ದೇಶ

ರಾಹುಲ್ ಗಾಂಧಿ ವಿರುದ್ಧ ದೂರು: ವಿಶೇಷ ಹಕ್ಕು ಸಮಿತಿಗೆ ಕಳುಹಿಸಿದ ಸ್ಪೀಕರ್ ಓಂ ಬಿರ್ಲಾ 

ತಮ್ಮನ್ನು ಭಯೋತ್ಪಾದಕಿ ಎಂದು ಕರೆದ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ವಿರುದ್ಧ ದೂರು ಸಲ್ಲಿಸಿದ್ದ ಬಿಜೆಪಿ ಸದಸ್ಯೆ ಪ್ರಾಗ್ಯ ಠಾಕೂರ್ ಅವರ ದೂರನ್ನು ವಿಶೇಷ ಹಕ್ಕು ಸಮಿತಿಗೆ ಕಳುಹಿಸಲಾಗಿದೆ ಎಂದು ಲೋಕಸಭಾಧ್ಯಕ್ಷ ಓಂ ಬಿರ್ಲಾ ತಿಳಿಸಿದ್ದಾರೆ.

ರಾಹುಲ್ ಗಾಂಧಿ ವಿರುದ್ಧ ದೂರು: ವಿಶೇಷ ಹಕ್ಕು ಸಮಿತಿಗೆ ಕಳುಹಿಸಿದ ಸ್ಪೀಕರ್ ಓಂ ಬಿರ್ಲಾ 
ರಾಹುಲ್ ಗಾಂಧಿ
Published On :

ನವದೆಹಲಿ: ತಮ್ಮನ್ನು ಭಯೋತ್ಪಾದಕಿ ಎಂದು ಕರೆದ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ವಿರುದ್ಧ ದೂರು ಸಲ್ಲಿಸಿದ್ದ ಬಿಜೆಪಿ ಸದಸ್ಯೆ ಪ್ರಾಗ್ಯ ಠಾಕೂರ್ ಅವರ ದೂರನ್ನು ವಿಶೇಷ ಹಕ್ಕು ಸಮಿತಿಗೆ ಕಳುಹಿಸಲಾಗಿದೆ ಎಂದು ಲೋಕಸಭಾಧ್ಯಕ್ಷ ಓಂ ಬಿರ್ಲಾ ತಿಳಿಸಿದ್ದಾರೆ.


ನಿನ್ನೆ ದೆಹಲಿಯಲ್ಲಿ ಸುದ್ದಿಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ ಅವರು, ವಿವಿಧ ಸದಸ್ಯರ ವಿರುದ್ಧ ಇರುವ ದೂರನ್ನು ಸಂಬಂಧಪಟ್ಟ ಸಮಿತಿಗೆ ತಾವು ಕಳುಹಿಸಿದ್ದು, ಆ ಸಮಿತಿಗಳ ಸದಸ್ಯರು ಕೇಸು ದಾಖಲಿಸಬೇಕೆ, ಬೇಡವೇ ಎಂಬ ಬಗ್ಗೆ ತೀರ್ಮಾನ ಮಾಡಲಿದೆ ಎಂದರು.


ಸಂಸತ್ತಿನ ಚಳಿಗಾಲದ ಅಧಿವೇಶನ ನಿನ್ನೆಗೆ ಮುಕ್ತಾಯವಾಗಿದ್ದು ಲೋಕಸಭೆಯಲ್ಲಿ ಕೆಲ ದಿನಗಳ ಹಿಂದೆ ಸಂಸದೆ ಪ್ರಾಗ್ಯ ಠಾಕೂರ್ ಮಹಾತ್ಮಾ ಗಾಂಧೀಜಿಯವರ ಹತ್ಯೆ ಮಾಡಿದ್ದ ನಾಥೂರಾಮ್ ಗೋಡ್ಸೆಯನ್ನು ಹೊಗಳುವ ಮೂಲಕ ತೀವ್ರ ವಿವಾದವೆಬ್ಬಿಸಿದ್ದರು. ನಂತರ ರಾಹುಲ್ ಗಾಂಧಿ ಟ್ವಿಟ್ಟರ್ ನಲ್ಲಿ ಪ್ರಾಗ್ಯ ಠಾಕೂರ್ ಅವರನ್ನು ಭಯೋತ್ಪಾದಕಿ ಎಂದು ಕರೆದಿದ್ದರು.


ಮಾಲೆಂಗಾವ್ ಸ್ಫೋಟ ಪ್ರಕರಣದಲ್ಲಿ ಆರೋಪಿಯಾಗಿರುವ ಸಾಧ್ವಿ ಪ್ರಾಗ್ಯ ಠಾಕೂರ್ ನಂತರ ಲೋಕಸಭೆಯಲ್ಲಿ ತಮ್ಮ ಹೇಳಿಕೆಗೆ ಕ್ಷಮೆ ಕೇಳಿದ್ದರು. ನಂತರ ರಾಹುಲ್ ಗಾಂಧಿ ವಿರುದ್ಧ ವಿಶೇಷ ಹಕ್ಕು ಉಲ್ಲಂಘನೆ ದೂರನ್ನು ನೀಡಿದ್ದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.