'ರಾಹುಲ್ ಗಾಂಧಿ ಪಾಕಿಸ್ತಾನ ಏಜೆಂಟ್: ಕಾಂಗ್ರೆಸ್ ವಿರೋಧಿ ಪಕ್ಷ'
ರಾಷ್ಟ್ರೀಯ ಪೌರತ್ವ ಕಾಯ್ದೆ ವಿಚಾರದಲ್ಲಿ ಜನರ ದಾರಿ ತಪ್ಪಿಸುತ್ತಿರುವ ಕೆಲಸವನ್ನು ಮಾಡಲಾಗುತ್ತಿದೆ. ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರ ಮೂಲ ಪಾಕಿಸ್ತಾನವಾಗಿದ್ದು, ಅವರು ಪಾಕ್ ಏಜೆಂಟ್‍ರಾಗಿದ್ದಾರೆ

ಶಿವಮೊಗ್ಗ: ರಾಷ್ಟ್ರೀಯ ಪೌರತ್ವ ಕಾಯ್ದೆ ವಿಚಾರದಲ್ಲಿ ಜನರ ದಾರಿ ತಪ್ಪಿಸುತ್ತಿರುವ ಕೆಲಸವನ್ನು ಮಾಡಲಾಗುತ್ತಿದೆ. ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರ ಮೂಲ ಪಾಕಿಸ್ತಾನವಾಗಿದ್ದು, ಅವರು ಪಾಕ್ ಏಜೆಂಟ್‍ರಾಗಿದ್ದಾರೆ ಎಂದು ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಕಿಡಿಕಾರಿದ್ದಾರೆ.
ವಿಜಯಪುರದಲ್ಲಿ ಮಾತನಾಡಿದ ಅವರು, ರಾಹುಲ್ ಗಾಂಧಿ ಹಾಗೂ ಕಾಂಗ್ರೆಸ್ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದರು. ಪಾಕಿಸ್ತಾನ, ಅಫ್ಘಾನಿಸ್ತಾನ ಹಾಗೂ ಬಾಂಗ್ಲಾದೇಶಗಳಲ್ಲಿ ಹಿಂದೂ ಹೆಣ್ಣು ಮಕ್ಕಳ ಮೇಲೆ ದೌರ್ಜನ್ಯ ನಡೆಯುತ್ತಿದೆ. ಅಂತಹವರಿಗೆ ಆಶ್ರಯ ನೀಡಲು ಪ್ರಧಾನಿಗಳು, ಗೃಹ ಸಚಿವ ಅಮಿತ್ ಶಾ ಚಿಂತನೆ ನಡೆಸಿದ್ದಾರೆ.
ಆದರೆ ಕಾಂಗ್ರೆಸ್ ಪಕ್ಷ ಹಾಗೂ ಕೆಲ ಜಾತ್ಯಾತೀತ ಎನ್ನುವ ಕೋಮುವಾದಿ ಪಕ್ಷಗಳು ಒಂದು ಕೋಮಿನ ಜನರನ್ನು ಒಕ್ಕಲೆಬ್ಬಿಸುತ್ತಿದ್ದಾರೆ ಎಂದು ಆರೋಪಿಸಿದ್ದಾರೆ.
ಇನ್ನೂ ಶಿವಮೊಗ್ಗದಲ್ಲಿ ಮಾತನಾಡಿದ ನಳಿನ್ ಕುಮಾರ್ ಕಟೀಲ್, ಕಾಂಗ್ರೆಸ್ ದೊಂಬಿಗಳನ್ನು ಸೃಷ್ಟಿಸುತ್ತಿದೆ, ಕಾಶ್ಮೀರ, ಅಯೋಧ್ಯಾ ವಿಷಯಗಳನ್ನು ತೆಗೆದುಕೊಂಡು ಕಾಂಗ್ರೆಸ್ ದೇಶದಲ್ಲಿ ಗಲಬೆ ಸೃಷ್ಟಿಸುತ್ತಿದೆ, ಕಾಂಗ್ರೆಸ್ ದೇಶ ವಿರೋಧಿ ಪಕ್ಷವಾಗಿ ಬೆಳೆಯತ್ತಿದೆ ಎಂದು ಲೇವಡಿ ಮಾಡಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


