ದೇಶ

ಪೌರತ್ವ ತಿದ್ದುಪಡಿ ಮಸೂದೆ: ಗುವಾಹತಿಯಲ್ಲಿ ಕರ್ಫ್ಯೂ ಸಡಿಲಿಕೆ

ಪೌರತ್ವ ತಿದ್ದುಪಡಿ ಮಸೂದೆ ಕುರಿತಂತೆ ಈಶಾನ್ಯ ಭಾರತದಲ್ಲಿ ಭುಗಿಲೆದ್ದಿದ್ದ ಹಿಂಸಾಚಾರ ತಡೆಗೆ ಹೇರಲಾಗಿದ್ದ ಕರ್ಫ್ಯೂವನ್ನು ಕೆಲ ಗಂಟೆಗಳ ಕಾಲ ಸಡಿಲಗೊಳಿಸಲಾಗಿದ್ದು, ಗುವಾಹತಿಯಲ್ಲಿ ಕರ್ಫ್ಯೂ ಸಡಿಲಿಸಲಾಗಿದೆ ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.

ಪೌರತ್ವ ತಿದ್ದುಪಡಿ ಮಸೂದೆ: ಗುವಾಹತಿಯಲ್ಲಿ ಕರ್ಫ್ಯೂ ಸಡಿಲಿಕೆ
ಸಂಗ್ರಹ ಚಿತ್ರ
Published On :

ದಿಬ್ರೂಗಢ್: ಪೌರತ್ವ ತಿದ್ದುಪಡಿ ಮಸೂದೆ ಕುರಿತಂತೆ ಈಶಾನ್ಯ ಭಾರತದಲ್ಲಿ ಭುಗಿಲೆದ್ದಿದ್ದ ಹಿಂಸಾಚಾರ ತಡೆಗೆ ಹೇರಲಾಗಿದ್ದ ಕರ್ಫ್ಯೂವನ್ನು ಕೆಲ ಗಂಟೆಗಳ ಕಾಲ ಸಡಿಲಗೊಳಿಸಲಾಗಿದ್ದು, ಗುವಾಹತಿಯಲ್ಲಿ ಕರ್ಫ್ಯೂ ಸಡಿಲಿಸಲಾಗಿದೆ ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.

ತೀವ್ರ ಹಿಂಸಾಚಾರಕ್ಕೆ ಸಾಕ್ಷಿಯಾಗಿದ್ದ ಅಸ್ಸಾಂನ ಗುವಾಹತಿಯಲ್ಲಿ ಇಂದು ಬೆಳಗ್ಗೆ 9 ಗಂಟೆಯಿಂದ ಮಧ್ಯಾಹ್ನ 4 ಗಂಟೆಯವರೆಗೂ ಕರ್ಫ್ಯೂ ಸಡಿಲಿಸಲಾಗಿದೆ ಎಂದು ಹಿರಿಯ ಪೊಲೀಸ್ ವರಿಷ್ಠಾಧಿಕಾರಿಗಳು ಮಾಹಿತಿ ನೀಡಿದ್ದಾರೆ.

ಪೌರತ್ವ ಮಸೂದೆ ಕುರಿತು ಪೂರ್ವೋತ್ತರ ರಾಜ್ಯಗಳಲ್ಲಿ ಹಿಂಸಾಚಾರ
ಏತನ್ಮಧ್ಯೆ ಅತ್ತ ಪೌರತ್ವ ತಿದ್ದುಪಡಿ ಮಸೂದೆಗೆ ಸಂಬಂಧಿಸಿದಂತೆ ಪೂರ್ವೋತ್ತರದ ರಾಜ್ಯಗಳಲ್ಲಿ ಹಿಂಸಾಚಾರ ಮುಂದುವರೆದಿದೆ. ಅಸ್ಸಾಂನಲ್ಲಿ AASU ನೇತೃತ್ವದಲ್ಲಿ ಪ್ರತಿಭಟನೆ ಹಾಗೂ ಉಪವಾಸ ಸತ್ಯಾಗ್ರಹ ಮುಂದುವರೆದಿದೆ. ರಾಜ್ಯದ ಒಟ್ಟು ಹತ್ತು ಜಿಲ್ಲೆಗಳಲ್ಲಿ ಹಿಂಸಾಚಾರದ ಘಟನೆಗಳು ನಡೆದಿದ್ದು, ಕರ್ಫ್ಯೂ ಜಾರಿಗೊಳಿಸಲಾಗಿದೆ. ಗುವಾಹಾಟಿ ಮತ್ತು ದಿಬ್ರುಗಡ್ ಜಿಲ್ಲೆಗಳಲ್ಲಿ ಕರ್ಫ್ಯೂನಲ್ಲಿ ಸಡಿಲಿಕೆ ನೀಡಲಾಗಿದೆ. ಆ ಬಳಿಕ ಸಾರ್ವಜನಿಕರು ಅಗತ್ಯವಿರುವ ವಸ್ತುಗಳ ಖರೀದಿಗೆ ಮುಂದಾಗಿದ್ದಾರೆ. ಅಸ್ಸಾಂನಲ್ಲಿ ನಡೆದ ಹಿಂಸಾಚಾರದಲ್ಲಿ ಇದುವರೆಗೆ ನಾಲ್ವರು ಮೃತಪಟ್ಟಿದ್ದಾರೆ. ಡಿಸೆಂಬರ್ 22ರವರೆಗೆ ಶಾಲಾ-ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ. ಅಸ್ಸಾಂನ ಒಟ್ಟು 10 ಜಿಲ್ಲೆಗಳಲ್ಲಿ ಇಂಟರ್ನೆಟ್ ಸೇವೆಯನ್ನೂ ಕೂಡ ಸ್ಥಗಿತಗೊಳಿಸಲಾಗಿದೆ. ಮೇಘಾಲಯದಲ್ಲಿಯೂ ಕೂಡ ಇಂಟರ್ನೆಟ್ ಬಳಕೆಯ ಮೇಲೆ ನಿಷೇಧ ಹೇರಲಾಗಿದೆ. ಶಿಲಾಂಗ್ ನ ಕೆಲ ಪ್ರಾಂತ್ಯಗಳಲ್ಲಿಯೂ ಕೂಡ ಕರ್ಫ್ಯೂ ಜಾರಿಗೊಳಿಸಲಾಗಿದೆ.

