ದೇಶ

ಜನರ ಧ್ವನಿಯನ್ನು ಹತ್ತಿಕ್ಕಲು ಕೇಂದ್ರ ಸರ್ಕಾರ ಬಲಪ್ರಯೋಗ- ಸೋನಿಯಾ ಗಾಂಧಿ

ಪೌರತ್ವ ತಿದ್ದುಪಡಿ ಕಾಯ್ದೆ ವಿರುದ್ಧ ದೇಶಾದ್ಯಂತ ಪ್ರತಿಭಟನೆ ಭುಗಿಲೆದ್ದಿರುವಂತೆ ಜನರ ಧ್ವನಿಯನ್ನು ಹತ್ತಿಕ್ಕಲು ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರ ಬಲ ಪ್ರಯೋಗ ಮಾಡುತ್ತಿದೆ ಎಂದು ಕಾಂಗ್ರೆಸ್ ಅಧ್ಯಕ್ಷ ಸೋನಿಯಾ ಗಾಂಧಿ ಆರೋಪಿಸಿದ್ದಾರೆ

ಜನರ ಧ್ವನಿಯನ್ನು ಹತ್ತಿಕ್ಕಲು ಕೇಂದ್ರ ಸರ್ಕಾರ ಬಲಪ್ರಯೋಗ- ಸೋನಿಯಾ ಗಾಂಧಿ
ಸೋನಿಯಾ ಗಾಂಧಿ
Published On :

ನವದೆಹಲಿ: ಪೌರತ್ವ ತಿದ್ದುಪಡಿ ಕಾಯ್ದೆ ವಿರುದ್ಧ ದೇಶಾದ್ಯಂತ ಪ್ರತಿಭಟನೆ ಭುಗಿಲೆದ್ದಿರುವಂತೆ  ಜನರ ಧ್ವನಿಯನ್ನು  ಹತ್ತಿಕ್ಕಲು ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರ  ಬಲ ಪ್ರಯೋಗ ಮಾಡುತ್ತಿದೆ ಎಂದು ಕಾಂಗ್ರೆಸ್ ಅಧ್ಯಕ್ಷ ಸೋನಿಯಾ ಗಾಂಧಿ ಆರೋಪಿಸಿದ್ದಾರೆ.

ಭಿನ್ನಾಭಿಪ್ರಾಯವನ್ನು ಹತ್ತಿಕ್ಕಲು ವಿವೇಚನಾರಹಿತ ಶಕ್ತಿಯನ್ನು ಬಳಸುವುದು ಪ್ರಜಾಪ್ರಭುತ್ವದಲ್ಲಿ ಸ್ವೀಕಾರಾರ್ಹವಲ್ಲ ಎಂದು ಅವರು ಟೀಕಿಸಿದ್ದಾರೆ. ಸರ್ಕಾರದ ಬಲಪ್ರಯೋಗವನ್ನು ಖಂಡಿಸಿದ ಅವರು, ನಾಗರಿಕರು, ವಿದ್ಯಾರ್ಥಿಗಳ ಹೋರಾಟದಲ್ಲಿ ಕಾಂಗ್ರೆಸ್ ಒಗ್ಗಟ್ಟು ಪ್ರದರ್ಶಿಸಲಿದೆ ಎಂದಿದ್ದಾರೆ. 

ಕಾಂಗ್ರೆಸ್ ಪಕ್ಷ ಯೋಜಿಸಿದ್ದ ಆನ್ ಲೈನ್ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು,  ತಪ್ಪು ನಿರ್ಧಾರಗಳು ಮತ್ತು ಸರ್ಕಾರದ ನೀತಿಗಳ ವಿರುದ್ಧ ಧ್ವನಿ ಎತ್ತಲು ಜನರು ಹಕ್ಕು ಹೊಂದಿದ್ದಾರೆ. ನನ್ನ ಸಂವಿಧಾನದ ಮೂಲಭೂತ ತತ್ವಗಳನ್ನು ಎತ್ತಿಹಿಡಿಯಲು ಹಾಗೂ ಜನರ ಮೂಲಭೂತ ಹಕ್ಕುಗಳನ್ನು ಸಂರಕ್ಷಿಸಲು ಕಾಂಗ್ರೆಸ್ ಪಕ್ಷ ಸಂಪೂರ್ಣ ಬದ್ಧವಾಗಿರುವುದಾಗಿ  ಅವರು ತಿಳಿಸಿದರು.

ರಾಷ್ಟ್ರವ್ಯಾಪಿ ಉದ್ದೇಶಿತ ಎನ್‌ಆರ್‌ಸಿಯಿಂದ  ವಿಶೇಷವಾಗಿ ಬಡವರಿಗೆ ಮತ್ತು ದುರ್ಬಲರಿಗೆ ತೊಂದರೆಯಾಗಲಿದೆ ಎಂದು ಸೋನಿಯಾ ಗಾಂಧಿ ಕಳವಳ ವ್ಯಕ್ತಪಡಿಸಿದ್ದಾರೆ. 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.