ಎನ್ಆರ್ಸಿ, ಎನ್‌ಪಿಆರ್ ತಕ್ಷಣ ಹಿಂಪಡೆಯಿರಿ: ಸಿಪಿಐಎಂ ಪಾಲಿಟ್ ಬ್ಯೂರೊ
ಭಾರತ ಸರಕಾರ ಕೂಡಲೇ ರಾಷ್ಟ್ರೀಯ ಪೌರರ ನೋಂದಣಿ (ಎನ್‌ಸಿಆರ್) ಮತ್ತು ರಾಷ್ಟ್ರೀಯ ಜನಸಂಖ್ಯಾ ನೋಂದಣಿ(ಎನ್‌ಪಿಆರ್) ಪ್ರಕ್ರಿಯೆಯನ್ನು ಹಿಂಪಡೆದುಕೊಳ್ಳಬೇಕು ಎಂದು ಸಿಪಿಐ(ಎಂ) ಪಾಲಿಟ್ ಬ್ಯುರೊ ಒತ್ತಾಯಿಸಿದೆ.

ನವದೆಹಲಿ: ಭಾರತ ಸರಕಾರ ಕೂಡಲೇ ರಾಷ್ಟ್ರೀಯ ಪೌರರ ನೋಂದಣಿ (ಎನ್‌ಸಿಆರ್) ಮತ್ತು ರಾಷ್ಟ್ರೀಯ ಜನಸಂಖ್ಯಾ ನೋಂದಣಿ(ಎನ್‌ಪಿಆರ್) ಪ್ರಕ್ರಿಯೆಯನ್ನು ಹಿಂಪಡೆದುಕೊಳ್ಳಬೇಕು ಎಂದು ಸಿಪಿಐ(ಎಂ) ಪಾಲಿಟ್ ಬ್ಯುರೊ ಒತ್ತಾಯಿಸಿದೆ.
ಈಶಾನ್ಯ ರಾಜ್ಯಗಳು ಮಾತ್ರವಲ್ಲ ಇನ್ನೂ ಹತ್ತು ರಾಜ್ಯಗಳ ಮುಖ್ಯಮಂತ್ರಿಗಳು ತಮ್ಮ ರಾಜ್ಯಗಳಲ್ಲಿ ಎನ್‌ಆರ್‌ಸಿ ಜಾರಿ ಮಾಡುವುದನ್ನು ವಿರೋಧಿಸಿದ್ದಾರೆ. ಇನ್ನೂ ಹಲವರು ಇದೇ ದಾರಿ ಅನುಸರಿಸುವ ಸಾಧ್ಯತೆಗಳಿವೆ. ಇಂತಹ ಸನ್ನಿವೇಶದಲ್ಲಿ ಕೇಂದ್ರ ಸರಕಾರದ ಹಠಮಾರಿತನವನ್ನು ಒಪ್ಪಲು ಸಾಧ್ಯವಿಲ್ಲ ಎಂದು ಸಿಪಿಐ(ಎಂ) ಹೇಳಿಕೆಯಲ್ಲಿ ತಿಳಿಸಿದೆ.
ಎನ್ಆರ್‌ಸಿ, ಸಿಎಎ ಸಂವಿಧಾನ-ವಿರೋಧಿ ಪೌರತ್ವ ತಿದ್ದುಪಡಿ ಕಾಯ್ದೆಯ ವಿರುದ್ಧ ಮತ್ತು ಅದಕ್ಕೆ ಸಂಬಂಧಿಸಿರುವ ಎನ್ ಆರ್ ಸಿ/ಎನ್ ಪಿ ಆರ್ ವಿರುದ್ಧ ಪ್ರತಿಭಟನೆಗಳನ್ನು ಶಾಂತಿಯುತವಾಗಿ ಮುಂದುವರೆಸಬೇಕು ಎಂದು ಪಾಲಿಟ್ ಬ್ಯುರೊ ಜನತೆಗೆ ಮನವಿ ಮಾಡಿಕೊಂಡಿದೆ.
ಹಲವೆಡೆಗಳಲ್ಲಿ ಪ್ರತಿಭಟನೆಗಳ ನಿಷೇಧ ಮತ್ತು ಶಾಂತಿಯುತ ಪ್ರತಿಭಟನಕಾರರ ಮೇಲೆ ವಿಪರೀತ ಬಲ ಪ್ರಯೋಗವನ್ನು ಪಾಲಿಟ್ ಬ್ಯುರೊ ಖಂಡಿಸಿದೆ. ಹಿಂಸಾಚಾರವನ್ನು ಉದ್ರೇಕಿಸುವ ಉದ್ದೇಶ ಹೊಂದಿರುವ ಯಾವುದೇ ತಂತ್ರಗಳಿಗೆ ಜನ ಬಲಿಬೀಳಬಾರದು ಎಂದು ಸಿಪಿಐ(ಎಂ) ಪಾಲಿಟ್ ಬ್ಯುರೊ ಜನತೆಗೆ ಮನವಿ ಮಾಡಿಕೊಂಡಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