ಪ್ರತಿಭಟನೆ ಕೈ ಬಿಡದಿದ್ದರೆ ಕಠಿಣ ಕ್ರಮ: ಸಿಎಂ ಸರ್ವಾನಂದ್ ಸೋನೋವಾಲ್
ಪೌರತ್ವ ತಿದ್ದುಪಡಿ ಕಾನೂನನ್ನು ಹಿಂಪಡೆಯುವಂತೆ ಪ್ರತಿಭಟನಾಕಾರರು ಕೇಂದ್ರ ಸರ್ಕಾರವನ್ನು ಒತ್ತಾಯಿಸಿದ್ದಾರೆ. ಈ ಕುರಿತು ಮಾತನಾಡಿರುವ ಸಿಎಂ ಸರ್ವಾನಂದ್ ಸೋನೋವಾಲ್, ಹಿಂಸಾಚಾರಕ್ಕೆ ಮುಂದಾಗಿರುವ ಪ್ರತಿಭಟನಾಕಾರರ ಮೇಲೆ ಕಠಿಣ ಕ್ರಮ ಜರುಗಿಸಲಾಗುವುದು ಎಂದಿದ್ದಾರೆ. ಇನ್ನೊಂದೆಡೆ ರಾಜ್ಯದಲ್ಲಿ ಶಾಂತಿ ಕಾಪಾಡುವಂತೆ ಅಸ್ಸಾಂ ಗವರ್ನರ್ ಜನತೆಯಲ್ಲಿ ಮನವಿ ಮಾಡಿದ್ದಾರೆ. ಈ ಮಸೂದೆ 'ಅಸ್ಸಾಂ ಒಪ್ಪಂದ'ಕ್ಕೆ ಮಾರಕವಾಗಿದೆ ಎಂದು ಪ್ರತಿಭಟನಾಕಾರರು ತಮ್ಮ ವಾದ ಮಂಡಿಸಿದ್ದಾರೆ. ಈ ಮಸೂದೆ 'ಅಸ್ಸಾಂ ಒಪ್ಪಂದ'ದ 6ನೇ ಅನುಚ್ಛೇದದ ಉಲ್ಲಂಘನೆಯಾಗಿದ್ದು, 6ನೇ ಅನುಚ್ಚೆದದಲ್ಲಿ ರಾಜ್ಯದ ಸಂಸ್ಕೃತಿ, ಭಾಷೆಯ ಅಸ್ತಿತ್ವದ ರಕ್ಷಣೆ ಮಾಡುವ ಭರವಸೆ ನೀಡಲಾಗಿದೆ ಎಂದಿದ್ದಾರೆ.

Related Article

ಪೌರತ್ವ ತಿದ್ದುಪಡಿ ವಿರೋಧಿಸುವ ಹಕ್ಕು ರಾಜ್ಯಸರ್ಕಾರಗಳಿಗೆ ಇಲ್ಲ: ಗೃಹ ಸಚಿವಾಲಯ

ಪೌರತ್ವ ಕಾಯ್ದೆ ವಿರುದ್ಧ ಪ್ರತಿಭಟನೆ: ಗುವಾಹಟಿಯಿಂದ ಪ್ರಯಾಣಿಕರಿಗೆ ವಿಶೇಷ ರೈಲು

'ಅಸಂವಿಧಾನಿಕ ಕಾಯ್ದೆ': ಮಧ್ಯ ಪ್ರದೇಶ, ಛತ್ತೀಸ್ ಗಢದಲ್ಲೂ ಪೌರತ್ವ ಮಸೂದೆಗೆ ವಿರೋಧ

ಪೌರತ್ವ ಕಾಯ್ದೆ ವಿರುದ್ಧ ಸಾಮೂಹಿಕ ಆಂದೋಲನಕ್ಕೆ ಮಮತಾ ಕರೆ: ಪ.ಬಂಗಾಳದಲ್ಲಿ ಹಿಂಸಾಚಾರಕ್ಕೆ ತಿರುಗಿದ ಪ್ರತಿಭಟನೆ

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.