ಪೌರತ್ವ ತಿದ್ದುಪಡಿ ಕಾಯ್ದೆ ವಿರೋಧಿಸಿ ಸೋಮವಾರ ರಾಜ್ ಘಾಟ್ ನಲ್ಲಿ ಕೈ ನಾಯಕರ ಮೌನ ಪ್ರತಿಭಟನೆ
ಪೌರತ್ವ ತಿದ್ದುಪಡಿ ಕಾಯ್ದೆ ವಿರುದ್ಧ ದೇಶಾದ್ಯಂತ ಪ್ರತಿಭಟನೆ ತೀವ್ರಗೊಂಡಿರುವ ಬೆನ್ನಲ್ಲೇ, ಸಂವಿಧಾನ ರಕ್ಷಣೆ ಹಾಗೂ ಜನರ ಮೂಲಭೂತ ಹಕ್ಕುಗಳ ರಕ್ಷಣೆಗೆ ಒತ್ತಾಯಿಸಿ ಸೋನಿಯಾ ಗಾಂಧಿ ನೇತೃತ್ವದಲ್ಲಿ ಕಾಂಗ್ರೆಸ್ ನಾಯಕರು ಸೋಮವಾರ ಮಧ್ಯಾಹ್ನ ಮಹಾತ್ಮ ಗಾಂಧೀಜಿ ಸಮಾಧಿ ರಾಜ್ ಘಾಟ್ ನಲ್ಲಿ ಮೌನ ಪ್ರತಿಭಟನೆ ನಡೆಸಲು ನಿರ್ಧರಿಸಿದ್ದಾರೆ.

ನವದೆಹಲಿ: ಪೌರತ್ವ ತಿದ್ದುಪಡಿ ಕಾಯ್ದೆ ವಿರುದ್ಧ ದೇಶಾದ್ಯಂತ ಪ್ರತಿಭಟನೆ ತೀವ್ರಗೊಂಡಿರುವ ಬೆನ್ನಲ್ಲೇ, ಸಂವಿಧಾನ ರಕ್ಷಣೆ ಹಾಗೂ ಜನರ ಮೂಲಭೂತ ಹಕ್ಕುಗಳ ರಕ್ಷಣೆಗೆ ಒತ್ತಾಯಿಸಿ ಸೋನಿಯಾ ಗಾಂಧಿ ನೇತೃತ್ವದಲ್ಲಿ ಕಾಂಗ್ರೆಸ್ ನಾಯಕರು ಸೋಮವಾರ ಮಧ್ಯಾಹ್ನ ಮಹಾತ್ಮ ಗಾಂಧೀಜಿ ಸಮಾಧಿ ರಾಜ್ ಘಾಟ್ ನಲ್ಲಿ ಮೌನ ಪ್ರತಿಭಟನೆ ನಡೆಸಲು ನಿರ್ಧರಿಸಿದ್ದಾರೆ.
ಕಾಂಗ್ರೆಸ್ ಮಾಜಿ ಅಧ್ಯಕ್ಷ ರಾಹುಲ್ ಗಾಂಧಿ, ಪ್ರಧಾನ ಕಾರ್ಯದರ್ಶಿ ಪ್ರಿಯಾಂಕಾ ಗಾಂಧಿ ವಾದ್ರಾ ಸೇರಿದಂತೆ ಪಕ್ಷದ ಹಿರಿಯ ನಾಯಕರು ಸಂಜೆಯವರೆಗೂ ನಡೆಯಲಿರುವ ಸತ್ಯಾಗ್ರಹ ಧರಣಿಯಲ್ಲಿ ಪಾಲ್ಗೊಳ್ಳಲಿದ್ದಾರೆ ಎಂದು ಮೂಲಗಳಿಂದ ತಿಳಿದುಬಂದಿದೆ.
ಸೋನಿಯಾ ಗಾಂಧಿ ನಿವಾಸದಲ್ಲಿ ಶನಿವಾರ ಸಂಜೆ ನಡೆದ ಪಕ್ಷದ ಹಿರಿಯ ನಾಯಕರ ಸಭೆಯಲ್ಲಿ ಈ ಮೌನ ಪ್ರತಿಭಟನೆಯ ನಿರ್ಧಾರ ಕೈಗೊಳ್ಳಲಾಗಿದೆ.
ರಾಜ್ ಘಾಟ್ ನಲ್ಲಿ ನಾಳೆ ಪ್ರತಿಭಟನೆ ನಡೆಸಲು ಕಾಂಗ್ರೆಸ್ ನಾಯಕರು ನಿರ್ಧರಿಸಿದ್ದರು. ಆದರೆ, ಅದಕ್ಕೆ ಸಂಬಂಧಿತ ಆಡಳಿತ ಸಂಸ್ಥೆಗಳಿಂದ ಅನುಮತಿ ಇನ್ನೂ ಪಡೆಯದ ಕಾರಣ ಸೋಮವಾರಕ್ಕೆ ಮುಂದೂಡಲಾಗಿದೆ ಎಂದು ತಿಳಿದುಬಂದಿದೆ
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


