ಪೌರತ್ವ ತಿದ್ದುಪಡಿ ವಿರೋಧಿಸುವ ಹಕ್ಕು ರಾಜ್ಯಸರ್ಕಾರಗಳಿಗೆ ಇಲ್ಲ: ಗೃಹ ಸಚಿವಾಲಯ
ತೀವ್ರ ವಿವಾದಕ್ಕೆ ಕಾರಣವಾಗಿರುವ ಪೌರತ್ವ ತಿದ್ದುಪಡಿ ಕಾಯ್ದೆ ಜಾರಿಗೆ ಹಲವು ರಾಜ್ಯಗಳು ವಿರೋಧ ವ್ಯಕ್ತಪಡಿಸಿರುವಂತೆಯೇ ಇದಕ್ಕೆ ತಿರುಗೇಟು ನೀಡಿರುವ ಕೇಂದ್ರ ಸರ್ಕಾರ ಪೌರತ್ವ ತಿದ್ದುಪಡಿ ವಿರೋಧಿಸುವ ಹಕ್ಕು ರಾಜ್ಯಸರ್ಕಾರಗಳಿಗೆ ಇಲ್ಲ ಎಂದು ಹೇಳಿದೆ.

ನವದೆಹಲಿ: ತೀವ್ರ ವಿವಾದಕ್ಕೆ ಕಾರಣವಾಗಿರುವ ಪೌರತ್ವ ತಿದ್ದುಪಡಿ ಕಾಯ್ದೆ ಜಾರಿಗೆ ಹಲವು ರಾಜ್ಯಗಳು ವಿರೋಧ ವ್ಯಕ್ತಪಡಿಸಿರುವಂತೆಯೇ ಇದಕ್ಕೆ ತಿರುಗೇಟು ನೀಡಿರುವ ಕೇಂದ್ರ ಸರ್ಕಾರ ಪೌರತ್ವ ತಿದ್ದುಪಡಿ ವಿರೋಧಿಸುವ ಹಕ್ಕು ರಾಜ್ಯಸರ್ಕಾರಗಳಿಗೆ ಇಲ್ಲ ಎಂದು ಹೇಳಿದೆ.
ಈ ಕುರಿತಂತೆ ಕೇಂದ್ರ ಗೃಹ ಸಚಿವಾಲಯ ಮಾಹಿತಿ ನೀಡಿದ್ದು, ರಾಜ್ಯ ಸರ್ಕಾರಗಳು ಈ ಕಾಯ್ದೆಯನ್ನು ಜಾರಿಗೊಳಿಸಲು ನಿರಾಕರಿಸುವಂತಿಲ್ಲ ಎಂದು ಹೇಳಲಾಗಿದೆ. 'ರಾಜ್ಯಗಳು ಈ ಕಾನೂನನ್ನು ಜಾರಿಗೊಳಿಸುವುದರಿಂದ ಹಿಂದೆ ಸರೆಯುವ ಪ್ರಶ್ನೆಯೇ ಇಲ್ಲ. ರಾಜ್ಯ ಸರ್ಕಾರಗಳಿಗೆ ಅಂತಹ ಯಾವುದೇ ಅಧಿಕಾರವಿಲ್ಲ ಎಂದು ಹೇಳಿದೆ.
ಅಂತೆಯೇ ಇದೇ ವಿಚಾರವಾಗಿ ಪ್ರತಿಕ್ರಿಯೆ ನೀಡಿರುವ ಸಂವಿಧಾನ ತಜ್ಞರು, ರಾಜ್ಯಗಳಿಗೆ ಅಥವಾ ರಾಜ್ಯಸರ್ಕಾರಗಳಿಗೆ ಸಿಎಬಿಗೆ ಸಂಬಂಧಿಸಿದಂತೆ ನಿರ್ಣಾಯಕ ಪಾತ್ರವಿಲ್ಲ. ಪಂಜಾಬ್, ಕೇರಳ ಮತ್ತು ಪಶ್ಚಿಮ ಬಂಗಾಳ ಸಿಎಂಗಳು ತೆಗೆದುಕೊಂಡಿರುವ ನಿರ್ಧಾರಗಳಿಗೆ ಕಾನೂನಾತ್ಮಕವಾಗಿ ಮಾನ್ಯತೆ ಇಲ್ಲ ಎಂದು ಹೇಳಿದ್ದಾರೆ.
ಇನ್ನು ಈ ವಿವಾದಿತ ಕಾಯ್ದೆಯನ್ನು ಪ್ರಶ್ನಿಸಿ ಕಾಂಗ್ರೆಸ್ ಪಕ್ಷ ಸುಪ್ರೀಂ ಕೋರ್ಟ್ ಮೊರೆಹೋಗಿದೆ. ಈ ಕಾನೂನು ಸಮಾನತೆಯ ಅಧಿಕಾರವನ್ನು ಮೊಟಕುಗೊಳಿಸಲಿದೆ ಎಂದು ಪಕ್ಷ ತನ್ನ ಅರ್ಜಿಯಲ್ಲಿ ವಾದಿಸಿದೆ.
Related Article
ಪೌರತ್ವ ಕಾಯ್ದೆ ವಿರುದ್ಧ ಪ್ರತಿಭಟನೆ: ಗುವಾಹಟಿಯಿಂದ ಪ್ರಯಾಣಿಕರಿಗೆ ವಿಶೇಷ ರೈಲು
'ಅಸಂವಿಧಾನಿಕ ಕಾಯ್ದೆ': ಮಧ್ಯ ಪ್ರದೇಶ, ಛತ್ತೀಸ್ ಗಢದಲ್ಲೂ ಪೌರತ್ವ ಮಸೂದೆಗೆ ವಿರೋಧ
ಪೌರತ್ವ ಕಾಯ್ದೆ ವಿರುದ್ಧ ಸಾಮೂಹಿಕ ಆಂದೋಲನಕ್ಕೆ ಮಮತಾ ಕರೆ: ಪ.ಬಂಗಾಳದಲ್ಲಿ ಹಿಂಸಾಚಾರಕ್ಕೆ ತಿರುಗಿದ ಪ್ರತಿಭಟನೆ
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


