ದೇಶ

ನನ್ನ ಧ್ವನಿ ಯಾರಿಗೂ ಕೇಳುತ್ತಿಲ್ಲ: ಕಾಂಗ್ರೆಸ್ ತೊರೆದ ಮಾಜಿ ಸಂಸದೆ ಸಾವಿತ್ರಿಬಾಯಿ ಪುಲೆ

ಈ ವರ್ಷದ ಮಾರ್ಚ್‌ನಲ್ಲಿ ಬಿಜೆಪಿ ತೊರೆದು ಕಾಂಗ್ರೆಸ್ ಸೇರ್ಪಡೆಯಾಗಿದ್ದ ಮಾಜಿ ಸಂಸದೆ ಸಾವಿತ್ರಿಬಾಯಿ ಫುಲೆ ಗುರುವಾರ ಭಾರತದ ಅತ್ಯಂತ ಹಳೆ ರಾಜಕೀಯ ಪಕ್ಷವನ್ನು ತೊರೆದಿದ್ದಾರೆ. ಕಾಂಗ್ರೆಸ್ ಪಕ್ಷದಲ್ಲಿ ಅವರ ಧ್ವನಿ ಯಾರಿಗೂ ಕೇಳಿಸುತ್ತಿಲ್ಲ ಎಂದು ಅವರು ಆರೋಪಿಸಿದ್ದಾರೆ.

ನನ್ನ ಧ್ವನಿ ಯಾರಿಗೂ ಕೇಳುತ್ತಿಲ್ಲ: ಕಾಂಗ್ರೆಸ್ ತೊರೆದ ಮಾಜಿ ಸಂಸದೆ ಸಾವಿತ್ರಿಬಾಯಿ ಪುಲೆ
ಸಾವಿತ್ರಿಬಾಯಿ ಫುಲೆ
Published On :

ನವದೆಹಲಿ: ಈ ವರ್ಷದ ಮಾರ್ಚ್‌ನಲ್ಲಿ  ಬಿಜೆಪಿ ತೊರೆದು ಕಾಂಗ್ರೆಸ್ ಸೇರ್ಪಡೆಯಾಗಿದ್ದ ಮಾಜಿ ಸಂಸದೆ ಸಾವಿತ್ರಿಬಾಯಿ ಫುಲೆ ಗುರುವಾರ ಭಾರತದ ಅತ್ಯಂತ ಹಳೆ ರಾಜಕೀಯ ಪಕ್ಷವನ್ನು ತೊರೆದಿದ್ದಾರೆ. ಕಾಂಗ್ರೆಸ್ ಪಕ್ಷದಲ್ಲಿ ಅವರ ಧ್ವನಿ ಯಾರಿಗೂ ಕೇಳಿಸುತ್ತಿಲ್ಲ ಎಂದು ಅವರು ಆರೋಪಿಸಿದ್ದಾರೆ.

ಈ ಮುನ್ನ ಬಿಜೆಪಿಯಲ್ಲಿದ್ದ ಪುಲೆ ಕಳೆದ ಡಿಸೆಂಬರ್ ನಲ್ಲಿ  ಬಿ.ಆರ್.ಅಂಬೇಡ್ಕರ್ ಅವರ ಸ್ಮೃತಿದಿನದಂದು ಬಿಜೆಪಿಯ ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ಸಲ್ಲಿಸಿದ್ದರು.ಆಗ ಆಡಳಿತ ಪಕ್ಷವು "ಸಮಾಜದಲ್ಲಿ ವಿಭಜನೆಗಳನ್ನು ಸೃಷ್ಟಿಸಲು ಪ್ರಯತ್ನಿಸುತ್ತಿದೆ" ಎಂದು ಅವರು ಆರೋಪಿಸಿದ್ದರು.

ಮಾಯಾವತಿಯವರ ಬಿಎಸ್ಪಿ ಜತೆಗೆ ಸಹ ಗುರುತಿಸಿಕೊಂಡಿದ್ದ ಪುಲೆ 2000 ರಲ್ಲಿ ಬಿಜೆಪಿಗೆ ಸೇರಿದರು ಮತ್ತು 2002, 2007 ಮತ್ತು 2012 ರಲ್ಲಿ ವಿಧಾನಸಭಾ ಚುನಾವಣೆಯಲ್ಲಿ ಸ್ಪರ್ಧಿಸಿದರು. ಅವರು 2012 ರ ಚುನಾವಣೆಗಳಲ್ಲಿ ಮತ್ತು ನಂತರ 2014 ರ ಲೋಕಸಭಾ ಚುನಾವಣೆಯಲ್ಲಿ ಗೆಲ್ಲುವಲ್ಲಿ ಯಶಸ್ವಿಯಾಗಿದ್ದರು

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.