ದೇಶ

ಕೋರ್ಟ್'ಗೆ ಹೋದರೆ ಉನ್ನಾವೋಗಿಂತಲೂ ಕೆಟ್ಟ ಸ್ಥಿತಿ ಎದುರಾಗುತ್ತದೆ: ಅತ್ಯಾಚಾರ ಸಂತ್ರಸ್ತೆಗೆ ಕಾಮುಕನ ಬೆದರಿಕೆ

ನ್ಯಾಯಾಲಯಕ್ಕೆ ಹಾಜರಾದರೆ ಉತ್ತರಪ್ರದೇಶದ ಉನ್ನಾವೋ ಅತ್ಯಾಚಾರ ಸಂತ್ರಸ್ತೆಗಿಂತಲೂ ಕೆಟ್ಟ ಪರಿಸ್ಥಿತಿ ಎದುರಿಸಬೇಕಾಗುತ್ತದೆ ಎಂದು ಜಾಮೀನಿನ ಮೇಲೆ ಹೊರ ಬಂದಿರುವ ಕಾಮುಕನೊಬ್ಬ ಅತ್ಯಾಚಾರ ಸಂತ್ರಸ್ತೆಗೆ ಬೆದರಿಕೆ ಹಾಕಿರುವ ಘಟನೆ ನಡೆದಿದೆ.

ಕೋರ್ಟ್'ಗೆ ಹೋದರೆ ಉನ್ನಾವೋಗಿಂತಲೂ ಕೆಟ್ಟ ಸ್ಥಿತಿ ಎದುರಾಗುತ್ತದೆ: ಅತ್ಯಾಚಾರ ಸಂತ್ರಸ್ತೆಗೆ ಕಾಮುಕನ ಬೆದರಿಕೆ
ಸಂಗ್ರಹ ಚಿತ್ರ
Published On :

ಭಾಗ್ಪತ್: ನ್ಯಾಯಾಲಯಕ್ಕೆ ಹಾಜರಾದರೆ ಉತ್ತರಪ್ರದೇಶದ ಉನ್ನಾವೋ ಅತ್ಯಾಚಾರ ಸಂತ್ರಸ್ತೆಗಿಂತಲೂ ಕೆಟ್ಟ ಪರಿಸ್ಥಿತಿ ಎದುರಿಸಬೇಕಾಗುತ್ತದೆ ಎಂದು ಜಾಮೀನಿನ ಮೇಲೆ ಹೊರ ಬಂದಿರುವ ಕಾಮುಕನೊಬ್ಬ ಅತ್ಯಾಚಾರ ಸಂತ್ರಸ್ತೆಗೆ ಬೆದರಿಕೆ ಹಾಕಿರುವ ಘಟನೆ ನಡೆದಿದೆ. 

19 ವರ್ಷದ ಯುವತಿ ಮೇಲೆ ಅತ್ಯಾಚಾರವೆಸಗಿದ್ದ ಆರೋಪಿ ಜೈಲು ಪಾಲಾಗಿದ್ದ. ಇದೀಗ ಆರೋಪಿ ಜಾಮೀನಿನ ಮೇರೆಗೆ ಹೊರ ಬಂದಿದ್ದು, ಪ್ರಕರಣದ ವಿಚಾರಣೆ ಹಿನ್ನೆಲೆ ನ್ಯಾಯಾಲಯಕ್ಕೆ ಹಾಜರಾಗದಂತೆ ಅತ್ಯಾಚಾರ ಸಂತ್ರಸ್ತೆಗೆ ಬೆದರಿಕೆ ಹಾಕಿದ್ದಾನೆ. 

ಸಂತ್ರಸ್ತೆ ಮನೆಯ ಹೊರಗೆ ಬೆದರಿಕೆ ಪತ್ರವನ್ನು ಅಂಟಿಸಿರುವ ಕಾಮುಕ, ನ್ಯಾಯಾಲಯಕ್ಕೆ ಹಾಜರಾದರೆ ಉನ್ನಾವೋ ಸಂತ್ರಸ್ತೆಗಿಂತಲೂ ಕೆಟ್ಟ ಪರಿಸ್ಥಿತಿ ಎದುರಿಸಬೇಕಾಗುತ್ತದೆ ಎಂದು ಹೇಳಿದ್ದಾನೆ. 

