪೌರತ್ವ ತಿದ್ದುಪಡಿ ಮಸೂದೆ ಕುರಿತು 'ಈಶಾನ್ಯ' ಜನತೆಗೆ ಪ್ರಧಾನಿ ಮೋದಿ ಭರವಸೆ
ಸಂಗ್ರಹ ಚಿತ್ರ
Published On :

ನವದೆಹಲಿ: ಪೌರತ್ವ ತಿದ್ದುಪಡಿ ಮಸೂದೆ ಕುರಿತಂತೆ ಈಶಾನ್ಯ ಭಾರತದಲ್ಲಿ ಭುಗಿಲೆದ್ದಿರುವ ಹಿಂಸಾಚಾರಕ್ಕೆ ಸಂಬಂಧಿಸಿದಂತೆ ಇದೇ ಮೊದಲ ಬಾರಿಗೆ ಪ್ರಧಾನಿ ಮೋದಿ ಹೇಳಿಕೆ ನೀಡಿದ್ದು, ನಿಮ್ಮ ಹಕ್ಕು ಕಸಿಯಲು ಯಾರಿಂದಲೂ ಸಾಧ್ಯವಿಲ್ಲ ಎಂದು ಭರವಸೆ ನೀಡಿದ್ದಾರೆ.

ಈ ಕುರಿತಂತೆ ಸರಣಿ ಟ್ವೀಟ್ ಮಾಡಿರುವ ಪ್ರಧಾನಿ ಮೋದಿ, ನಿಮ್ಮ ಹಕ್ಕನ್ನು ಕಸಿಯಲು ಯಾರಿಂದಲೂ ಸಾಧ್ಯವಿಲ್ಲ. ಪೌರತ್ವ ಮಸೂದೆ ಕುರಿತಂತೆ ಅನಗತ್ಯ ಭಯಬೇಡ. ನಿಮ್ಮ ಹಕ್ಕುಗಳನ್ನು, ಅನನ್ಯ ಗುರುತು ಮತ್ತು ಸುಂದರ ಸಂಸ್ಕೃತಿಯನ್ನುಕಸಿಯಲು ಯಾರಿಂದಲೂ ಸಾಧ್ಯವಿಲ್ಲ. ಅದು ಪ್ರವರ್ಧಮಾನಕ್ಕೆ ಬಂದು ಬೆಳೆಯುತ್ತದೆ. ಅಸ್ಸಾಂ ಮತ್ತು ಈಶಾನ್ಯ ಭಾರತದ ನನ್ನ ಸಹೋದರ-ಸಹೋದರಿಯರಿಗೆ ನಾನು ಈ ಮೂಲಕ ಹೇಳುವುದೇನೆಂದರೆ, ಕೇಂದ್ರ ಸರ್ಕಾರ ಮತ್ತು ನಾನು ಅಸ್ಸಾಮ್ ಜನರ ರಾಜಕೀಯ, ಭಾಷಾ, ಸಾಂಸ್ಕೃತಿಕ ಮತ್ತು ಭೂ ಹಕ್ಕುಗಳನ್ನು ಸಾಂವಿಧಾನಿಕವಾಗಿ ರಕ್ಷಿಸಲು ಸಂಪೂರ್ಣವಾಗಿ ಬದ್ಧವಾಗಿದ್ದೇವೆ. ಈ ಕುರಿತಂತೆ ಅನಗತ್ಯ ಭಯ ಬೇಡ ಎಂದು ಹೇಳಿದ್ದಾರೆ.

ಇನ್ನು ನಿನ್ನೆಯಷ್ಟೇ ರಾಜ್ಯಸಭೆಯಲ್ಲೂ ಪೌರತ್ವ ತಿದ್ದುಪಡಿ ಮಸೂದೆ ಮಂಡನೆಯಾಗಿ ಅನುಮೋದನೆ ಕೂಡ ಪಡೆದಿತ್ತು. ಮಸೂದೆಯ ಪರವಾಗಿ 125 ಮತಗಳು ಬಂದರೆ, ವಿರುದ್ಧವಾಗಿ 99 ಮತಗಳು ಚಲಾವಣೆಯಾದವು. ಅನುಮೋದನೆಗೆ 112 ಮತಗಳ ಅವಶ್ಯಕತೆ ಇತ್ತು.

Related Article

ಪೌರತ್ವ ತಿದ್ದುಪಡಿ ಮಸೂದೆಗೆ ವಿರೋಧ: ಕೇಂದ್ರ ಸಚಿವರ ಮನೆ ಮೇಲೆ ಪ್ರತಿಭಟನಾಕಾರರ ದಾಳಿ

ಪೌರತ್ವ ತಿದ್ದುಪಡಿ ಮಸೂದೆ: ಈಶಾನ್ಯದಲ್ಲಿ ತಾರಕ್ಕೇರಿದ ಕಿಚ್ಚು, ಹಿಂಸಾಚಾರ, ಹಲವೆಡೆ ಕರ್ಫ್ಯೂ ಜಾರಿ

ಪೌರತ್ವ ಮಸೂದೆ: 'ಸುಪ್ರೀಂ'ಗೆ ದೂರು ನೀಡಲು ವಿಪಕ್ಷಗಳ ಚಿಂತನೆ

'ಭಾರತದ ಸಂವಿಧಾನದ ಇತಿಹಾಸದಲ್ಲೇ ಇದು ಕರಾಳ ದಿನ'

ರಾಜ್ಯಸಭೆಯಲ್ಲಿ ಪೌರತ್ವ ತಿದ್ದುಪಡಿ ಮಸೂದೆ ಅಂಗೀಕಾರ: ಮೋದಿ ಸರ್ಕಾರದಿಂದ ಮತ್ತೊಂದು ಐತಿಹಾಸಿಕ ಕಾನೂನು

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.