ಇದು ನನ್ನ ಸೋಲು, ಬಿಜೆಪಿ ಸೋಲು ಅಲ್ಲ: ಜಾರ್ಖಂಡ್ ಸಿಎಂ ರಘುಬರ್ ದಾಸ್
ಜಾರ್ಖಂಡ್ ವಿಧಾನಸಭೆ ಚುನಾವಣೆಯ ಫಲಿತಾಂಶ ಸೋಮವಾರ ಪ್ರಕಟವಾಗಿದ್ದು, ಆಡಳಿತರೂಢ ಬಿಜೆಪಿ ಹೀನಾಯ ಸೋಲು ಅನುಭವಿಸುವ ಮೂಲಕ ತೀವ್ರ ಮುಖಭಂಗಕ್ಕಿಡಾಗಿದೆ.

ರಾಂಚಿ: ಜಾರ್ಖಂಡ್ ವಿಧಾನಸಭೆ ಚುನಾವಣೆಯ ಫಲಿತಾಂಶ ಸೋಮವಾರ ಪ್ರಕಟವಾಗಿದ್ದು, ಆಡಳಿತರೂಢ ಬಿಜೆಪಿ ಹೀನಾಯ ಸೋಲು ಅನುಭವಿಸುವ ಮೂಲಕ ತೀವ್ರ ಮುಖಭಂಗಕ್ಕಿಡಾಗಿದೆ.
ಚುನಾವಣೆ ಫಲಿತಾಂಶದ ಬಗ್ಗೆ ಪ್ರತಿಕ್ರಿಯಿಸಿದ ಜಾರ್ಖಂಡ್ ಸಿಎಂ ರಘುಬರ್ ದಾಸ್ ಅವರು, ಇದು ನನ್ನ ಸೋಲು, ಬಿಜೆಪಿಯ ಸೋಲು ಅಲ್ಲ ಎಂದು ಹೇಳಿದ್ದಾರೆ.
ಸ್ವತಃ ರಘುಬರ್ ದಾಸ್ ಅವರೇ ತಮ್ಮ ಕ್ಷೇತ್ರ ಜಮಶೆಡಪುರ್ ದಲ್ಲಿ ತೀವ್ರ ಹಿನ್ನೆಡೆ ಅನುಭವಿಸಿದ್ದು, ಬಿಜೆಪಿ ಬಂಡಾಯ ಅಭ್ಯರ್ಥಿ ಸರ್ಯು ರಾಯ್ ಅವರು ಸಿಎಂ ವಿರುದ್ಧ 10 ಸಾವಿರ ಮತಗಳ ಮುನ್ನಡೆ ಕಾಯ್ದುಕೊಂಡಿದ್ದಾರೆ. ಹೀಗಾಗಿ ರಘುಬರ್ ಸೋಲು ಖಚಿತ ಎನ್ನಲಾಗುತ್ತಿದೆ.
ಜಾರ್ಖಂಡ್ ನ 81 ಕ್ಷೇತ್ರಗಳ ಪೈಕಿ ಕಾಂಗ್ರೆಸ್, ಜೆಎಂಎ ಮೈತ್ರಿಕೂಟ 45 ಕ್ಷೇತ್ರಗಳಲ್ಲಿ ಭರ್ಜರಿ ಗೆಲುವು ಸಾಧಿಸಿದ್ದು, ಆಡಳಿತರೂಢ ಬಿಜೆಪಿ ಮೈತ್ರಿಕೂಟ 26 ಸ್ಥಾನಗಳನ್ನು ಪಡೆಯುವ ಮೂಲಕ ತೀವ್ರ ಮುಖಭಂಗಕ್ಕೆ ಈಡಾಗಿದೆ.
ಉಳಿದಂತೆ ಸರ್ಕಾರ ರಚನೆಯಲ್ಲಿ ಕಿಂಗ್ ಮೇಕರ್ ಆಗುವ ಕನಸು ಕಾಣುತ್ತಿದ್ದ ಎಜೆಎಸ್ ಯು ಪಕ್ಷ 3, ಜೆವಿಎಂ 3 ಕ್ಷೇತ್ರಗಳಲ್ಲಿ ಗೆಲುವು ಸಾಧಿಸಿವೆ. ಇತರರು ನಾಲ್ಕು ಕ್ಷೇತ್ರಗಳಲ್ಲಿ ಗೆಲುವು ಸಾಧಿಸಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


