ದೇಶಾದ್ಯಂತ ಸಂಭ್ರಮದ ಕ್ರಿಸ್ ಮಸ್ ಆಚರಣೆ: ಚರ್ಚ್ ಗಳಲ್ಲಿ ಮಧ್ಯರಾತ್ರಿ ಸಾಮೂಹಿಕ ಪ್ರಾರ್ಥನೆ
ಏಸುಕ್ರಿಸ್ತರ ಜನ್ಮದಿನ ಕ್ರಿಸ್ ಮಸ್ ಹಬ್ಬವನ್ನು ಕ್ರೈಸ್ತ ಬಾಂಧವರು ದೇಶಾದ್ಯಂತ ಸಡಗರ, ಸಂಭ್ರಮದಿಂದ ಆಚರಿಸುತ್ತಿದ್ದಾರೆ.

ನವದೆಹಲಿ: ಏಸುಕ್ರಿಸ್ತರ ಜನ್ಮದಿನ ಕ್ರಿಸ್ ಮಸ್ ಹಬ್ಬವನ್ನು ಕ್ರೈಸ್ತ ಬಾಂಧವರು ದೇಶಾದ್ಯಂತ ಸಡಗರ, ಸಂಭ್ರಮದಿಂದ ಆಚರಿಸುತ್ತಿದ್ದಾರೆ.
ಬೆಂಗಳೂರು, ಪಣಜಿ, ದೆಹಲಿ ಸೇರಿದಂತೆ ದೇಶದ ವಿವಿಧ ಕಡೆಗಳಲ್ಲಿ ಚರ್ಚ್ ಗಳಲ್ಲಿ ಕ್ರೈಸ್ತ ಬಾಂಧವರು ಸಾಮೂಹಿಕ ಪ್ರಾರ್ಥನೆ ಸಲ್ಲಿಸಿದರು.
ಕ್ರಿಸ್ ಮಸ್ ಹಬ್ಬದ ಪ್ರಯುಕ್ತ ಗೋವಾದ ರಾಜಧಾನಿ ಪಣಜಿಯಲ್ಲಿನ ಇಮ್ಯಾಕ್ಯುಲೇಟ್ ಕಾನ್ಸೆಪ್ಷನ್ ಚರ್ಚ್ ವೈವಿಧ್ಯಮಯ, ವರ್ಣಮಯ ವಿದ್ಯುತ್ ದೀಪಾಲಂಕಾರ ಹಾಗೂ ಚಿತ್ತಾಕರ್ಷಕ ನಕ್ಷತ್ರಗಳಿಂದ ಕಂಗೊಳಿಸುತಿತ್ತು. ಗೋದಲಿಯಲ್ಲಿ ಬಾಲ ಯೇಸುಮೂರ್ತಿಯನ್ನು ಇಟ್ಟು ದೇವರ ಸ್ತುತಿ, ಜೋಗಳುದ ಮೂಲಕ ಭಕ್ತಾಧಿಗಳು ಆರಾಧಿಸಿದರು. ಮೇಣದ ಬತ್ತಿಗಳನ್ನು ಬೆಳಗಿ ಯೇಸು ಜನ್ಮ ದಿನವನ್ನು ಸ್ವಾಗತಿಸಿದರು.
ಬೆಂಗಳೂರಿನ ಸೇಂಟ್ ಫ್ರಾನ್ಸಿಸ್ ಜೇವಿಯರ್ಸ್ ಕ್ಯಾಥೆಡ್ರಲ್ ಚರ್ಚ್ ನಲ್ಲಿ ಮಧ್ಯರಾತ್ರಿ ಅಪಾರ ಪ್ರಮಾಣದಲ್ಲಿ ನೆರೆದಿದ್ದ ಭಕ್ತಾಧಿಗಳು ಸಾಮೂಹಿಕ ಪ್ರಾರ್ಥನೆ ಸಲ್ಲಿಸಿದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


