ನನಗೇನಾದರೂ ಆದರೆ ಅದಕ್ಕೆ ಜನರು ಮೋದಿಯನ್ನು ಹೊಣೆಯಾಗಿಸುತ್ತಾರೆ: ಅಣ್ಣಾ ಹಜಾರೆ
ಭ್ರಷ್ಟಾಚಾರ ವಿರೋಧಿ ಹೋರಾಟಗಾರ ಅಣ್ಣಾ ಹಜಾರೆ ಲೋಕಪಾಲ ಮಸೂದೆಗಾಗಿ ಆಗ್ರಹಿಸಿ ಮತ್ತೊಮ್ಮೆ ನಿರಶನ ಪ್ರಾರಂಭಿಸಿದ್ದು, ತಮಗೇನಾದರೂ ಆದಲ್ಲಿ ಅದಕ್ಕೆ ಜನರು ಮೋದಿಯನ್ನೇ ಹೊಣೆಯಾಗಿಸುತ್ತಾರೆ

Published On :
ರಾಲೆ ಗಣ್ ಸಿದ್ದಿ: ಭ್ರಷ್ಟಾಚಾರ ವಿರೋಧಿ ಹೋರಾಟಗಾರ ಅಣ್ಣಾ ಹಜಾರೆ ಲೋಕಪಾಲ ಮಸೂದೆಗಾಗಿ ಆಗ್ರಹಿಸಿ ಮತ್ತೊಮ್ಮೆ ನಿರಶನ ಪ್ರಾರಂಭಿಸಿದ್ದು, ತಮಗೇನಾದರೂ ಆದಲ್ಲಿ ಅದಕ್ಕೆ ಜನರು ಮೋದಿಯನ್ನೇ ಹೊಣೆಯಾಗಿಸುತ್ತಾರೆ ಎಂದು ಹೇಳಿದ್ದಾರೆ.
ಎಎನ್ಐ ನೊಂದಿಗೆ ಮಾತನಾಡಿರುವ ಅಣ್ಣಾ ಹಜಾರೆ, ಜನರು ನನ್ನನ್ನು ಪರಿಸ್ಥಿತಿಗಳನ್ನು ನಿಭಾಯಿಸಿದ ವ್ಯಕ್ತಿ ಎಂದು ನೆನಪಿಸಿಕೊಳ್ಳುತ್ತಾರೆಯೇ ಹೊರತು ಉರಿಯುತ್ತಿರುವ ಬೆಂಕಿಯನ್ನು ಮತ್ತಷ್ಟು ಉತ್ತೇಜಿಸಿದ ವ್ಯಕ್ತಿ ಎಂದು ನೆನಪಿಸಿಕೊಳ್ಳುವುದಿಲ್ಲ. ನನಗೆ ಏನೇ ಆದರೂ ಜನರು ಅದಕ್ಕೆ ಮೋದಿಯನ್ನೇ ಹೊಣೆಯಾಗಿಸುತ್ತಾರೆ ಎಂದು ಅಣ್ಣಾ ಹಜಾರೆ ಹೇಳಿದ್ದಾರೆ.
ಜನ್ ಆಂಧೋಲನ್ ಸತ್ಯಾಗ್ರಹದ ಅಡಿಯಲ್ಲಿ ಸಾಮಾಜಿಕ ಕಾರ್ಯಕರ್ತ ಅಣ್ಣಾ ಹಜಾರೆ ಜ.30 ರಿಂದ ನಿರಶನ ಪ್ರಾರಂಭಿಸಿದ್ದು, ಲೋಕಾಯುಕ್ತ, ಲೋಕಪಾಲ್ ನ್ನು ಜಾರಿಗೆ ತರಲು ಆಗ್ರಹಿಸುತ್ತಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


