ಜಾಮಿಯಾ ಹಿಂಸಾಚಾರ: 10 ಕ್ರಿಮಿನಲ್ ಗಳ ಬಂಧನ, ಯಾರೂ ವಿದ್ಯಾರ್ಥಿಗಳೇ ಅಲ್ಲ!
ಜಾಮಿಯಾ ಮಿಲಿಯಾ ಇಸ್ಲಾಮಿಯಾ ವಿದ್ಯಾರ್ಥಿಗಳು ಹಾಗೂ ಪೊಲೀಸರ ನಡುವಣದ ಹಿಂಸಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಅಪರಾಧ ಹಿನ್ನೆಲೆಯುಳ್ಳ 10 ಮಂದಿಯನ್ನು ಬಂಧಿಸಲಾಗಿದೆ.

ನವದೆಹಲಿ: ಜಾಮಿಯಾ ಮಿಲಿಯಾ ಇಸ್ಲಾಮಿಯಾ ವಿದ್ಯಾರ್ಥಿಗಳು ಹಾಗೂ ಪೊಲೀಸರ ನಡುವಣದ ಹಿಂಸಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಅಪರಾಧ ಹಿನ್ನೆಲೆಯುಳ್ಳ 10 ಮಂದಿಯನ್ನು ಬಂಧಿಸಲಾಗಿದೆ.
ವಿಶ್ವವಿದ್ಯಾಲಯದ ಯಾವುದೇ ವಿದ್ಯಾರ್ಥಿಯನ್ನು ಬಂಧಿಸಿಲ್ಲ, ಅವರಿಗೆ ಕ್ಲೀನ್ ಚೀಟಿ ಕೂಡಾ ನೀಡಿಲ್ಲ. ಬಂಧಿತರು ವಿಶ್ವವಿದ್ಯಾಲಯದ ಅಜು ಬಾಜಿನ ಜಾಮಿಯಾ ಹಾಗೂ ಒಕ್ಲಾ ಪ್ರದೇಶದವರು ಎಂದು ಪೊಲೀಸರು ತಿಳಿಸಿದ್ದಾರೆ.
ವಿವಾದಾತ್ಮಕ ನೂತನ ಪೌರತ್ವ ( ತಿದ್ದುಪಡಿ) ಕಾಯ್ದೆ ವಿರೋಧಿಸಿ ಭಾನುವಾರ ಸಂಜೆ ಜಾಮಿಯಾ ವಿದ್ಯಾರ್ಥಿಗಳು ನಡೆಸುತ್ತಿದ್ದ ಶಾಂತಿಯುತ ಪ್ರತಿಭಟನೆ ಹಿಂಸಾಚಾರಕ್ಕೆ ತಿರುಗಿತ್ತು. ವಿದ್ಯಾರ್ಥಿಗಳು ಹಾಗೂ ಪೊಲೀಸರ ನಡುವೆ ಘರ್ಷಣೆ ಉಂಟಾಗಿ 3 ಸರ್ಕಾರಿ ಬಸ್ ಗಳು, ಟ್ರಕ್ ವೊಂದಕ್ಕೆ ಬೆಂಕಿ ಹಚ್ಚಲಾಗಿತ್ತು.
ಅನುಮತಿ ಪಡೆಯದೆ ವಿಶ್ವವಿದ್ಯಾಲಯ ಆವರಣ ಪ್ರವೇಶಿಸಿದ ಪೊಲೀಸರು 100 ವಿದ್ಯಾರ್ಥಿಗಳನ್ನು ಬಂಧಿಸಿದ್ದರು. ನಂತರ ಜಾಮಿಯಾ, ದೆಹಲಿ ವಿಶ್ವವಿದ್ಯಾಲಯ ಹಾಗೂ ಜೆಎನ್ ಯು ವಿಶ್ವವಿದ್ಯಾಲಯ ವಿದ್ಯಾರ್ಥಿಗಳು ದೆಹಲಿ ಪೊಲೀಸ್ ಕೇಂದ್ರ ಕಚೇರಿಯಲ್ಲಿ ಬೃಹತ್ ಪ್ರತಿಭಟನೆ ನಡೆಸಿದ ನಂತರ ಸೋಮವಾರ ಮಧ್ಯಾಹ್ನ ಬಂಧಿಸಲಾಗಿದ್ದ ವಿದ್ಯಾರ್ಥಿಗಳನ್ನು ಬಿಡುಗಡೆ ಮಾಡಲಾಗಿತ್ತು.
ಪೌರತ್ವ ತಿದ್ದುಪಡಿ ಕಾಯ್ದೆ ವಿರೋಧಿಸಿ ಶಾಂತಿಯುತವಾಗಿ ನಡೆಯುತ್ತಿದ್ದ ಪ್ರತಿಭಟನೆ ಕೆಲವರ ಪಿತೂರಿಯಿಂದಾಗಿ ಹಿಂಸಾಚಾರಕ್ಕೆ ತಿರುಗಿದ್ದಾಗಿ ವಿದ್ಯಾರ್ಥಿಗಳು ಹೇಳಿದ್ದಾರೆ. ಪ್ರತಿಭಟನೆ ಹಿಂಸಾಚಾರಕ್ಕೆ ತಿರುಗಲು ಕೆಲ ಸ್ಥಳೀಯರೇ ಕಾರಣ ಎಂದು ಕೆಲ ಸಾರ್ವಜನಿಕ ಗುಂಪು ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದಾಗಿ ಜಾಮಿಯಾ ಉಪ ಕುಲಪತಿ ನಜ್ಮಾ ಅಖ್ತಾ ಹೇಳಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


