ದೇಶದ ಅರಣ್ಯ ವರದಿ ಬಿಡುಗಡೆ ಮಾಡಿದ ಜಾವಡೇಕರ್; ಅರಣ್ಯ ವೃದ್ಧಿಯಲ್ಲಿ ಕರ್ನಾಟಕ ಪ್ರಥಮ
ಕೇಂದ್ರ ಅರಣ್ಯ, ಪರಿಸರ ಮತ್ತು ಹವಾಮಾನ ಖಾತೆ ಸಚಿವ ಪ್ರಕಾಶ್ ಜಾವಡೇಕರ್ ಅವರು ಸೋಮವಾರ 'ಇಂಡಿಯಾ ಸ್ಟೇಟ್ ಆಫ್ ಫಾರೆಸ್ಟ್ ರಿಪೋರ್ಟ್'- 2019 ಅನ್ನು ಬಿಡುಗಡೆ ಮಾಡಿದರು.

ನವದೆಹಲಿ: ಕೇಂದ್ರ ಅರಣ್ಯ, ಪರಿಸರ ಮತ್ತು ಹವಾಮಾನ ಖಾತೆ ಸಚಿವ ಪ್ರಕಾಶ್ ಜಾವಡೇಕರ್ ಅವರು ಸೋಮವಾರ 'ಇಂಡಿಯಾ ಸ್ಟೇಟ್ ಆಫ್ ಫಾರೆಸ್ಟ್ ರಿಪೋರ್ಟ್'- 2019 ಅನ್ನು ಬಿಡುಗಡೆ ಮಾಡಿದರು.
ಇದೇ ವೇಳೆ ಮಾತನಾಡಿದ ಅವರು, ಭಾರತವು 2.5 ಬಿಲಿಯನ್ ಟನ್ ಇಂಗಾಲಕ್ಕೆ ಸಮನಾದ ಗುರಿಯನ್ನು ಸಾಧಿಸುವ ಹಾದಿಯಲ್ಲಿದೆ ಎಂದು ಹೇಳಿದರು.
ದೇಶದ ಅರಣ್ಯ ಸಂಪನ್ಮೂಲಗಳ ಮೌಲ್ಯಮಾಪನವನ್ನು ಪ್ರತಿ ಎರಡು ವರ್ಷಗಳಿಗೊಮ್ಮೆ ನಡೆಸುವ ಭಾರತ ಅರಣ್ಯ ಸಮೀಕ್ಷೆಯ ಈ ವರದಿಯಲ್ಲಿ, 3,976 ಚದರ ಕಿ.ಮೀ (ಶೇಕಡಾ 0.56 ) ಅರಣ್ಯ ವ್ಯಾಪ್ತಿ, 1,212 ಚದರ ಕಿ.ಮೀ (ಶೇಕಡಾ1.29 ) ಮರದ ಹೊದಿಕೆ ಹೆಚ್ಚಳವಾಗಿದೆ ಎಂದು ತಿಳಿಸಲಾಗಿದೆ. ಹಿಂದಿನ ವರ್ಷಕ್ಕೆ ಹೋಲಿಸಿದರೆ ದೇಶದ ಕೆಲವು ಭಾಗಗಳಲ್ಲಿ ಅರಣ್ಯ ವೃದ್ಧಿಯಾಗಿದ್ದು, ಕರ್ನಾಟಕ ಪ್ರಥಮ ಸ್ಥಾನದಲ್ಲಿದೆ ಎಂದರು.
ಕಳೆದ ಎರಡು ವರ್ಷಗಳಲ್ಲಿ ಕರ್ನಾಟಕ, ಕೇರಳ, ಆಂಧ್ರಪ್ರದೇಶ, ಜಮ್ಮು- ಕಾಶ್ಮೀರ ಮತ್ತು ಹಿಮಾಚಲ ಪ್ರದೇಶದಲ್ಲಿ ಅರಣ್ಯ ವೃದ್ದಿಯಾಗಿರುವುದಾಗಿ ಅವರು ತಿಳಿಸಿದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


