ನಿಜವಾದ ಭಾರತೀಯ ನಾಗರಿಕರನ್ನು ರಕ್ಷಿಸುವ ಹೊಣೆ ನಮ್ಮದು: ಸಿಎಂ ಸರ್ಬಾನಂದ ಸೋನೋವಾಲ್
ವಿವಾದಕ್ಕೆ ಕಾರಣವಾಗಿರುವ ಪೌರತ್ವ ತಿದ್ದುಪಡಿ ಮಸೂದೆ ಕುರಿತು ಈಶಾನ್ಯ ಭಾರತದಲ್ಲಿ ಪ್ರತಿಭಟನೆ ಮತ್ತು ಹಿಂಸಾಚಾರ ಉಲ್ಬಣಿಸಿರುವಂತೆಯೇ ಈ ಸಂಬಂಧ ಟ್ವೀಟ್ ಮಾಡಿದ್ದಾರೆ.

ಗುವಾಹತಿ: ವಿವಾದಕ್ಕೆ ಕಾರಣವಾಗಿರುವ ಪೌರತ್ವ ತಿದ್ದುಪಡಿ ಮಸೂದೆ ಕುರಿತು ಈಶಾನ್ಯ ಭಾರತದಲ್ಲಿ ಪ್ರತಿಭಟನೆ ಮತ್ತು ಹಿಂಸಾಚಾರ ಉಲ್ಬಣಿಸಿರುವಂತೆಯೇ ಈ ಸಂಬಂಧ ಟ್ವೀಟ್ ಮಾಡಿದ್ದಾರೆ.
ಅಸ್ಸಾಂನಲ್ಲಿ ಪೌರತ್ವ ತಿದ್ದುಪಡಿ ಮಸೂದೆ ವಿರೋಧಿಸಿ ನಡೆಯುತ್ತಿರುವ ಪ್ರತಿಭಟನೆ ಮತ್ತು ಹಿಂಸಾಚಾರ ಮುಂದುವರೆದಿರುವಂತೆಯೇ ಇತ್ತ ಸಿಎಂ ಸರ್ಬಾನಂದ ಸೋನೋವಾಲ್ ಅವರು, 'ನಿಜವಾದ ಭಾರತೀಯ ನಾಗರಿಕರನ್ನು ರಕ್ಷಿಸುವ ಹೊಣೆ ನಮ್ಮದು ಎಂದು ಹೇಳಿದ್ದಾರೆ. ಅಲ್ಲದೆ ನೈಜ ಅಸ್ಸಾಂ ನಾಗರಿಕರ ಹಕ್ಕುಗಳಿಗೆ ಮಸೂದೆಯಿಂದ ಯಾವುದೇ ಧಕ್ಕೆ ಇಲ್ಲ. ಆದರೆ ಮಸೂದೆ ಕುರಿತು ಕೆಲವರು ತಪ್ಪು ಮಾಹಿತಿ ನೀಡುತ್ತಿದ್ದಾರೆ. ಆ ಮೂಲಕ ಹಿಂಸಾಚಾರಕ್ಕೆ ಪ್ರಚೋದಿಸುತ್ತಿದ್ದಾರೆ. ಇಂತಹವರಿಂದ ಶಾಂತಿಭಂಗವಾಗುತ್ತಿದ್ದು, ಅಂತಹವರ ವಿರುದ್ಧ ಸರ್ಕಾರ ಕಠಿಣ ಕ್ರಮ ಕೈಗೊಳ್ಳಲಿದೆ ಎಂದು ಟ್ವೀಟ್ ಮಾಡಿದ್ದಾರೆ.
ಅಸ್ಸಾಂನಲ್ಲಿ ಮುಂದುವರೆದ ಪ್ರತಿಭಟನೆ
ಇನ್ನು ಪೌರತ್ವ (ತಿದ್ದುಪಡಿ) ಕಾಯ್ದೆಯನ್ನು ವಿರೋಧಿಸಿ ಈಶಾನ್ಯ ಭಾರತದ ರಾಜ್ಯಗಳಲ್ಲಿ ಶನಿವಾರವೂ ಪ್ರತಿಭಟನೆ ಮುಂದುವರಿದಿದೆ. ಹಲವೆಡೆ ಹಿಂಸಾಚಾರ ನಡೆದಿದ್ದು, ಅಸ್ಸಾಂನಲ್ಲಿ ಇಂಧನ ಟ್ಯಾಂಕರ್ಗೆ ಬೆಂಕಿ ಹಚ್ಚಲಾಗಿದ್ದು, ಈ ವೇಳೆ ಚಾಲಕ ಮೃತಪಟ್ಟಿದ್ದಾನೆ. ಇಂಟರ್ನೆಟ್ ಸೇವೆ ಸ್ಥಗಿತವನ್ನು ಸೋಮವಾರದವರೆಗೆ ವಿಸ್ತರಿಸಲಾಗಿದೆ. ಇನ್ನು ಮೇಘಾಲಯದಲ್ಲಿ ರಾಜಭವನಕ್ಕೆ ಮುತ್ತಿಗೆ ಹಾಕಲು ಪ್ರತಿಭಟನಕಾರರು ಯತ್ನಿಸಿದ್ದಾರೆ. ಐದು ರೈಲುಗಳು, 15 ಬಸ್ಗಳಿಗೆ ಬೆಂಕಿ ಹಚ್ಚಲಾಗಿದ್ದು, ರಾಜ್ಯದ ಹಲವೆಡೆ ಹೆದ್ದಾರಿ ತಡೆದು ಪ್ರತಿಭಟನೆ ನಡೆಸಿದ್ದಾರೆ. ಡಿಸೆಂಬರ್ 19ರಂದು ದೇಶದಾದ್ಯಂತ ಪ್ರತಿಭಟನೆ ನಡೆಸಲು 60 ಸಂಘಟನೆಗಳು ಕರೆ ನೀಡಿವೆ.
Related Article
ಪೌರತ್ವ ಮಸೂದೆ: ಈಶಾನ್ಯದಲ್ಲಿ ಮುಂದುವರೆದ ಪ್ರತಿಭಟನೆ, ಗುವಾಹತಿ, ದಿಬ್ರೂಗಢ್ ನಲ್ಲಿ ಕರ್ಫ್ಯೂ ಸಡಿಲಿಕೆ
ಪೌರತ್ವ ಕಾಯ್ದೆ ವಿರುದ್ಧ ಪಶ್ಚಿಮ ಬಂಗಾಳದಲ್ಲಿ ಭುಗಿಲೆದ್ದ ಆಕ್ರೋಶ, ಹಲವು ರೈಲು, ಬಸ್ಸಿಗೆ ಬೆಂಕಿ
ಮೋದಿ ಸರ್ಕಾರ ಒಡೆದು ಆಳುವ ನೀತಿ ಅನುಸರಿಸುತ್ತಿದೆ: ಬಿಜೆಪಿ ವಿರುದ್ಧ ಸೋನಿಯಾ ವಾಗ್ದಾಳಿ
ಈಶಾನ್ಯ ರಾಜ್ಯಗಳಲ್ಲಿ ಭುಗಿಲೆದ್ದ ಹಿಂಸಾಚಾರ: ಸುಳ್ಳು ಸುದ್ದಿಗಳಿಗೆ ಕಿವಿಗೊಡಬೇಡಿ- ಭಾರತೀಯ ಸೇನೆ
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


