ಪ್ರಧಾನಿ ಮೋದಿ ನಿವಾಸದ ಬಳಿ ಅಗ್ನಿ ಆಕಸ್ಮಿಕ, 9 ಅಗ್ನಿಶಾಮಕ ವಾಹನಗಳ ದೌಡು!
ಪ್ರಧಾನಿ ನರೇಂದ್ರ ಮೋದಿ ಅವರ ದೆಹಲಿಯ ಅಧಿಕೃತ ನಿವಾಸದ ಬಳಿ ಅಗ್ನಿ ಅವಘಡ ಸಂಭವಿಸಿದ್ದು, 9 ಅಗ್ನಿಶಾಮಕ ವಾಹನಗಳು ತೆರಳಿ ಬೆಂಕಿ ನಂದಿಸಿವೆ.

ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಅವರ ದೆಹಲಿಯ ಅಧಿಕೃತ ನಿವಾಸದ ಬಳಿ ಅಗ್ನಿ ಅವಘಡ ಸಂಭವಿಸಿದ್ದು, 9 ಅಗ್ನಿಶಾಮಕ ವಾಹನಗಳು ತೆರಳಿ ಬೆಂಕಿ ನಂದಿಸಿವೆ.
ದೆಹಲಿಯ 7 ಲೋಕ ಕಲ್ಯಾಣ ಮಾರ್ಗದಲ್ಲಿರುವ ಪ್ರಧಾನಿ ನರೇಂದ್ರ ಮೋದಿ ಅವರ ಅಧಿಕೃತ ನಿವಾಸದ ಬಳಿಕ ಬೆಂಕಿ ಅವಘಡ ಸಂಭವಿಸಿದ್ದು, ಇಂದು ಸಂಜೆ ಸುಮಾರು 7.20ರ ಸುಮಾರಿನಲ್ಲಿ ಬೆಂಕಿ ಕಾಣಿಸಿಕೊಂಡಿದೆ. ವಿಚಾರ ತಿಳಿದ ಕೂಡಲೇ ಅಧಿಕಾರಿಗಳು ಅಗ್ನಿಶಾಮಕದಳಕ್ಕೆ ಮಾಹಿತಿ ನೀಡಿದ್ದು, ಕೂಡಲೇ ಸುಮಾರು 9 ಅಗ್ನಿಶಾಮಕ ವಾಹನಗಳು ಸ್ಥಳಕ್ಕೆ ದೌಡಾಯಿ ಬೆಂಕಿ ನಂದಿಸುವ ಕೆಲಸ ಮಾಡಿವೆ.
ಮೂಲಗಳ ಪ್ರಕಾರ ಪ್ರಧಾನಿ ಮೋದಿ ನಿವಾಸದ ಬಳಿ ಇರುವ ಸ್ಪೆಷಲ್ ಪ್ರೊಟೆಕ್ಷನ್ ಗ್ರೂಪ್ ರಿಸೆಪ್ಷನ್ ಏರಿಯಾದಲ್ಲಿ ಶಾರ್ಟ್ ಸರ್ಕ್ಯೂಟ್ ನಿಂದಾಗಿ ಬೆಂಕಿ ತಗುಲಿದೆ ಎನ್ನವಾಗಿದೆ.
ಈ ಕುರಿತಂತೆ ಪ್ರಧಾನಿ ಮೋದಿ ಕೂಡ ಟ್ವೀಟ್ ಮಾಡಿದ್ದು, ಬೆಂಕಿ ನಿಯಂತ್ರಣಕ್ಕೆ ಬಂದಿದೆ ಎಂದು ಟ್ವೀಟ್ ಮಾಡಿದ್ದಾರೆ. ಇನ್ನು ಘಟನಾ ಸ್ಥಳಕ್ಕೆ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಹೆಚ್ಚುವರಿ ಮುಂಜಾಗ್ರತೆ ವಹಿಸಿ ಪರಿಶೀಲನೆ ನಡೆಸಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


