ಪ್ರಗತಿ ಪರಿಶೀಲನೆಗೆ ಮುಂದಾದ ಪ್ರಧಾನಿ: ಸಚಿವರಿಗೆ 9 ತಾಸು ಮೋದಿ ಪರೀಕ್ಷೆ
ಲೋಕಸಭಾ ಚುನಾವಣೆಯಲ್ಲಿ ಅಭೂತಪೂರ್ವದ ಜಯದ ಬಳಿಕ ಅಧಿಕಾರದ ಗುದ್ದಿಗೆಗೆ ಮರಳಿದ ಪ್ರದಾನಿ ಮೋದಿಯವರು ಕಳೆದ 6 ತಿಂಗಳುಗಳ ಅವಧಿಯಲ್ಲಿ ಸಚಿವರು ತಮ್ಮ ಖಾತೆಯಲ್ಲಿ ಏನೆಲ್ಲಾ ಅಭಿವೃದ್ಧಿ ಕಾರ್ಯಗಳನ್ನು ಕೈಗೊಂಡಿದ್ದರೆಂಬ ಕುರಿತಾಗಿ ಪ್ರಗತಿ ಪರಿಶೀಲನಾ ಸಬೆ ನಡೆಸಿದರು.

ನವದೆಹಲಿ: ಲೋಕಸಭಾ ಚುನಾವಣೆಯಲ್ಲಿ ಅಭೂತಪೂರ್ವದ ಜಯದ ಬಳಿಕ ಅಧಿಕಾರದ ಗುದ್ದಿಗೆಗೆ ಮರಳಿದ ಪ್ರದಾನಿ ಮೋದಿಯವರು ಕಳೆದ 6 ತಿಂಗಳುಗಳ ಅವಧಿಯಲ್ಲಿ ಸಚಿವರು ತಮ್ಮ ಖಾತೆಯಲ್ಲಿ ಏನೆಲ್ಲಾ ಅಭಿವೃದ್ಧಿ ಕಾರ್ಯಗಳನ್ನು ಕೈಗೊಂಡಿದ್ದರೆಂಬ ಕುರಿತಾಗಿ ಪ್ರಗತಿ ಪರಿಶೀಲನಾ ಸಬೆ ನಡೆಸಿದರು.
ದೆಹಲಿಯಲ್ಲಿರುವ ಪ್ರವಾಸಿ ಭಾರತೀಯ ಕೇಂದ್ರದ ಸಭಾಂಘಣದಲ್ಲಿ ಶನಿವಾರ ಬೆಳಿಗ್ಗೆ 10.30ಕ್ಕೆ ಆರಂಭವಾದ ಸಭೆಯು ಸಂಜೆಯವರೆಗೂ ಒಟ್ಟು 9 ಗಂಟೆಗಳ ಕಾಲ ನಡೆದಿದ್ದು, ಈ ವೇಳೆ ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆಗಳ ಪ್ರಗತಿಯತ್ತ ಗಮನ ಹರಿಸುವಂತೆ ಸಚಿವರಿಗೆ ಮೋದಿಯವರು ನಿರ್ದೇಶಿಸಿದರು. ಅಲ್ಲದೆ, ಕೃಷಿ ಮೂಲಭೂತ ಸೌಕರ್ಯ ಸೇರಿದಂತೆ ಕೇಂದ್ರ ಸರ್ಕಾರದ ಮಹತ್ವಾಕಾಂಕ್ಷೆ ಯೋಜನೆಗಳು ಅಂತರಾಷ್ಟ್ರೀಯ ಗುಣಮಟ್ಟದಲ್ಲಿರುವಂತೆ ನೋಡಿಕೊಳ್ಳಲು ಅಧಿಕಾರಿಹಗಳು ಮತ್ತು ಸಚಿವರು ಕ್ರಮ ವಹಿಸಬೇಕೆಂದು ಸೂಚಿಸಿದರು.
ಅಲ್ಲದೆ, ಉದ್ಯೋಗ ಸೃಷ್ಟಿಯಲ್ಲಿ ಕೇಂದ್ರ ಸರ್ಕಾರ ಸಂಪೂರ್ಣ ವಿಫಲವಾಗಿದೆ ಎಂಬ ಪ್ರತಿಪಕ್ಷಗಳ ಆರೋಪವನ್ನು ಹುಸಿ ಮಾಡುವ ಸಲುವಾಗಿ ದೇಶದಾದ್ಯಂತ ನಿರುದ್ಯೋಗ ಸಮಸ್ಯೆ ನಿವಾರಮೆ ಕುರಿತಾದ ಕ್ರಮಗಳ ಬಗ್ಗೆ ಮೋದಿಯವರು ಸಚಿವರಿಗೆ ಪಾಠ ಮಾಡಿದರು.
ಮೇಕ್ ಇನ್ ಇಂಡಿಯಾ, ಸ್ಮಾರ್ಟ್ ಸಿಟಿ ಯೋಜನೆ, ನಮಾಮಿ ಗಂಗೆ, ಪ್ರಧಾನಮಂತ್ರಿ ಕಿಸಾನ್ ಸಮ್ಮಾನ್ ನಿಧಿ, ರೈತರ ಆದಾಯ ದ್ವಿಗುಣ, ಪ್ರತಿಯೊಂದ ಮನೆಗೂ ನಲ್ಲಿ ನೀರು ಸೇರಿ ಇನ್ನಿತರೆ ಕೇಂದ್ರದ ಮಹತ್ವಾಕಾಂಕ್ಷಿ ಯೋಜನೆಗಳ ಅನುಷ್ಠಾನದಲ್ಲಿ ಸಚಿವರು ಎದುರಿಸುತ್ತಿರುವ ಸವಾಲುಗಳೇನು ಬಹಿರಂಗಪಡಿಸಿ ಎಂದು ಸಚಿವರಿಗೆ ಮೋದಿ ಸೂಚಿಸಿದರು ಎಂದು ಮೂಲಗಳಿಂದ ತಿಳಿದುಬಂದಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


