ಪೌರತ್ವ ತಿದ್ದುಪಡಿ ಮಸೂದೆಯಿಂದ ಭಾರತದ ಮುಸ್ಲಿಮರಿಗೆ ತೊಂದರೆಯಿಲ್ಲ: ಅಹಮದ್ ಬುಖಾರಿ
ಪೌರತ್ವ ತಿದ್ದುಪಡಿ ಮಸೂದೆಯಿಂದ ಪಾಕಿಸ್ತಾನ, ಅಫ್ಗಾನಿಸ್ತಾನ ಮತ್ತು ಬಾಂಗ್ಲಾದೇಶದಿಂದ ಬಂದಿರುವ ನಿರಾಶ್ರಿತರ ಮುಸ್ಲಿಮರಿಗೆ ತೊಂದರೆಯಾಗುತ್ತದೆಯೇ ಹೊರತು, ಭಾರತದ ಮುಸ್ಲಿಮರಿಗೆ ಯಾವುದೇ ರೀತಿಯ ತೊಂದರೆ ಇಲ್ಲ ಎಂದು ಜಾಮಿಯಾ ಮಸೀದಿಯ ಶಾಹಿ ಇಮಾಮ್ ಸೈಯದ್ ಅಹಮದ್ ಬುಖಾರಿ ಹೇಳಿದ್ದಾರೆ.

ನವದೆಹಲಿ: ಪೌರತ್ವ ತಿದ್ದುಪಡಿ ಮಸೂದೆಯಿಂದ ಪಾಕಿಸ್ತಾನ, ಅಫ್ಗಾನಿಸ್ತಾನ ಮತ್ತು ಬಾಂಗ್ಲಾದೇಶದಿಂದ ಬಂದಿರುವ ನಿರಾಶ್ರಿತರ ಮುಸ್ಲಿಮರಿಗೆ ತೊಂದರೆಯಾಗುತ್ತದೆಯೇ ಹೊರತು, ಭಾರತದ ಮುಸ್ಲಿಮರಿಗೆ ಯಾವುದೇ ರೀತಿಯ ತೊಂದರೆ ಇಲ್ಲ ಎಂದು ಜಾಮಿಯಾ ಮಸೀದಿಯ ಶಾಹಿ ಇಮಾಮ್ ಸೈಯದ್ ಅಹಮದ್ ಬುಖಾರಿ ಹೇಳಿದ್ದಾರೆ.
ಪೌರತ್ವ ತಿದ್ದುಪಡಿ ಮಸೂದೆ ವಿರೋಧಿಸಿ ದೇಶಾದ್ಯಂತ ಪ್ರತಿಭಟನೆ ತೀವ್ರಗೊಳ್ಳುತ್ತಿರುವ ಹೊತ್ತಿನಲ್ಲೇ ಈ ಕುರಿತಂತೆ ಜಾಮಿಯಾ ಮಸೀದಿಯ ಶಾಹಿ ಇಮಾಮ್ ಸೈಯದ್ ಅಹಮದ್ ಬುಖಾರಿ ಅವರು ಮಸೂದೆ ಕುರಿತು ಸ್ಪಷ್ಟನೆ ನೀಡಿದ್ದಾರೆ. ಕಾರ್ಯಕ್ರಮವೊಂದರಲ್ಲಿ ಈ ಕುರಿತು ಮಾತನಾಡಿದ ಅವರು, 'ಪೌರತ್ವ (ತಿದ್ದುಪಡಿ) ಕಾಯ್ದೆಯಿಂದ ಪಾಕಿಸ್ತಾನ, ಅಫ್ಗಾನಿಸ್ತಾನ ಮತ್ತು ಬಾಂಗ್ಲಾದೇಶದಿಂದ ಬಂದಿರುವ ನಿರಾಶ್ರಿತರ ಮುಸ್ಲಿಮರಿಗೆ ತೊಂದರೆಯಾಗುತ್ತದೆಯೇ ವಿನಃ ಭಾರತದಲ್ಲಿರುವ ಮುಸ್ಲಿಮರಿಗಲ್ಲ. ರಾಷ್ಟ್ರೀಯ ಪೌರತ್ವ ನೋಂದಣಿಗೂ (ಎನ್‌ಆರ್‌ಸಿ), ಪೌರತ್ವ (ತಿದ್ದುಪಡಿ) ಕಾಯ್ದೆಗೂ (ಸಿಎಎ) ವ್ಯತ್ಯಾಸವಿದೆ. ಸಿಎಎ ಈಗಾಗಲೇ ಕಾಯ್ದೆಯಾಗಿದೆ. ಆದರೆ, ಎನ್‌ಆರ್‌ಸಿ ಕೇವಲ ಘೋಷಣೆಯಾಗಿದೆಯೇ ಹೊರತು ಇನ್ನೂ ಕಾಯ್ದೆಯಾಗಿಲ್ಲ ಎಂದು ತಿಳಿಸಿದ್ದಾರೆ.
ಅಂತೆಯೇ 'ಪ್ರತಿಭಟನೆ ಎನ್ನುವುದು ಭಾರತೀಯರ ಹಕ್ಕು. ಇದನ್ನು ತಡೆಯಲು ಯಾರಿಂದಲೂ ಸಾಧ್ಯವಿಲ್ಲ. ಅದಾಗ್ಯೂ, ಪ್ರತಿಭಟನೆಯ ಮಿತಿಯನ್ನು ತಿಳಿದಿರಬೇಕು. ನಮ್ಮ ಭಾವನೆಗಳನ್ನು ನಿಯಂತ್ರಣದಲ್ಲಿಟ್ಟುಕೊಳ್ಳುವುದು ಬಹಳ ಮುಖ್ಯ' ಎಂದು ಅಹಮದ್ ಬುಖಾರಿ ಹೇಳಿದ್ದಾರೆ.
ಇತ್ತ ದೆಹಲಿಯ ಸೀಲಾಂಪುರದಲ್ಲಿ ಮಂಗಳವಾರ ಸಂಜೆ ನಡೆದ ಪ್ರತಿಭಟನೆ ಹಿಂಸೆಗೆ ತಿರುಗಿದ್ದು, 12 ಪೊಲೀಸರು ಸೇರಿ 21 ಮಂದಿ ಗಾಯಗೊಂಡಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


