ದೇಶ

ಹಣ ವರ್ಗಾವಣೆ ಪ್ರಕರಣ : ಫೆ.16ರವರೆಗೂ ರಾಬರ್ಟ್ ವಾದ್ರಾಗೆ ಮಧ್ಯಂತರ ಜಾಮೀನು ಮಂಜೂರು

ಅಕ್ರಮ ಹಣ ವರ್ಗಾವಣೆಗೆ ಸಂಬಂಧಿಸಿದಂತೆ ಜಾರಿ ನಿರ್ದೇಶನಾಲಯ ಪ್ರಕರಣ ದಾಖಲಿಸಿರುವ ರಾಬರ್ಟ್ ವಾದ್ರಾ ಅವರಿಗೆ ಫೆಬ್ರವರಿ 16 ರವರೆಗೂ ದೆಹಲಿ ಹೈಕೋರ್ಟ್ ಮಧ್ಯಂತರ ಜಾಮೀನು ಮಂಜೂರು ಮಾಡಿದೆ.

ಹಣ ವರ್ಗಾವಣೆ ಪ್ರಕರಣ : ಫೆ.16ರವರೆಗೂ ರಾಬರ್ಟ್ ವಾದ್ರಾಗೆ ಮಧ್ಯಂತರ ಜಾಮೀನು ಮಂಜೂರು
ರಾಬರ್ಟ್ ವಾದ್ರಾ
Published On :

ನವದೆಹಲಿ: ಅಕ್ರಮ ಹಣ ವರ್ಗಾವಣೆಗೆ ಸಂಬಂಧಿಸಿದಂತೆ  ಜಾರಿ ನಿರ್ದೇಶನಾಲಯ  ಪ್ರಕರಣ ದಾಖಲಿಸಿರುವ ರಾಬರ್ಟ್ ವಾದ್ರಾ ಅವರಿಗೆ ಫೆಬ್ರವರಿ 16 ರವರೆಗೂ ದೆಹಲಿ ಹೈಕೋರ್ಟ್ ಮಧ್ಯಂತರ ಜಾಮೀನು ಮಂಜೂರು ಮಾಡಿದೆ.

ಫೆಬ್ರವರಿ 6 ರಂದು ಜಾರಿ ನಿರ್ದೇಶನಾಲಯದ ಮುಂದೆ ಹಾಜರಾಗಿ ವಿಚಾರಣೆ ಎದುರಿಸುವಂತೆ  ವಿಶೇಷ ನ್ಯಾಯಾಧೀಶ  ಅರವಿಂದ್ ಕುಮಾರ್ ,  ರಾಬರ್ಟ್ ವಾದ್ರಾ ಅವರಿಗೆ ಆದೇಶಿಸಿದ್ದಾರೆ.

ಲಂಡನ್ ನ ಬ್ರೈಯಾನ್ ಸ್ಟಾನ್ ಸ್ಕ್ವೇರ್ ನಲ್ಲಿ  ಸುಮಾರು 1.9 ಮಿಲಿಯನ್ ಪೌಂಡ್ ವೆಚ್ಚದಲ್ಲಿ ಆಸ್ತಿ ಖರೀದಿಯಲ್ಲಿ ಅಕ್ರಮ ಹಣ ವರ್ಗಾವಣೆ ಮಾಡಿರುವ ಆರೋಪ ರಾಬರ್ಟ್ ವಾದ್ರಾ ವಿರುದ್ಧ ಕೇಳಿಬಂದಿತ್ತು.

ಈ ಹಿನ್ನೆಲೆಯಲ್ಲಿ  ಜಾರಿ ನಿರ್ದೇಶನಾಲಯವೂ ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿ ಅವರ ಬಾವಾ ಆಗಿರುವ ರಾಬರ್ಟ್ ವಾದ್ರಾ ವಿರುದ್ಧ  ಪ್ರಕರಣ ದಾಖಲಿಸಿಕೊಂಡಿದ್ದು, ತನಿಖೆ ನಡೆಸುತ್ತಿದೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.