ದೇಶ

ರೈತರ 2 ಲಕ್ಷ ರೂ. ವರೆಗಿನ ಸಾಲ ಮನ್ನಾ: ಮಹಾ ಸಿಎಂ ಉದ್ಧವ್ ಠಾಕ್ರೆ ಘೋಷಣೆ

ರೈತರ ಎರಡು ಲಕ್ಷ ರೂಪಾಯಿವರೆಗಿನ ಕೃಷಿ ಸಾಲ ಮನ್ನಾ ಮಾಡುವುದಾಗಿ ಶನಿವಾರ ಮಹಾರಾಷ್ಟ್ರ ಸರ್ಕಾರ ಘೋಷಿಸಿದೆ.

ರೈತರ 2 ಲಕ್ಷ ರೂ. ವರೆಗಿನ ಸಾಲ ಮನ್ನಾ: ಮಹಾ ಸಿಎಂ ಉದ್ಧವ್ ಠಾಕ್ರೆ ಘೋಷಣೆ
ಉದ್ಧವ್ ಠಾಕ್ರೆ
Published On :

ನಾಗಪುರ್: ರೈತರ ಎರಡು ಲಕ್ಷ ರೂಪಾಯಿವರೆಗಿನ ಕೃಷಿ ಸಾಲ ಮನ್ನಾ ಮಾಡುವುದಾಗಿ ಶನಿವಾರ ಮಹಾರಾಷ್ಟ್ರ ಸರ್ಕಾರ ಘೋಷಿಸಿದೆ.

ಚಳಿಗಾಲ ಅಧಿವೇಶನದ ಕೊನೆಯದಿನವಾದ ಇಂದು ವಿಧಾಸಭೆಯಲ್ಲಿ ಮುಖ್ಯಮಂತ್ರಿ ಉದ್ಧವ್ ಠಾಕ್ರೆ ಅವರು ರೈತರ ಸಾಲ ಮನ್ನಾ ಘೋಷಿಸಿದ್ದು, ಸೆಪ್ಟೆಂಬರ್ 30, 2019ರ ವರೆಗೆ ರೈತರು ಪಡೆದ ಎರಡು ಲಕ್ಷ ರೂಪಾಯಿ ಕೃಷಿ ಸಾಲ ಮನ್ನಾ ಮಾಡುವುದಾಗಿ ಹೇಳಿದ್ದಾರೆ.

ಮಹಾತ್ಮ ಜ್ಯೋತಿರಾವ್ ಫುಲೆ ಸಾಲ ಮನ್ನಾ ಯೋಜನೆ ಅಡಿ ರೈತರ ಸಾಲ ಮನ್ನಾ ಮಾಡುವುದಾಗಿ ಸಿಎಂ ತಿಳಿಸಿದ್ದಾರೆ. ಅಲ್ಲದೆ ಕಾಲ ಕಾಲಕ್ಕೆ ಸಾಲ ಮರುಪಾವತಿ ಮಾಡಿದ ರೈತರಿಗೆ ವಿಶೇಷ ಯೋಜನೆಗಳನ್ನು ಘೋಷಿಸುವುದಾಗಿ ಉದ್ಧವ್ ಠಾಕ್ರೆ ತಿಳಿಸಿದ್ದಾರೆ.

ಮೈತ್ರಿ ಸರ್ಕಾರ ರೈತರ ಸಂಪೂರ್ಣ ಸಾಲ ಮನ್ನಾ ಮಾಡುವ ಭರವಸೆಯನ್ನು ಈಡೇರಿಸಿಲ್ಲ ಎಂದು ಪ್ರತಿಪಕ್ಷ ನಾಯಕ ದೇವೇಂದ್ರ ಫಡ್ನವಿಸ್ ಅವರು ಆರೋಪಿಸಿದ್ದಾರೆ.
 

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.