ಪೌರತ್ವ ತಿದ್ದುಪಡಿ ಕಾಯ್ದೆಗೂ ಜಾರ್ಖಂಡ್ ಚುನಾವಣಾ ಫಲಿತಾಂಶಕ್ಕೂ ಸಂಬಂಧವಿಲ್ಲ: ಬಿಜೆಪಿ
ಪೌರತ್ವ ತಿದ್ದುಪಡಿ ಕಾಯ್ದೆಗೂ ಜಾರ್ಖಂಡ್ ಚುನಾವಣಾ ಫಲಿತಾಂಶಕ್ಕೂ ಸಂಬಂಧವಿಲ್ಲ ಎಂದು ಬಿಜೆಪಿ ಹೇಳಿದೆ.

ರಾಂಚಿ: ಪೌರತ್ವ ತಿದ್ದುಪಡಿ ಕಾಯ್ದೆಗೂ ಜಾರ್ಖಂಡ್ ಚುನಾವಣಾ ಫಲಿತಾಂಶಕ್ಕೂ ಸಂಬಂಧವಿಲ್ಲ ಎಂದು ಬಿಜೆಪಿ ಹೇಳಿದೆ.
ಜಾರ್ಖಂಡ್ ವಿಧಾನಸಭಾ ಚುನಾವಣಾ ಫಲಿತಾಂಶ ಪ್ರಕಟ ಪ್ರಗತಿಯಲ್ಲಿದ್ದು, ಈ ವರೆಗಿನ ವರದಿಗಳ ಅನ್ವಯ ಜೆಎಂಎಂ-ಕಾಂಗ್ರೆಸ್ ಮೈತ್ರಿಕೂಟ ಸ್ಪಷ್ಟ ಬಹುದತ್ತ ಹೆಜ್ಜೆ ಹಾಕಿದೆ. ಜಾರ್ಖಂಡ್ ನಲ್ಲಿ ಆಡಳಿತಾ ರೂಢ ಬಿಜೆಪಿಗೆ ತೀವ್ರ ಮುಖಭಂಗವಾಗಿದ್ದು, 81 ಕ್ಷೇತ್ರಗಳ ಪೈಕಿ ಬಿಜೆಪಿ ಕೇಲವ 28 ಕ್ಷೇತ್ರಗಳಲ್ಲಿ ಮಾತ್ರ ಮುನ್ನಡೆ ಕಾಯ್ದು ಕೊಂಡಿದೆ. ಆದರೆ ಜೆಎಂಎಂ-ಕಾಂಗ್ರೆಸ್ ಮೈತ್ರಿಕೂಟ ಈಗಗಾಲೇ 40 ಕ್ಷೇತ್ರಗಳಲ್ಲಿ ಮುನ್ನಡೆ ಕಾಯ್ದುಕೊಂಡಿದ್ದು, ಸ್ಪಷ್ಟ ಬಹುಮತದತ್ತ ಹೆಜ್ಜೆ ಹಾಕಿದೆ.
ಏತನ್ಮಧ್ಯೆ ಜಾರ್ಖಂಡ್ ನಲ್ಲಿ ಬಿಜೆಪಿ ಹಿನ್ನಡೆಗೆ ಕೇಂದ್ರ ಸರ್ಕಾರದ ವಿವಾದಾತ್ಮಕ ಪೌರತ್ವ ತಿದ್ದುಪಡಿ ಕಾಯ್ದೆಯೇ ಕಾರಣ ಎಂಬ ವಿಶ್ಲೇಷಣೆಗಳ ಕುರಿತು ಬಿಜೆಪಿ ಕಿಡಿಕಾರಿದ್ದು, ಪೌರತ್ವ ತಿದ್ದುಪಡಿ ಕಾಯ್ದೆಗೂ ಜಾರ್ಖಂಡ್ ಚುನಾವಣಾ ಫಲಿತಾಂಶಕ್ಕೂ ಸಂಬಂಧವಿಲ್ಲ ಎಂದು ಹೇಳಿದೆ.
ಈ ಕುರಿತಂತೆ ಮಾತನಾಡಿದ ಜಾರ್ಖಂಡ್ ಬಿಜೆಪಿ ಘಟಕದ ವಕ್ತಾರ ಸುದೇಶ್ ವರ್ಮಾ ಅವರು, ಎನ್ ಆರ್ ಸಿ ಪ್ರಚಾರದ ವಸ್ತುವಲ್ಲ. ಎನ್ ಆರ್ ಸಿ ಅಥವಾ ಸಿಎಎ ಕುರಿತು ಜಾರ್ಖಂಡ್ ನಲ್ಲಿ ಯಾವುದೇ ರೀತಿಯ ಪ್ರತಿಭಟನೆಗಳಾಗಿರಲಿಲ್ಲ. ಹೀಗಾಗಿ ಹಾಲಿ ಚುನಾವಣಾ ಫಲಿತಾಂಶಕ್ಕೂ ಪೌರತ್ವ ಕಾಯ್ದೆಗೂ ತಳುಕುಹಾಕುವುದು ಬೇಡ. ಎನ್ ಆರ್ ಸಿ ವಿಚಾರವಾಗಿ ಪ್ರಜೆಗಳಲ್ಲಿ ಜಾಗೃತಿ ಮೂಡಿಸುವ ಎಲ್ಲ ಕೆಲಸಗಳನ್ನೂ ನಾವು ಮಾಡಿದ್ದೇವೆ. ಎನ್ ಆರ್ ಸಿ ಅಥವಾ ಸಿಎಎ ಎಂದೂ ನಮ್ಮ ಚುನಾವಣಾ ವಸ್ತುವಾಗಿರಲಿಲ್ಲ. ರಾಷ್ಟ್ರೀಯ ಹಿತಾಸಕ್ತಿಯಿಂದಾಗಿ ಅದನ್ನು ಜಾರಿ ಮಾಡಿದ್ದೇವೆ ಎಂದು ಹೇಳಿದ್ದಾರೆ.
Related Article
ಈ ಟ್ರೆಂಡ್ ಅಂತಿಮವಲ್ಲ, ನಾವು ಗೆದ್ದು ಸರ್ಕಾರ ರಚಿಸುತ್ತೇವೆ: ಜಾರ್ಖಂಡ್ ಸಿಎಂ ರಘುವರ್ ದಾಸ್
ಜಾರ್ಖಂಡ್ ಚುನಾವಣಾ ಫಲಿತಾಂಶ: ಬಿಜೆಪಿಗೆ ತೀವ್ರ ಮುಖಭಂಗ, ಸ್ಪಷ್ಟ ಬಹುಮತದತ್ತ ಜೆಎಂಎಂ-ಕಾಂಗ್ರೆಸ್ ಮೈತ್ರಿಕೂಟ
ಜಾರ್ಖಂಡ್ ಚುನಾವಣಾ ಫಲಿತಾಂಶ: ಬಿಜೆಪಿ ಮತ್ತು ಜೆಎಂಎಂ-ಕಾಂಗ್ರೆಸ್ ಮೈತ್ರಿಕೂಟದ ನಡುವೆ ತೀವ್ರ ಪೈಪೋಟಿ
ಜಾರ್ಖಂಡ್ ವಿಧಾನಸಭೆ ಚುನಾವಣೆ: ಮತ ಎಣಿಕೆ ಕಾರ್ಯ ಆರಂಭ
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


