'ರಾಹುಲ್ ಮತ್ತು ಪ್ರಿಯಾಂಕಾ ಜೀವಂತ ಪೆಟ್ರೋಲ್ ಬಾಂಬ್ಗಳು, ಹೋದಲ್ಲೆಲ್ಲ ಬೆಂಕಿ ಹೊತ್ತಿಸುತ್ತಾರೆ'
ಪ್ರಿಯಾಂಕಾ ಗಾಂಧಿ ಹಾಗೂ ರಾಹುಲ್ ಗಾಂಧಿ ವಿರುದ್ಧ ಹರಿಯಾಣ ಸಚಿವ ಮತ್ತು ಬಿಜೆಪಿ ನಾಯಕ ಅನಿಲ್ ವಿಜ್ ತೀವ್ರ ವಾಗ್ದಾಳಿ ನಡೆಸಿದ್ದಾರೆ.

ಹರ್ಯಾಣ: ಪ್ರಿಯಾಂಕಾ ಗಾಂಧಿ ಹಾಗೂ ರಾಹುಲ್ ಗಾಂಧಿ ವಿರುದ್ಧ ಹರಿಯಾಣ ಸಚಿವ ಮತ್ತು ಬಿಜೆಪಿ ನಾಯಕ ಅನಿಲ್ ವಿಜ್ ತೀವ್ರ ವಾಗ್ದಾಳಿ ನಡೆಸಿದ್ದಾರೆ.
ರಾಹುಲ್ ಗಾಂಧಿ ಹಾಗೂ ಪ್ರಿಯಾಂಕಾ ಗಾಂಧಿ ನಿನ್ನೆ ಉತ್ತರ ಪ್ರದೇಶದಲ್ಲಿ ಸಿಎಎ ವಿರೋಧಿ ಪ್ರತಿಭಟನೆ ವೇಳೆ ಮೃತಪಟ್ಟವರ ಕುಟುಂಬಗಳಿಗೆ ಸಾಂತ್ವನ ಹೇಳಲು ಮೇರಠ್ಗೆ ತೆರಳಿದ್ದರು. ಆದರೆ ಅವರನ್ನು ಪೊಲೀಸರು ಮುಂದಡಿ ಇಡಲು ಬಿಟ್ಟಿರಲಿಲ್ಲ.
ಅದಾದ ಕೆಲವೇ ಹೊತ್ತಲ್ಲಿ ಹರಿಯಾಣ ಸಚಿವ ಅನಿಲ್ ವಿಜ್ ಅವರು ಟ್ವೀಟ್ ಮಾಡಿ ಇವರಿಬ್ಬರ ವಿರುದ್ಧ ಅಸಮಾಧಾನ ಹೊರಹಾಕಿದ್ದಾರೆ.
ಪ್ರಿಯಾಂಕಾ ಗಾಂಧಿ ಹಾಗೂ ರಾಹುಲ್ ಗಾಂಧಿ ಬಗ್ಗೆ ಎಚ್ಚರಿಕೆ ಇರಲಿ. ಅವರಿಬ್ಬರೂ ಜೀವಂತ ಪೆಟ್ರೋಲ್ ಬಾಂಬ್ಗಳು. ಹೋದಲ್ಲೆಲ್ಲ ಬೆಂಕಿ ಹೊತ್ತಿಸುತ್ತಾರೆ. ಸಾರ್ವಜನಿಕ ಆಸ್ತಿಪಾಸ್ತಿಗಳ ನಾಶಕ್ಕೆ ಕಾರಣವಾಗುತ್ತಾರೆ ಎಂದು ಅನಿಲ್ ವಿಜ್ ಅವರು ಟ್ವೀಟ್ ಮಾಡಿದ್ದಾರೆ.
ಹರಿಯಾಣ ಸಚಿವ ಅನಿಲ್ ವಿಜ್ ಅವರು ವಿವಾದಾತ್ಮಕ ಹೇಳಿಕೆಗಳಿಂದಲೇ ಖ್ಯಾತರಾದವರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


