ನುಸುಳುಕೋರರ ಮೇಲೆ ರಾಹುಲ್'ಗೆ ಪ್ರೀತಿಯಿದ್ದರೆ, ಇಟಲಿಗೆ ಕರೆದೊಯ್ಯಲಿ: ಗಿರಿರಾಜ್ ಸಿಂಗ್
ನುಸುಳುಕೋರರ ಮೇಲೆ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿಯವರಿಗೆ ಪ್ರೀತಿಯಿದ್ದರೆ, ಅವರನ್ನು ಇಟಲಿಗೆ ಕರೆದೊಯ್ಯಲಿ ಎಂದು ಕೇಂದ್ರ ಸಚಿವ ಗಿರಿರಾಜ್ ಸಿಂಗ್ ಅವರು ಹೇಳಿದ್ದಾರೆ.

ರಾಂಚಿ: ನುಸುಳುಕೋರರ ಮೇಲೆ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿಯವರಿಗೆ ಪ್ರೀತಿಯಿದ್ದರೆ, ಅವರನ್ನು ಇಟಲಿಗೆ ಕರೆದೊಯ್ಯಲಿ ಎಂದು ಕೇಂದ್ರ ಸಚಿವ ಗಿರಿರಾಜ್ ಸಿಂಗ್ ಅವರು ಹೇಳಿದ್ದಾರೆ.
ಸುದ್ದಿಗಾರೊಂದಿಗೆ ಮಾತನಾಡಿರುವ ಅವರು, ಪೌರತ್ವ ಕಾಯ್ದೆ ಕುರಿತಂತೆ ಇಲ್ಲಸಲ್ಲದ ಗೊಂದಲಗಳನ್ನು ಸೃಷ್ಟಿಸಿ ದೇಶವನ್ನು ಒಡೆಯುವ ಪ್ರಯತ್ನಗಳು ನಡೆಯುತ್ತಿವೆ. ರಾಹುಲ್ ಗಾಂಧಿಯವರಿಗೆ ನುಸುಳುಕೋರರ ಮೇಲೆ ಪ್ರೀತಿ ಇರುವುದೇ ಆದರೆ, ಇಟಲಿಗೆ ಕರೆದುಕೊಂಡು ಹೋಗಲಿ ಎಂದು ಹೇಳಿದ್ದಾರೆ.
ಯುಪಿಎ ಸರ್ಕಾರ ಅಧಿಕಾರದಲ್ಲಿದ್ದಾ ಪೌರತ್ವ ಮಸೂದೆ ಬಗ್ಗೆ ಮಾತುಕತೆ ನಡೆಸಿದ್ದರು. ಆದರೆ, ಓಲೈಕೆಯ ರಾಜಕೀಯದಿಂದ ಅದನ್ನು ಮುಂದುವರೆಸಿರಲಿಲ್ಲ. ಇದೀಗ ಅದೇ ಕಾಂಗ್ರೆಸ್ ಸುಳ್ಳುಗಳನ್ನು ದೇಶವನ್ನು ಒಡೆಯಲು ಬಯಸುತ್ತಿದೆ ಎಂದು ಆರೋಪಿಸಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


