ಇವೆಲ್ಲದರಿಂದ ಸನಾಳನ್ನು ಹೊರಗಿಡಿ: ಪುತ್ರಿಯ ಸಾಮಾಜಿಕ ಜಾಲತಾಣದ ಪೋಸ್ಟ್ ಬಗ್ಗೆ ದಾದಾ ಮನವಿ!
ಸೌರವ್ ಗಂಗೂಲಿ ಕ್ರಿಕೆಟ್ ನ ಹೊರತಾದ ವಿಷಯವೊಂದಕ್ಕೆ ಸುದ್ದಿಯಾಗಿದ್ದಾರೆ. ದೇಶಾದ್ಯಂತ, ಪ್ರಮುಖವಾಗಿ ಪಶ್ಚಿಮ ಬಂಗಾಳದಲ್ಲಿ ಪೌರತ್ವ ತಿದ್ದುಪಡಿ ಕಾಯ್ದೆ ವಿರೋಧಿ ಪ್ರತಿಭಟನೆ ಭುಗಿಲೆದ್ದಿದ್ದು, ಸೌರವ್ ಗಂಗೂಲಿ ಪುತ್ರಿ ಸನಾ ಸಹ ಪೌರತ್ವ ತಿದ್ದುಪಡಿ ಕಾಯ್ದೆಗೆ ವಿರೋಧ ವ್ಯಕ್ತಪಡಿಸಿದ್ದಾರೆ.

ಸೌರವ್ ಗಂಗೂಲಿ ಕ್ರಿಕೆಟ್ ನ ಹೊರತಾದ ವಿಷಯವೊಂದಕ್ಕೆ ಸುದ್ದಿಯಾಗಿದ್ದಾರೆ. ದೇಶಾದ್ಯಂತ, ಪ್ರಮುಖವಾಗಿ ಪಶ್ಚಿಮ ಬಂಗಾಳದಲ್ಲಿ ಪೌರತ್ವ ತಿದ್ದುಪಡಿ ಕಾಯ್ದೆ ವಿರೋಧಿ ಪ್ರತಿಭಟನೆ ಭುಗಿಲೆದ್ದಿದ್ದು, ಸೌರವ್ ಗಂಗೂಲಿ ಪುತ್ರಿ ಸನಾ ಸಹ ಪೌರತ್ವ ತಿದ್ದುಪಡಿ ಕಾಯ್ದೆಗೆ ವಿರೋಧ ವ್ಯಕ್ತಪಡಿಸಿದ್ದಾರೆ.
ಸಾಮಾಜಿಕ ಜಾಲತಾಣದಲ್ಲಿ ಸನಾ ಪೌರತ್ವ ತಿದ್ದುಪಡಿ ಕಾಯ್ದೆಯನ್ನು ವಿರೋಧಿಸಿ, ಖುಷ್ವಂತ್ ಸಿಂಗ್ ಅವರ ಕಾದಂಬರಿಯ ಉಲ್ಲೇಖವನ್ನು ಹಾಕಿ ಪೋಸ್ಟ್ ಹಾಕಿದ್ದರು. 18 ವರ್ಷದ ಸನಾ ಅವರ ಪೋಸ್ಟ್ ವೈರಲ್ ಆಗಿದ್ದು, ಟೀಂ ಇಂಡಿಯಾ ಮಾಜಿ ನಾಯಕ, ಬಿಸಿಸಿಐ ಅಧ್ಯಕ್ಷ ಸೌರವ್ ಗಂಗೂಲಿ ಸಹ ಪ್ರತಿಕ್ರಿಯೆ ನೀಡಿದ್ದಾರೆ.
BCCI President @SGanguly99's daughter Sana Ganguly just won my heart by this post. Incredible maturity from an 18 year old. pic.twitter.com/wQN5eyfY6G
— Aparna (@chhuti_is) December 17, 2019 ವಿದ್ಯಾರ್ಥಿಗಳ ಪ್ರತಿಭಟನೆ ಬೆನ್ನಲ್ಲೇ ಸೌರವ್ ಗಂಗೂಲಿ ತಮ್ಮ ಪುತ್ರಿಯ ಪೋಸ್ಟ್ ನ್ನು ಹಂಚಿಕೊಂಡಿದ್ದು, ಆಕೆಯನ್ನು ಈ ವಿವಾದದಿಂದ ಹೊರಗಿಡಬೇಕಾಗಿ ಮನವಿ ಮಾಡಿದ್ದಾರೆ. ರಾಜಕೀಯದ ಬಗ್ಗೆ ಏನನ್ನು ತಿಳಿದುಕೊಳ್ಳುವುದಕ್ಕೆ ಆಕೆ ತುಂಬಾ ಚಿಕ್ಕವಳು ಆಕೆಯನ್ನು ಇದರಿಂದ ಹೊರಗಿಡಿ ಎಂದು ಹೇಳಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


