ದೇಶ

ಮಮತಾ ಬ್ಯಾನರ್ಜಿ ಮಾನಸಿಕ ಸಮತೋಲನವನ್ನು ಕಳೆದುಕೊಂಡಿದ್ದಾರೆ: ಕೈಲಾಶ್ ವಿಜಯವರ್ಗೀಯ

ಪೌರತ್ವ ಕಾಯ್ದೆ ವಿರುದ್ಧದ ಪ್ರತಿಭಟನೆ ಮುಂದುವರೆಸುವಂತೆ ವಿದ್ಯಾರ್ಥಿಗಳಿಗೆ ಕರೆ ನೀಡಿರುವ ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿಯವರು ಮಾನಸಿಕ ಸಮತೋಲನವನ್ನು ಕಳೆದುಕೊಂಡಿದ್ದಾರೆಂದು ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಕೈಲಾಶ್ ವಿಜಯವರ್ಗೀಯ ಅವರು ಹೇಳಿದ್ದಾರೆ.

ಮಮತಾ ಬ್ಯಾನರ್ಜಿ ಮಾನಸಿಕ ಸಮತೋಲನವನ್ನು ಕಳೆದುಕೊಂಡಿದ್ದಾರೆ: ಕೈಲಾಶ್ ವಿಜಯವರ್ಗೀಯ
ಕೈಲಾಶ್ ವಿಜಯವರ್ಗೀಯ
Published On :

ಇಂದೋರ್: ಪೌರತ್ವ ಕಾಯ್ದೆ ವಿರುದ್ಧದ ಪ್ರತಿಭಟನೆ ಮುಂದುವರೆಸುವಂತೆ ವಿದ್ಯಾರ್ಥಿಗಳಿಗೆ ಕರೆ ನೀಡಿರುವ ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿಯವರು ಮಾನಸಿಕ ಸಮತೋಲನವನ್ನು ಕಳೆದುಕೊಂಡಿದ್ದಾರೆಂದು ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಕೈಲಾಶ್ ವಿಜಯವರ್ಗೀಯ ಅವರು ಹೇಳಿದ್ದಾರೆ. 

ಸುದ್ದಿಗಾರರೊಂದಿಗೆ ಮಾತನಾಡಿರುವ ಅವರು, ಮಮತಾ ಬ್ಯಾನರ್ಜಿಯವರು ಮಾನಸಿಕ ಸಮತೋಲನವನ್ನು ಕಳೆದಕೊಂಡಿದ್ದಾರೆ. ಪೌರತ್ವ ಕಾಯ್ದೆ ಬಳಿಕ ನುಸುಳುಕೋರರನ್ನು ಕಂಡು ಹಿಡಿಯಲಾಗುತ್ತಿದೆ. ಇದರಿಂದ ಅವರ ವೋಟ್ ಬ್ಯಾಂಕ್ ಮೇಲೆ ಪರಿಣಾಮ ಬೀರುತ್ತಿದೆ. ಹೀಗಾಗಿ ಮಮತಾ ಮಾನಸಿಕ ಸಮತೋಲನವನ್ನು ಕಳೆದುಕೊಲ್ಳುತ್ತಿದ್ದಾರೆ. ಅವರಿಗೆ ವೈದ್ಯಕೀಯ ಚಿಕಿತ್ಸೆಯ ಅಗತ್ಯವಿದೆ ಎಂದು ಹೇಳಿದ್ದಾರೆ. 

ರ್ಯಾಲಿಯೊಂದರಲ್ಲಿ ಮಾತನಾಡಿದ್ದ ಮಮತಾ, ಕಾಯ್ದೆ ವಾಪಸ್ ಪಡೆಯುವವರೆಗೂ ಯಾವುದೇ ಹೆದರಿಕೆಯಿಲ್ಲದೆ ನೀವು ಹೋರಾಟ ಮುಂದುವರೆಸಿ. ನಿಮ್ಮ ಜೊತೆ ನಾವಿದ್ದೇವೆಂದು ಅಭಯ ನೀಡಿದ್ದಾರೆ. ಅಲ್ಲದೆ, ಎಲ್ಲಾ ಪಕ್ಷಗಳಿಗೆ ಮಸಿ ಬಳಿಯಲು ಯತ್ನಿಸುತ್ತಿರುವ ಬಿಜೆಪಿ, ತಾನು ಮಾತ್ರ ಶ್ವೇತ ವರ್ಣ ಎಂಬಂತೆ ಬೀಗುತ್ತಿದೆ ಎಂದು ಹೇಳಿದ್ದರು. 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.