ದೇಶ

ಪತಿ ಆತ್ಮಹತ್ಯೆ: ಸುದ್ದಿ ಬಳಿಕ 5 ವರ್ಷದ ಮಗಳ ಕೊಂದು, ತಾನೂ ಆತ್ಮಹತ್ಯೆಗೆ ಶರಣಾದ ಮಹಿಳೆ

ಪತಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆಂಬ ಸುದ್ದಿ ಕೇಳಿದ ಬಳಿಕ ನೊಂದ ಮಹಿಳೆಯರು ತನ್ನ 5 ವರ್ಷದ ಮಗಳನ್ನು ಕೊಂದು, ತಾನೂ ಕೂಡ ಆತ್ಮಹತ್ಯೆಗೆ ಶರಣಾಗಿರುವ ಘಟನೆ ನೊಯ್ಡಾ ಸೆಕ್ಟರ್ 128ನಲ್ಲಿ ಶುಕ್ರವಾರ ಸಂಜೆ ನಡೆದಿದೆ.

ಪತಿ ಆತ್ಮಹತ್ಯೆ: ಸುದ್ದಿ ಬಳಿಕ 5 ವರ್ಷದ ಮಗಳ ಕೊಂದು, ತಾನೂ ಆತ್ಮಹತ್ಯೆಗೆ ಶರಣಾದ ಮಹಿಳೆ
ಸಂಗ್ರಹ ಚಿತ್ರ
Published On :

ನವದೆಹಲಿ: ಪತಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆಂಬ ಸುದ್ದಿ ಕೇಳಿದ ಬಳಿಕ ನೊಂದ ಮಹಿಳೆಯರು ತನ್ನ 5 ವರ್ಷದ ಮಗಳನ್ನು ಕೊಂದು, ತಾನೂ ಕೂಡ ಆತ್ಮಹತ್ಯೆಗೆ ಶರಣಾಗಿರುವ ಘಟನೆ ನೊಯ್ಡಾ ಸೆಕ್ಟರ್ 128ನಲ್ಲಿ ಶುಕ್ರವಾರ ಸಂಜೆ ನಡೆದಿದೆ. 

ಖಾಸಗಿ ಕಂಪನಿಯಲ್ಲಿ ಕಾರ್ಯನಿರ್ವಹಿಸುತ್ತಿದ್ದ ಚೆನ್ನೈ ಮೂಲದ ಭರತ್ (33) ಎಂಬುವವರು ದೆಹಲಿಯ ಮೆಟ್ರೋ ಹಳಿಗೆ ಹಾರಿ ಬಿದ್ದು ಆತ್ಮಹತ್ಯೆ ಮಾಡಿಕೊಂಡಿದ್ದರು. ಕೂಡಲೇ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿತ್ತಾದರೂ, ಭರತ್ ಸಾವನ್ನಪ್ಪಿದ್ದಾರೆಂದು ವೈದ್ಯರು ಘೋಷಣೆ  ಮಾಡಿದ್ದರು. 

ಘಟನೆ ಬಳಿಕ ಆಸ್ಪತ್ರೆಗೆ ಭರತ್ ಅವರ ಪತ್ನಿಯನ್ನು ಕರೆಸಲಾಗಿತ್ತು. ಪತಿಯನ್ನು ಗುರ್ತಿಸಿದ ಬಳಿಕ ಮನೆಗೆ ತೆರಳಿದ ಮಹಿಳೆ ತನ್ನ 5 ವರ್ಷದ ಪುತ್ರಿಯನ್ನು ಕೊಂದು, ತಾನೂ ಕೂಡ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆಂದು ಪೊಲೀಸರು ಮಾಹಿತಿ ನೀಡಿದ್ದಾರೆ. 

ದಂಪತಿಗಳು ಆರ್ಥಿಕ ಸಂಕಷ್ಟ ಎದುರಿಸುತ್ತಿದ್ದರು. ಈ ಹಿನ್ನೆಲೆಯಲ್ಲಿ ಆತ್ಮಹತ್ಯೆಗೆ ಶರಣಾಗಿರಬಹುದು ಎಂದು ಮಹಿಳೆಯ ಸಹೋದರ ಹೇಳಿದ್ದಾರೆ. 

ಪ್ರಸ್ತುತ ಮೃತದೇಹಗಳನ್ನು ಮರಣೋತ್ತರ ಪರೀಕ್ಷೆಗೆ ಕಳುಹಿಸಲಾಗಿದ್ದು, ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ತನಿಖೆ ಆರಂಭಿಸಿದ್ದಾರೆ. 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.