ಇದನ್ನು ಕಂಡ ಯುವತಿ ಕುಟುಂಬಸ್ಥರು ಕೂಡಲೇ ಪೊಲೀಸರಿಗೆ ಮಾಹಿತಿ ನೀಡಿದ್ದು, ಆರೋಪಿ ಸೊಹರನ್'ನ್ನು ಪೊಲೀಸರು ಬಂಧನಕ್ಕೊಳಪಡಿಸಿದ್ದಾರೆ. 

ಬೆದರಿಕೆ ಹಿನ್ನೆಲೆಯಲ್ಲಿ ಸಂತ್ರಸ್ತೆಗೆ ಪೊಲೀಸರು ಭದ್ರತೆ ಒದಗಿಸಿದ್ದು, ಭದ್ರತೆಯೊಂದಿಗೆ ಸಂತ್ರಸ್ತ ಯುವತಿಯನ್ನು ನ್ಯಾಯಾಲಯಕ್ಕೆ ಕರೆತಂದಿದ್ದಾರೆ. ವಿಚಾರಣೆ ಪೂರ್ಣಗೊಂಡ ಬಳಿಕವೂ ಸಂತ್ರಸ್ತೆಯನ್ನು ಸಂಪೂರ್ಣ ಭದ್ರತೆಯೊಂದಿಗೆ ಆಕೆಯ ಮನೆಗೆ ಬಿಟ್ಟಿದ್ದಾರೆ. 

ದೆಹಲಿಯಲ್ಲಿ ತರಬೇತಿ ಪಡೆಯುತ್ತಿದ್ದ ವೇಳೆ ನನ್ನ ಮಗಳ ಮೇಲೆ ಆಕೆಯ ಸಹಪಾಠಿಗಳು 2018ರ ಮಾರ್ಚ್ ತಿಂಗಳಿನಲ್ಲಿ ಸಾಮೂಹಿಕ ಅತ್ಯಾಚಾರವೆಸಗಿದ್ದರು. ತಂಪು ಪಾನೀಯದಲ್ಲಿ ಮಾದಕ ವಸ್ತು ಮಿಶ್ರಣಗೊಳಿಸಿ ಕುಡಿಸಿ ಆಕೆಯ ಮೇಲೆ ಅತ್ಯಾಚಾರವೆಸಗಿದ್ದರು. ಅಲ್ಲದೆ, ಘಟನೆಯ ವಿಡಿಯೋ ಮಾಡಿಕೊಂಡು ಆಕೆಯ ಮೇಲ ಹಲವು ಬಾರಿ ಅತ್ಯಾಚಾರ ಮಾಡಿದ್ದಾರೆ. ಘಟನೆ ಬಗ್ಗೆ ಯಾರಿಗಾದರೂ ಹೇಳಿದರೆ, ವಿಡಿಯೋವನ್ನು ಸಾಮಾಜಿಕ ಜಾಲತಾಣಗಳಲ್ಲಿ ಹರಿಬಿಡುವುದಾಗಿ ಹೇಳಿ ಬೆದರಿಸಿದ್ದರು ಎಂದು ಸಂತ್ರಸ್ತೆ ತಂದೆ ಹೇಳಿದ್ದಾರೆ. 

ಅತ್ಯಾಚಾರಿಗಳ ದೌರ್ಜನ್ಯ ತೀವ್ರಗೊಂಡ ಬಳಿಕ ಮಗಳು ನಮ್ಮೊಂದಿಗೆ ಹೇಳಿಕೊಂಡಿದ್ದಳು. ಬಳಿಕ ಪೊಲೀಸರಿಗೆ ದೂರು ನೀಡಿ ಎಫ್ಐಆರ್ ದಾಖಲಿಸಲಾಗಿತ್ತು. ಪ್ರಸ್ತುತ ಪ್ರಕರಣ ರೋಹಿಣಿ ನ್ಯಾಯಾಲಯದಲ್ಲಿ ವಿಚಾರಣಾ ಹಂತದಲ್ಲಿದೆ. ಆರೋಪಿಗಳು ಜಾಮೀನ ಮೇರೆಗೆ ಹೊರ ಬಂದಿದ್ದಾರೆಂದು ತಿಳಿಸಿದ್ದಾರೆ. 

ಪ್ರಕರಣದಲ್ಲಿ ಆರೋಪಿಯಾಗಿರುವ ಸಹೊರನ್ ಎಂಬ ಆರೋಪಿ ಸಂತ್ರಸ್ತೆ ಕುಟುಂಬಕ್ಕೆ ಪದೇ ಪದೇ ಬೆದರಿಕೆಯೊಡ್ಡುತ್ತಿದ್ದಾನೆಂದು ಹೇಳಲಾಗುತ್ತಿದೆ. 

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.