ಆಧಾರ್-ಪ್ಯಾನ್ ಲಿಂಕ್: ಮಾರ್ಚ್ ಗೆ ಅಂತಿಮ ಗಡುವು ವಿಸ್ತರಣೆ
ಆಧಾರ್ ಸಂಖ್ಯೆ ಜೊತೆ ಪ್ಯಾನ್ ಕಾರ್ಡ್ ಅನ್ನು ಜೋಡಣೆ ಮಾಡುವ ಗಡುವನ್ನು ಕೇಂದ್ರ ಸರ್ಕಾರ ಮತ್ತೆ ವಿಸ್ತರಣೆ ಮಾಡಿದ್ದು, ಈಗ ಗಡುವನ್ನು ಡಿಸೆಂಬರ್ 31ರಿಂದ ಮಾರ್ಚ್ ತಿಂಗಳಿಗೆ ವಿಸ್ತರಣೆ ಮಾಡಿದೆ.

ನವದೆಹಲಿ: ಆಧಾರ್ ಸಂಖ್ಯೆ ಜೊತೆ ಪ್ಯಾನ್ ಕಾರ್ಡ್ ಅನ್ನು ಜೋಡಣೆ ಮಾಡುವ ಗಡುವನ್ನು ಕೇಂದ್ರ ಸರ್ಕಾರ ಮತ್ತೆ ವಿಸ್ತರಣೆ ಮಾಡಿದ್ದು, ಈಗ ಗಡುವನ್ನು ಡಿಸೆಂಬರ್ 31ರಿಂದ ಮಾರ್ಚ್ ತಿಂಗಳಿಗೆ ವಿಸ್ತರಣೆ ಮಾಡಿದೆ.
ಈ ಮೊದಲು ಆದಾಯ ತೆರಿಗೆ ಇಲಾಖೆಯು ಮಾಧ್ಯಮಗಳಿಗೆ ನೀಡಿದ್ದ ಜಾಹೀರಾತಿನಲ್ಲಿ ಡಿಸೆಂಬರ್ 31ರೊಳಗೆ ಆಧಾರ್-ಪ್ಯಾನ್ ಲಿಂಕ್ ಮಾಡಲು ಸೂಚಿಸಲಾಗಿತ್ತು. ಇದೀಗ ಈ ಗಡುವನ್ನು ಡಿಸೆಂಬರ್ 31ರಿಂದ ಮಾರ್ಚ್ ತಿಂಗಳವರೆಗೆ ವಿಸ್ತರಿಸಲಾಗಿದೆ. ಈ ಸಂಬಂಧ ಇಂದು ನಡೆದ ಹಣಕಾಸು ಸಚಿವಾವಲಯದ ಸಭೆಯಲ್ಲಿ ನಿರ್ಣಯ ಕೈಗೊಳ್ಳಲಾಗಿದೆ ಎಂದು ತಿಳಿದುಬಂದಿದೆ.
ಆಧಾರ್ ಜೊತೆ ಪ್ಯಾನ್ ಜೋಡಣೆ ಮಾಡುವ ತನಕ ತೆರಿಗೆ, ಬ್ಯಾಂಕಿಂಗ್, ಹಣಕಾಸು ವ್ಯವಹಾರಗಳಿಗೆ ತೊಡಕಾಗುವ ಅವಕಾಶಗಳಿವೆ. ಈ ಮೊದಲು ಪ್ಯಾನ್-ಆಧಾರ್ ಜೋಡಣೆಗೆ 2019ರ ಡಿಸೆಂಬರ್ 31 ಕಡೆಯ ದಿನವಾಗಿತ್ತು
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


