ವೈರಮುತ್ತುಗೆ ಡಾಕ್ಟರೇಟ್: ಹಿಂದೂಪರ ಸಂಘಟನೆಗಳ ವಿರೋಧ ಹಿನ್ನೆಲೆ ಚೆನ್ನೈ ಭೇಟಿ ರದ್ದುಗೊಳಿಸಿದ ರಾಜನಾಥ್ ಸಿಂಗ್
ಖ್ಯಾತ ತಮಿಳು ಸಾಹಿತಿ ವೈರಮುತ್ತು ಅವರಿಗೆ ಗೌರವ ಡಾಕ್ಟರೇಟ್ ನೀಡಲು ಖಾಸಗಿ ವಿಶ್ವವಿದ್ಯಾಲಯವೊಂದು ನಿರ್ಧರಿಸಿರುವ ಹಿನ್ನೆಲೆಯಲ್ಲಿ ಹಿಂದೂಪರ ಸಂಘಟನೆಗಳು ಇದಕ್ಕೆ ವಿರೋಧ ವ್ಯಕ್ತಪಡಿಸಿದ್ದು, ಈ ಹಿನ್ನೆಲೆಯಲ್ಲಿ ಕಾರ್ಯಕ್ರಮಕ್ಕೆ ಭೇಟಿ...

ಚೆನ್ನೈ: ಖ್ಯಾತ ತಮಿಳು ಸಾಹಿತಿ ವೈರಮುತ್ತು ಅವರಿಗೆ ಗೌರವ ಡಾಕ್ಟರೇಟ್ ನೀಡಲು ಖಾಸಗಿ ವಿಶ್ವವಿದ್ಯಾಲಯವೊಂದು ನಿರ್ಧರಿಸಿರುವ ಹಿನ್ನೆಲೆಯಲ್ಲಿ ಹಿಂದೂಪರ ಸಂಘಟನೆಗಳು ಇದಕ್ಕೆ ವಿರೋಧ ವ್ಯಕ್ತಪಡಿಸಿದ್ದು, ಈ ಹಿನ್ನೆಲೆಯಲ್ಲಿ ಕಾರ್ಯಕ್ರಮಕ್ಕೆ ಭೇಟಿ ನೀಡಬೇಕಿದ್ದ ರಕ್ಷಣಾ ಸಚಿವ ರಾಜನಾಥ್ ಸಿಂಗ್ ಅವರು ಚೆನ್ನೈ ಭೇಟಿಯನ್ನು ರದ್ದುಗೊಳಿಸಿದ್ದಾರೆಂದು ತಿಳಿದುಬಂದಿದೆ.
ಈ ಕುರಿತು ಬಿಜೆಪಿ ವಕ್ತಾರ ಎಸ್.ಜಿ.ಸುರ್ಯಾಹ್ ಅವರು ಸ್ಪಷ್ಟನೆ ನೀಡಿದ್ದು, ತಮಿಳಿಗರು ಹಾಗೂ ತಮಿಳುನಾಡು ಜನತೆಯ ಭಾವನಗಳಿಗೆ ಗೌರವ ನೀಡಿರುವ ರಾಜನಾಥ್ ಸಿಂಗ್ ಅವರು, ಚೆನ್ನೈ ಭೇಟಿ ರದ್ದುಗೊಳಿಸಿದ್ದಾರೆಂದು ಹೇಳಿದ್ದಾರೆ.
ತಮಿಳುನಾಡು ಜನತೆ ಹಾಗೂ ಬಿಜೆಪಿ ಸದಸ್ಯದ ಭಾವನೆಗಳಿಗೆ ಗೌರವ ನೀಡಿದ್ದಕ್ಕೆ ರಾಜನಾಥ್ ಸಿಂಗ್ ಅವರಿಗೆ ಈ ಮೂಲಕ ಧನ್ಯವಾದಗಳನ್ನು ಸಲ್ಲಿಸುತ್ತೇವೆಂದು ತಿಳಿಸಿದ್ದಾರೆ.
ಖಾಸಗಿ ವಿಶ್ವವಿದ್ಯಾಲಯವೊಂದು ಶನಿವಾರ ಘಟಿಕೋತ್ಸವ ಸಮಾರಂಭ ನಡೆಸಲು ಸಿದ್ಧತೆಗಳನ್ನು ನಡೆಸಿತ್ತು. ಇದೇ ಸಮಾರಂಭದಲ್ಲಿ ಸಾಹಿತಿ ವೈರಮುತ್ತು ಅವರಿಗೆ ಗೌರವ ಡಾಕ್ಟರೇಟ್ ನೀಡಲು ನಿರ್ಧರಿಸಿತ್ತು. ಇದರಂತೆ ಕಾರ್ಯಕ್ರಮಕ್ಕೆ ರಕ್ಷಣಾ ಸಚಿವ ರಾಜನಾಥ್ ಸಿಂಗ್ ಅವರನ್ನು ಆಹ್ವಾನಿಸಿತ್ತು.
ಕಾರ್ಯಕ್ರಮಕ್ಕೆ ಹಾಜರಾಗಬೇಕಿದ್ದ ರಾಜನಾಥ್ ಸಿಂಗ್ ಅವರು, ವೈರಮುತ್ತು ಅವರಿಗೆ ಡಾಕ್ಟರೇಟ್ ನೀಡುವುದಕ್ಕೆ ಹಿಂದೂ ಪರ ಸಂಘಟನೆಗಳು ವಿರೋಧ ವ್ಯಕ್ತಪಡಿಸಿದ ಹಿನ್ನೆಲೆಯಲ್ಲಿ ಚೆನ್ನೈ ಭೇಟಿಯನ್ನೇ ರದ್ದುಗೊಳಿಸಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


