ಡಿ.31 ಮಧ್ಯರಾತ್ರಿಯಿಂದ ಕಾಶ್ಮೀರದಲ್ಲಿ ಎಸ್‌ಎಂಎಸ್ ಸೇವೆ ಪುನಾರಂಭ
ಮೊಬೈಲ್ ಸಂದೇಶ (ಎಸ್.ಎಂ.ಎಸ್)ಸ್ಥಗಿತಗೊಳಿಸಿದ ಸುಮಾರು ಐದು ತಿಂಗಳ ನಂತರ, ಡಿಸೆಂಬರ್ 31 ಮಧ್ಯರಾತ್ರಿಯಿಂದ ಕಾಶ್ಮೀರ ಕಣಿವೆಯಲ್ಲಿ ಮತ್ತೆ ಎಸ್‌ಎಂಎಸ್ ಸೇವೆಗಳನ್ನು ಪುನಃಸ್ಥಾಪಿಸಲಾಗುವುದು ಎಂದು ಜಮ್ಮು ಮತ್ತು ಕಾಶ್ಮೀರ ಪ್ರಧಾನ ಕಾರ್ಯದರ್ಶಿ ರೋಹಿತ್ ಕನ್ಸಾಲ್ ಮಂಗಳವಾರ ತಿಳಿಸಿದ್ದಾರೆ.

ಮೊಬೈಲ್ ಸಂದೇಶ (ಎಸ್.ಎಂ.ಎಸ್)ಸ್ಥಗಿತಗೊಳಿಸಿದ ಸುಮಾರು ಐದು ತಿಂಗಳ ನಂತರ, ಡಿಸೆಂಬರ್ 31 ಮಧ್ಯರಾತ್ರಿಯಿಂದ ಕಾಶ್ಮೀರ ಕಣಿವೆಯಲ್ಲಿ ಮತ್ತೆ ಎಸ್‌ಎಂಎಸ್ ಸೇವೆಗಳನ್ನು ಪುನಃಸ್ಥಾಪಿಸಲಾಗುವುದು ಎಂದು ಜಮ್ಮು ಮತ್ತು ಕಾಶ್ಮೀರ ಪ್ರಧಾನ ಕಾರ್ಯದರ್ಶಿ ರೋಹಿತ್ ಕನ್ಸಾಲ್ ಮಂಗಳವಾರ ತಿಳಿಸಿದ್ದಾರೆ.
ಆಗಸ್ಟ್ 5ರಂದು ಕಾಶ್ಮೀರದ ವಿಶೇಷ ಸ್ಥಾನಮಾನದ 370 ನೇ ವಿಧಿಯನ್ನು ರದ್ದುಪಡಿಸಿದ ನಂತರ ಕಾಶ್ಮೀರವನ್ನು ಎರಡು ಕೇಂದ್ರಾಡಳಿತ ಪ್ರದೇಶಗಳಾಗಿ ವಿಭಜಿಸಿದ ನಂತರ ಕಣಿವೆ ಪ್ರದೇಶದಲ್ಲಿ ಇಂಟರ್ನೆಟ್ ಮತ್ತು ಎಸ್‌ಎಂಎಸ್ ಸ್ಥಗಿತವಾಗಿತ್ತು. ಸಂಪರ್ಕ ನಿರ್ಬಂಧವು ವದಂತಿಹರಡುವಿಕೆಗೆ ಬ್ರೇಕ್ ಹಾಕಲಿದೆ ಸರ್ಕಾರದ ವಿರುದ್ಧ ಜನರನ್ನು ಎತ್ತಿ ಕಟ್ಟಿ ತೊಂದರೆ ಉಂಟುಮಾಡುವವರು ಯಶಸ್ವಿಯಾಗದಂತೆ ನೋಡಿಕೊಳ್ಳಲಿದೆ ಎಂದು ಅಧಿಕಾರಿಗಳು ಹೇಳಿಕೆ ನೀಡಿದ್ದರು.
"ಈ ಸೇವೆಗಳನ್ನು ರಾಷ್ಟ್ರ ವಿರೋಧಿ ಮತ್ತು ಸಮಾಜ ವಿರೋಧಿಗಳು ದುರುಪಯೋಗಪಡಿಸಿಕೊಳ್ಳುವ ಸಾಧ್ಯತೆ ಇದೆ. . ಹಿಂಸಾಚಾರವನ್ನು ಪ್ರಚೋದಿಸಲು ಅವುಗಳನ್ನು ದುರುಪಯೋಗಪಡಿಸಿಕೊಳ್ಳಬಹುದು ಎಂಬ ಆತಂಕಗಳಿವೆ, ಅದನ್ನು ನಾವು ಅನುಮತಿಸುವುದಿಲ್ಲ" ಎಂದು ಹಿರಿಯ ಪೊಲೀಸ್ ಅಧಿಕಾರಿಯೊಬ್ಬರು ಹೇಳೀದ್ದರು.
ಎಸ್‌ಎಂಎಸ್ ಮತ್ತು ಇಂಟರ್ನೆಟ್ ಸೇವೆಗಳ ಮೇಲಿನ ನಿಷೇಧವನ್ನು ನಿಯಮಿತ ವಿಮರ್ಶೆಗಳಿಗೆ ಒಳಪಡಿಸಲಾಗುತ್ತದೆ ಮತ್ತು ಅವುಗಳನ್ನು ಪುನಃಸ್ಥಾಪಿಸುವ ನಿರ್ಧಾರವನ್ನು ಸೂಕ್ತ ಸಮಯದಲ್ಲಿ ತೆಗೆದುಕೊಳ್ಳಲಾಗುವುದು ಎಂದು ಅವರು ಹೇಳಿದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


