'ಕುತ್ತಿಗೆ ಪಟ್ಟಿ ಹಿಡಿದು ನೂಕಿದರು': ಉತ್ತರ ಪ್ರದೇಶ ಪೊಲೀಸರ ವಿರುದ್ಧ ಪ್ರಿಯಾಂಕಾ ಗಾಂಧಿ ಆರೋಪ
ನಿವೃತ್ತ ಐಪಿಎಸ್ ಅಧಿಕಾರಿ ಎಸ್.ಆರ್.ದರಪುರಿ ಅವರ ನಿವಾಸಕ್ಕೆ ಭೇಟಿ ನೀಡುವ ವೇಳೆ ನನ್ನನ್ನು ತಡೆದ ಉತ್ತರ ಪ್ರದೇಶ ಪೊಲೀಸರು ಹಲ್ಲೆ ಮಾಡಿದ್ದಾರೆ ಎಂದು ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ಗಂಭೀರ ಆರೋಪ ಮಾಡಿದ್ದಾರೆ.

ಲಖನೌ: ನಿವೃತ್ತ ಐಪಿಎಸ್ ಅಧಿಕಾರಿ ಎಸ್.ಆರ್.ದರಪುರಿ ಅವರ ನಿವಾಸಕ್ಕೆ ಭೇಟಿ ನೀಡುವ ವೇಳೆ ನನ್ನನ್ನು ತಡೆದ ಉತ್ತರ ಪ್ರದೇಶ ಪೊಲೀಸರು ಹಲ್ಲೆ ಮಾಡಿದ್ದಾರೆ ಎಂದು ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ಗಂಭೀರ ಆರೋಪ ಮಾಡಿದ್ದಾರೆ.
ಪೌರತ್ವ ತಿದ್ದುಪಡಿ ಕಾಯ್ದೆ (ಸಿಎಎ) ವಿರೋಧಿಸಿ ಪ್ರತಿಭಟನೆ ನಡೆಸಿ ಬಂಧಿತರಾಗಿರುವ ನಿವೃತ್ತ ಐಪಿಎಸ್ ಅಧಿಕಾರಿ ಎಸ್.ಆರ್.ದರಪುರಿ ಅವರ ನಿವಾಸಕ್ಕೆ ಭೇಟಿ ನೀಡಲು ದ್ವಿಚಕ್ರ ವಾಹನದಲ್ಲಿ ತೆರಳುತ್ತಿದ್ದ ಪ್ರಿಯಾಂಕಾ ವಾದ್ರಾ ಗಾಂಧಿ ಅವರನ್ನು ಮಾರ್ಗ ಮಧ್ಯೆ ಉತ್ತರ ಪ್ರದೇಶ ಪೊಲೀಸರು ತಡೆದಿದ್ದು, ಈ ವೇಳೆ ಪ್ರಿಯಾಂಕಾ ಗಾಂಧಿ ಮತ್ತು ಪೊಲೀಸರ ನಡುವೆ ವಾಕ್ಸರಮ ಏರ್ಪಟ್ಟಿತ್ತು. ಅದಾಗ್ಯೂ ಪೊಲೀಸರಿಂದ ತಪ್ಪಿಸಿಕೊಂಡಿದ್ದ ಪ್ರಿಯಾಂಕಾ ನಿವೃತ್ತ ಐಪಿಎಸ್ ಅಧಿಕಾರಿ ಎಸ್.ಆರ್.ದರಪುರಿ ಅವರ ನಿವಾಸಕ್ಕೆ ತೆರಳುವಲ್ಲಿ ಯಶಸ್ವಿಯಾಗಿದ್ದರು.
ಈ ಘಟನೆ ಉತ್ತರ ಪ್ರದೇಶದಲ್ಲಿ ಕೆಲಕಾಲ ರಾಜಕೀಯ ಹೈಡ್ರಾಮಕ್ಕೆ ಕಾರಣವಾಗಿತ್ತು. ಭೇಟಿ ಬಳಿಕ ಮಾಧ್ಯಮಗಳೊಂದಿಗೆ ಈ ಕುರಿತು ಮಾತನಾಡಿದ ಪ್ರಿಯಾಂಕಾ, ಉತ್ತರ ಪ್ರದೇಶ ಪೊಲೀಸರು ಹಲ್ಲೆ ಮಾಡಿದರು ಎಂದು ಗಂಭೀರ ಆರೋಪ ಮಾಡಿದರು.
'ಪೊಲೀಸರು ನನ್ನನ್ನು ಸುತ್ತುವರಿದಿದ್ದರು. ಒಬ್ಬ ಮಹಿಳಾ ಪೇದೆ ನನ್ನ ಕತ್ತು ಹಿಡಿದುಕೊಂಡರೆ, ಮತ್ತೊಬ್ಬರು ತಳ್ಳಿದರು. ಅಧಿಕಾರಿ ಮನೆಗೆ ತೆರಳುತ್ತಿದ್ದ ನಮಗೆ ಅಡ್ಡಲಾಗಿ ಪೊಲೀಸ್ ವಾಹನವನ್ನು ನಿಲ್ಲಿಸಿ ಅಡ್ಡಗಟ್ಟಲಾಯಿತು. ನೀವು ಹೋಗುವಂತಿಲ್ಲ ಎಂದು ತಡೆದರು' ಎಂದು ಪ್ರಿಯಾಂಕಾ ಗಾಂಧಿ ಆರೋಪಿಸಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


