ದೇಶ

ನಾವಲ್ಲ, ಅಮಿತ್ ಶಾ ಭಯ, ಅನಿಶ್ಚಿತತೆ' ವಾತಾವರಣ ಸೃಷ್ಟಿಸಿದ್ದಾರೆ- ಮೋದಿ ವಿರುದ್ಧ ಕಾಂಗ್ರೆಸ್ ವಾಗ್ದಾಳಿ

ಜನರನ್ನು ಪ್ರತಿಪಕ್ಷಗಳು ಪ್ರಚೋದಿಸುತ್ತಿವೆ ಎಂಬ ಪ್ರಧಾನಿ ನರೇಂದ್ರ ಮೋದಿ ಅವರ ಆರೋಪವನ್ನು ತಳ್ಳಿಹಾಕಿರುವ ಕಾಂಗ್ರೆಸ್, ಪೌರತ್ವ ತಿದ್ದುಪಡಿ ಕಾಯ್ದೆ ನಂತರ ಎನ್ ಆರ್ ಸಿಯನ್ನು ಜಾರಿಗೆ ತರುವುದಾಗಿ ಗೃಹ ಸಚಿವ ಅಮಿತ್ ಶಾ ಸಂಸತ್ತಿನಲ್ಲಿ ಹೇಳಿಕೆ ನೀಡುವ ಮೂಲಕ ದೇಶದಲ್ಲಿ ಭಯ ಹಾಗೂ ಅನಿಶ್ಚಿತತೆಯ ವಾತಾವರಣ ಸೃಷ್ಟಿಸಿದ್ದಾರೆ ಎಂದು ಆರೋಪಿಸಿದೆ.

ನಾವಲ್ಲ, ಅಮಿತ್ ಶಾ ಭಯ, ಅನಿಶ್ಚಿತತೆ' ವಾತಾವರಣ ಸೃಷ್ಟಿಸಿದ್ದಾರೆ- ಮೋದಿ ವಿರುದ್ಧ ಕಾಂಗ್ರೆಸ್ ವಾಗ್ದಾಳಿ
ಸಿಎಎ ಪ್ರತಿಭಟನೆ
Published On :

ನವದೆಹಲಿ: ಜನರನ್ನು ಪ್ರತಿಪಕ್ಷಗಳು ಪ್ರಚೋದಿಸುತ್ತಿವೆ ಎಂಬ ಪ್ರಧಾನಿ ನರೇಂದ್ರ ಮೋದಿ ಅವರ ಆರೋಪವನ್ನು ತಳ್ಳಿಹಾಕಿರುವ ಕಾಂಗ್ರೆಸ್, ಪೌರತ್ವ ತಿದ್ದುಪಡಿ ಕಾಯ್ದೆ ನಂತರ ಎನ್ ಆರ್ ಸಿಯನ್ನು ಜಾರಿಗೆ ತರುವುದಾಗಿ ಗೃಹ ಸಚಿವ  ಅಮಿತ್ ಶಾ ಸಂಸತ್ತಿನಲ್ಲಿ ಹೇಳಿಕೆ ನೀಡುವ ಮೂಲಕ ದೇಶದಲ್ಲಿ ಭಯ ಹಾಗೂ ಅನಿಶ್ಚಿತತೆಯ ವಾತಾವರಣ ಸೃಷ್ಟಿಸಿದ್ದಾರೆ ಎಂದು ಆರೋಪಿಸಿದೆ.

ಪೌರತ್ವ ತಿದ್ದುಪಡಿ ಕಾಯ್ದೆ ನಂತರ ಎನ್ ಆರ್ ಸಿಯನ್ನು ಜಾರಿಗೊಳಿಸುವುದಾಗಿ ಗೃಹ ಸಚಿವರು ಸಂಸತ್ತಿನ ಉಭಯ ಸದನಗಳಲ್ಲಿ ನೀಡಿರುವ ಹೇಳಿಕೆ  ಅನಿಶ್ಚಿತತೆ ಹಾಗೂ ಭಯದ ವಾತಾವರಣ ಸೃಷ್ಟಿಸಿದ್ದಾರೆ ಎಂದು ಹಿರಿಯ ಕಾಂಗ್ರೆಸ್ ಮುಖಂಡ ಆನಂದ್ ಶರ್ಮಾ ಹೇಳಿದ್ದಾರೆ.

ಪೌರತ್ವ ತಿದ್ದುಪಡಿ ಕಾಯ್ದೆ ಹಾಗೂ ಎನ್ ಆರ್ ಸಿ ವಿರುದ್ಧ ದೇಶಾದ್ಯಂತ ಪ್ರತಿಭಟನೆ ಮುಂದುವರಿದಿರುವ ಸಂದರ್ಭದಲ್ಲಿ ಪ್ರಧಾನಿ ನರೇಂದ್ರ ಮೋದಿ ಸಮಸ್ಯೆ ಪರಿಹರಿಸುವ ಗುಣ ಹೊಂದಿರಬೇಕು. ಪ್ರಧಾನಿ ಒಂದು ವೇಳೆ ಸೂಕ್ಷ್ಮ ಹಾಗೂ ಗಂಭೀರ ಮನಸ್ಥಿತಿವುಳ್ಳವರಾಗಿದ್ದರೆ  ರಾಷ್ಟ್ರೀಯ ಏಕೀಕರಣ ಸಮಿತಿಯಲ್ಲಿ ಎಲ್ಲಾ ರಾಜ್ಯಗಳ ಮುಖ್ಯಮಂತ್ರಿಗಳ ಸಭೆ ಕರೆದು ಈ ವಿಚಾರದ ಬಗ್ಗೆ ಚರ್ಚಿಸಬೇಕು ಆನಂದ್ ಶರ್ಮಾ ಹೇಳಿದ್ದಾರೆ.  

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.