ಐಎನ್ಎಕ್ಸ್ ಮಾಧ್ಯಮ ಪ್ರಕರಣ: ಚಿದಂಬರಂ ವಿಚಾರಣೆ ನಡೆಸಲು ಸಿಬಿಐಗೆ ಸರ್ಕಾರ ಅನುಮತಿ
ಐಎನ್ ಎಕ್ಸ್ ಮಾಧ್ಯಮ ಪ್ರಕರಣದಲ್ಲಿ ಮಾಜಿ ವಿತ್ತ ಸಚಿವ ಪಿ. ಚಿದಂಬರಂ ಅವರನ್ನು ಸಿಬಿಐ ವಿಚಾರಣೆ ನಡೆಸಲು ಕೇಂದ್ರ ಸರ್ಕಾರ ಅನುಮತಿ ನೀಡಿದೆ.

Published On :
ನವದೆಹಲಿ: ಐಎನ್ ಎಕ್ಸ್ ಮಾಧ್ಯಮ ಪ್ರಕರಣದಲ್ಲಿ ಮಾಜಿ ವಿತ್ತ ಸಚಿವ ಪಿ. ಚಿದಂಬರಂ ಅವರನ್ನು ಸಿಬಿಐ ವಿಚಾರಣೆ ನಡೆಸಲು ಕೇಂದ್ರ ಸರ್ಕಾರ ಅನುಮತಿ ನೀಡಿದೆ.
ಈ ಪ್ರಕರಣದಲ್ಲಿ ಚಿದಂಬರಂ ಪುತ್ರ ಕಾರ್ತಿ ಚಿದಂಬರಂ ಅವರನ್ನು ಈಗಾಗಲೇ ವಿಚಾರಣೆ ನಡೆಸಲಾಗಿದ್ದು, ವಿದೇಶ ಹಾಗೂ ಭಾರತದಲ್ಲಿ ಅವರಿಗೆ ಸೇರಿದ ಸುಮಾರು 54 ಕೋಟಿ ರೂ. ಮೊತ್ತದ ಆಸ್ತಿಯನ್ನು ಜಾರಿ ನಿರ್ದೇಶನಾಲಯ ವಶಕ್ಕೆ ಪಡೆದುಕೊಂಡಿದೆ.
ಪಿ. ಚಿದಂಬರಂ ವಿತ್ತ ಸಚಿವರಾಗಿದ್ದ ಸಂದರ್ಭದಲ್ಲಿ ಅಕ್ರಮ ಹಣ ವರ್ಗಾವಣೆಗೆ ಸಂಬಂಧಿಸಿದಂತೆ ಮೇ 15, 2017ರಲ್ಲಿ ಸಿಬಿಐ ಎಫ್ ಐಆರ್ ದಾಖಲಿಸಿತ್ತು.
ಕಾರ್ತಿ ಚಿದಂಬರಂ , ಐಎನ್ ಎಕ್ಸ್ ಮಾಧ್ಯಮ ಹಾಗೂ ಅದರ ನಿರ್ದೇಶಕರಾದ ಪೀಟರ್ , ಇಂದ್ರಾಣಿ ಮುಖರ್ಜಿ ವಿರುದ್ದ ಇಡಿ ಕೂಡಾ ಎಫ್ ಐಆರ್ ದಾಖಲಿಸಿತ್ತು. ನಂತರ ಕಾರ್ತಿ ಚಿದಂಬರಂ ಅವರನ್ನು ಬಂಧಿಸಲಾಗಿತ್ತಾದರೂ ಜಾಮೀನು ಪಡೆದುಕೊಂಡಿದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
P Chidambaramಸಿಬಿಐಕಾರ್ತಿ ಚಿದಂಬರಂKarti ChidambaramINX Media caseಐಎನ್ ಎಕ್ಸ್ ಮಾಧ್ಯಮ ಹಗರಣCBI ಪಿ. ಚಿದಂಬರಂ
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


