45 ವರ್ಷಗಳಲ್ಲೇ ಗರಿಷ್ಠ ನಿರುದ್ಯೋಗ ಇರುವಾಗ ಶೇ.7ರಷ್ಟು ಜಿಡಿಪಿ ಹೇಗೆ ಸಾಧ್ಯ: ಚಿದಂಬರಂ ವ್ಯಂಗ್ಯ
ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಎನ್ ಡಿಎ ಸರ್ಕಾರದ ಕೊನೆಯ ಮತ್ತು ಮಧ್ಯಂತರ ಆಯವ್ಯವನ್ನು ಹಣಕಾಸು ಸಚಿವ ಅರುಣ್ ಜೇಟ್ಲಿ ಅನುಪಸ್ಥಿತಿಯಲ್ಲಿ ರೈಲ್ವೆ ಸಚಿವ ....

Published On :
ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಎನ್ ಡಿಎ ಸರ್ಕಾರದ ಕೊನೆಯ ಮತ್ತು ಮಧ್ಯಂತರ ಆಯವ್ಯವನ್ನು ಹಣಕಾಸು ಸಚಿವ ಅರುಣ್ ಜೇಟ್ಲಿ ಅನುಪಸ್ಥಿತಿಯಲ್ಲಿ ರೈಲ್ವೆ ಸಚಿವ ಪಿಯೂಷ್ ಗೋಯಲ್ ಮಂಡಿಸುತ್ತಿದ್ದಾರೆ.
ಇದೇ ವೇಳೆ ಸಂಸತ್ತಿನಲ್ಲಿ ಮಾತನಾಡಿದ ಮಾಜಿ ಹಣಕಾಸು ಸಚಿವ ಪಿ ಚಿದಂಬರಂ, ನಿರುದ್ಯೋಗವು ಕಳೆದ 45 ವರ್ಷಗಳಲ್ಲೇ ಗರಿಷ್ಠ ಪ್ರಮಾಣದಲ್ಲಿ ಇರುವಾಗ ದೇಶದ ಆರ್ಥಿಕತೆ (ಜಿಡಿಪಿ) ಶೇ.7ರ ಮಟ್ಟದಲ್ಲಿ ಬೆಳೆಯಲು ಹೇಗೆ ಸಾಧ್ಯ ಎಂದು ಪ್ರಶ್ನಿಸಿದ್ದಾರೆ.
ಈ ಸಂಬಂದ ಟ್ವೀಟ್ ಮಾಡಿರುವ ಚಿದಂಬರಂ ಕೇಂದ್ರ ಸರ್ಕಾರ ನಿನ್ನೆ ಪ್ರಕಟಿಸಿರುವ ಜಿಡಿಪಿ ಸಂಖ್ಯೆ ಬಗ್ಗೆ ಶಂಕೆ ವ್ಯಕ್ತ ಪಡಿಸಿರುವ ಚಿದಂಬರಂ ಸರ್ಕಾರ ಜಿಡಿಪಿ ಸಂಖ್ಯೆಯನ್ನು ಪರಿಷ್ಕರಿಸುವಾಗ ನಿರುದ್ಯೋಗದ ಸಂಖ್ಯೆಯನ್ನು ಪರಿಷ್ಕರಿಸಲು ಮರೆತಿರುವಂತಿದೆ ಎಂದು ವ್ಯಂಗ್ಯವಾಡಿದರು.
ದೇಶದಲ್ಲಿನ ನಿರುದ್ಯೋಗವು 2017-18ರಲ್ಲಿ ಕಳೆದ 45 ವರ್ಷಗಳಲ್ಲೇ ಗರಿಷ್ಠ ಎನ್ನುವಂತೆ ಶೇ.6.1ರ ಪ್ರಮಾಣದಲ್ಲಿ ಇದೆಎಂದು ವರದಿಯಾಗಿದೆ, ಇದರ ನಡುವೆಯೇ ತಾನು ದೇಶದ ಕಾರ್ಮಿಕ ಶಕ್ತಿಯ ಸಮೀಕ್ಷೆಯನ್ನು ಅಂತಿಮಗೊಳಿಸಿಲ್ಲ ಎಂದು ಕೇಂದ್ರ ಸರ್ಕಾರ ನಿನ್ನೆ ಜಿಡಿಪಿ ಸಂಖ್ಯೆಯನ್ನು ಪ್ರಕಟಿಸುವಾಗ ಹೇಳಿತ್ತು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


