ರಾಹುಲ್ 'ರೇಪ್ ಇನ್ ಇಂಡಿಯಾ' ಹೇಳಿಕೆ: ವರದಿ ಕೇಳಿದ ಚುನಾವಣಾ ಆಯೋಗ
ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿಯವರ ರೇಪ್ ಇನ್ ಇಂಡಿಯಾ ಹೇಳಿಕೆ ಕುರಿತಂತೆ ವಾಸ್ತವಿಕ ವರದಿ ಸಲ್ಲಿಸುವಂತೆ ಜಾರ್ಖಾಂಡ್ ಚುನಾವಣಾ ಆಯೋಗಕ್ಕೆ ಕೇಂದ್ರೀಯ ಚುನಾವಣಾ ಆಯೋಗ ಸೂಚನೆ ನೀಡಿದೆ.

ನವದೆಹಲಿ: ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿಯವರ ರೇಪ್ ಇನ್ ಇಂಡಿಯಾ ಹೇಳಿಕೆ ಕುರಿತಂತೆ ವಾಸ್ತವಿಕ ವರದಿ ಸಲ್ಲಿಸುವಂತೆ ಜಾರ್ಖಾಂಡ್ ಚುನಾವಣಾ ಆಯೋಗಕ್ಕೆ ಕೇಂದ್ರೀಯ ಚುನಾವಣಾ ಆಯೋಗ ಸೂಚನೆ ನೀಡಿದೆ.
ಕೆಲ ದಿನಗಳ ಹಿಂದಷ್ಟೇ ಚುನಾವಣಾ ಪ್ರಚಾರ ಹಿನ್ನಲೆಯಲ್ಲಿ ಜಾರ್ಖಾಂಡ್ ನಲ್ಲಿ ಮಾತನಾಡಿದ್ದ ರಾಹುಲ್ ಗಾಂಧಿಯವರು ಮೇಕ್ ಇನ್ ಇಂಡಿಯಾ ಅಲ್ಲ, ರೇಪ್ ಅನ್ ಇಂಡಿಯಾ ಎಂದು ಮೋದಿ ಸರ್ಕಾರದ ವಿರುದ್ಧ ತೀವ್ರವಾಗಿ ವಾಗ್ದಾಳಿ ನಡೆಸಿದ್ದರು.
ರಾಹುಲ್ ಹೇಳಿಕೆ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕು. ರಾಹುಲ್ ಅವರು ಮಹಿಳೆಯರ ಮೇಲಿನ ದೌರ್ಜನ್ಯ ಪ್ರಕರಣಗಳನ್ನು ತಮ್ಮ ರಾಜಕೀಯ ಗಾಳಕ್ಕೆ ಬಳಸಿಕೊಳ್ಳುತ್ತಿದ್ದಾರೆಂದು ಸಚಿವೆ ಸ್ಮೃತಿ ಇರಾನಿಯವರು ಚುನಾವಣಾ ಆಯೋಗಕ್ಕೆ ಆಗ್ರಹಿಸಿದ್ದರು.
ಇದನ್ನು ಗಂಭೀರವಾಗಿ ಪರಿಗಣಿಸಿರುವ ಕೇಂದ್ರ ಚುನಾವಣಾ ಆಯೋಗ, ಹೇಳಿಕೆ ಸಂಬಂಧ ಶೀಘ್ರಗತಿಯಲ್ಲಿ ವಾಸ್ತವಿಕ ವರದಿ ಸಲ್ಲಿಸುವಂತೆ ಜಾರ್ಖಾಂಡ್ ಚುನಾವಣಾ ಆಯೋಗಕ್ಕೆ ಸೂಚನೆ ನೀಡಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


