ಪೌರತ್ವ ಕಾಯ್ದೆ ಕುರಿತು ಹೇಳಿಕೆ: ನಿಮ್ಮ ಕೆಲಸ ನೋಡಿಕೊಳ್ಳಿ- ಸೇನಾ ಮುಖ್ಯಸ್ಥ ರಾವತ್ ವಿರುದ್ಧ ಚಿದಂಬರಂ ಕಿಡಿ
ಪೌರತ್ವ ತಿದ್ದುಪಡಿ ಕಾಯ್ದೆ ಕುರಿತು ಹೇಳಿಕೆ ನೀಡಿದ್ದ ಸೇನಾ ಮುಖ್ಯಸ್ಥ ಬಿಪಿನ್ ರಾವತ್ ಅವರ ಹೇಳಿಕೆಗೆ ಕಿಡಿಕಾರಿರುವ ಕಾಂಗ್ರೆಸ್ ಹಿರಿಯ ನಾಯಕ ಪಿ.ಚಿದಂಬರಂ ಅವರು, ನಿಮ್ಮ ಕೆಲಸವನ್ನು ನೋಡಿಕೊಳ್ಳಿ ಎಂದು ಹೇಳಿದ್ದಾರೆ.

ತಿರುವನಂತಪುರ: ಪೌರತ್ವ ತಿದ್ದುಪಡಿ ಕಾಯ್ದೆ ಕುರಿತು ಹೇಳಿಕೆ ನೀಡಿದ್ದ ಸೇನಾ ಮುಖ್ಯಸ್ಥ ಬಿಪಿನ್ ರಾವತ್ ಅವರ ಹೇಳಿಕೆಗೆ ಕಿಡಿಕಾರಿರುವ ಕಾಂಗ್ರೆಸ್ ಹಿರಿಯ ನಾಯಕ ಪಿ.ಚಿದಂಬರಂ ಅವರು, ನಿಮ್ಮ ಕೆಲಸವನ್ನು ನೋಡಿಕೊಳ್ಳಿ ಎಂದು ಹೇಳಿದ್ದಾರೆ.
ಕಾಯ್ದೆ ವಿರುದ್ಧ ಕೇರಳದಲ್ಲಿ ನಡೆದ ಮಹಾ ರ್ಯಾಲಿಯಲ್ಲಿ ಪಾಲ್ಗೊಂಡಿದ್ದ ಚಿದಂಬರಂ ಅವರು ಬಿಪಿನ್ ರಾವತ್ ಅವರ ವಿರುದ್ಧ ಕಿಡಿಕಾರಿದ್ದಾರೆ.
ಸೇನಾ ಮುಖ್ಯಸ್ಥರು ಹಾಗೂ ಉತ್ತರಪ್ರದೇಶದ ಪೊಲೀಸ್ ಅಧಿಕಾರಿಗಳಿಗೆ ಸರ್ಕಾರಕ್ಕೆ ಬೆಂಬಲ ಸೂಚಿಸಿವಂತೆ ಆದೇಶಿಸಲಾಗುತ್ತಿದ್ದು. ಇದು ನಿಜಕ್ಕೂ ನಾಚಿಕೆಗೇಡಿನ ಸಂಗತಿ ಎಂದು ಹೇಳಿದ್ದಾರೆ.
ಸರ್ಕಾರದ ಪರ ಮಾತನಾಡುವಂತೆ ಸೇನಾ ಮುಖ್ಯಸ್ಥರಿಗೆ ತಿಳಿಸಲಾಗುತ್ತಿದೆ. ಇದು ಸೇನಾ ಮುಖ್ಯಸ್ಥರ ಕೆಲಸವೇ? ಸರ್ಕಾರಕ್ಕೆ ಬೆಂಬಲ ನೀಡುವಂತೆ ಸೇನಾ ಮುಖ್ಯಸ್ಥರನ್ನು ಕೇಳುತ್ತಿರುವುದು ನಾಚಿಕೆಗೇಡಿನ ವಿಚಾರ. ನೀವು ಸೇನಾ ಮುಖ್ಯಸ್ಥರು, ನಿಮ್ಮ ಕೆಲಸವನ್ನು ನೀವು ನೋಡಿಕೊಳ್ಳಿ. ರಾಜಕೀಯ ನಾಯಕರು ಏನನ್ನು ಮಾಡಬೇಕೋ ಅದನ್ನು ಅವರು ನೋಡಿಕೊಳ್ಳುತ್ತಾರೆ ಎಂಬುದನ್ನು ಈ ಮೂಲಕ ರಾವತ್ ಅವರಿಗೆ ಮನವಿ ಮಾಡಿಕೊಳ್ಳುತ್ತೇನೆಂದು ಹೇಳಿದ್ದಾರೆ.
ಯುದ್ಧದಲ್ಲಿ ಹೇಗೆ ಹೋರಾಡಬೇಕು ಎಂಬುದನ್ನು ಹೇಳುವುದು ನಮ್ಮ ಕೆಲಸವಲ್ಲ. ನಿಮ್ಮ ಆಲೋಚನೆಗೆ ತಕ್ಕಂತೆ ನೀವು ಹೋರಾಡುತ್ತೀರಿಚ ನಮ್ಮ ದೇಶದ ರಾಜಕೀಯವನ್ನು ನಾವು ನಿಭಾಯಿಸಿಕೊಳ್ಳುತ್ತೇವೆಂದು ತಿಳಿಸಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


