ರಿಷಿ ಕುಮಾರ್ ಶುಕ್ಲಾ ಸಿಬಿಐ ನಿರ್ದೇಶಕರಾಗಿ ಅಧಿಕಾರ ಸ್ವೀಕಾರ ಬೆನ್ನಲ್ಲೇ ದೀದಿ ಜೊತೆ ಸಂಘರ್ಷ!
ನೂತನ ಸಿಬಿಐ ನಿರ್ದೇಶಕರನ್ನು ಆಯ್ಕೆ ಮಾಡಿ ಎಂದು ಸುಪ್ರೀಂ ಕೋರ್ಟ್ ಆದೇಶದ ಬೆನ್ನಲ್ಲೇ ಕೇಂದ್ರ ಸರ್ಕಾರ ರಿಷಿ ಕುಮಾರ್ ಶುಕ್ಲಾ ಅವರನ್ನು ನೇಮಕ ಮಾಡಿದ್ದು ಅಧಿಕಾರ...

Published On :
ನೂತನ ಸಿಬಿಐ ನಿರ್ದೇಶಕರನ್ನು ಆಯ್ಕೆ ಮಾಡಿ ಎಂದು ಸುಪ್ರೀಂ ಕೋರ್ಟ್ ಆದೇಶದ ಬೆನ್ನಲ್ಲೇ ಕೇಂದ್ರ ಸರ್ಕಾರ ರಿಷಿ ಕುಮಾರ್ ಶುಕ್ಲಾ ಅವರನ್ನು ನೇಮಕ ಮಾಡಿದ್ದು ಅಧಿಕಾರ ಸ್ವೀಕರಿಸಿದ ಬೆನ್ನಲ್ಲೇ ಶುಕ್ಲಾ ಅವರು ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರ ಜೊತೆ ಸಂಘರ್ಷ ಎದುರಾಗಿದೆ.
ಶಾರದಾ ಚಿಟ್ ಫಂಡ್ ಪ್ರಕರಣ ಸಂಬಂಧ ಸಿಬಿಐ ಅಧಿಕಾರಿಗಳು ಪೊಲೀಸ್ ಆಯುಕ್ತ ರಾಜೀವ್ ಕುಮಾರ್ ಅವರನ್ನು ವಿಚಾರಣೆ ನಡೆಸಲು ತೆರಳಿದ್ದ ಸಂದರ್ಭದಲ್ಲಿ ಸಿಬಿಐ ಅಧಿಕಾರಿಗಳನ್ನೇ ಕೊಲ್ಕತ್ತಾ ಪೊಲೀಸರು ಬಂಧಿಸಿ ಬಳಿಕ ಬಿಡುಗಡೆ ಮಾಡಿದ್ದರು. ಸದ್ಯ ಪಶ್ಚಿಮ ಬಂಗಾಳದಲ್ಲಿ ಸಿಬಿಐ ವರ್ಸಸ್ ಕೋಲ್ಕತ್ತಾ ಪೊಲೀಸರು ಎಂದಾಗಿದ್ದು ಈ ಮಧ್ಯೆ ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಪ್ರಧಾನಿ ನರೇಂದ್ರ ಮೋದಿ ವಿರುದ್ಧ ಕಳೆದ ರಾತ್ರಿಯಿಂದ ಧರಣಿ ನಡೆಸುತ್ತಿದ್ದಾರೆ.
ಸಿಬಿಐ ಅಧಿಕಾರಿಗಳನ್ನು ಕೋಲ್ಕತ್ತಾ ಪೊಲೀಸರು ಬಂಧಿಸಿದ್ದ ಕ್ರಮದ ಕುರಿತು ಸಿಬಿಐ ಸುಪ್ರೀಂ ಕೋರ್ಟ್ ಗೆ ಮನವಿ ಮಾಡಿದ್ದು ವಿಚಾರಣೆ ನಡೆಸುತ್ತಿದೆ.
ಇನ್ನು ಸಿಬಿಐನ ನೂತನ ನಿರ್ದೇಶಕರಾಗಿ ಅಧಿಕಾರ ಸ್ವೀಕರಿಸಿದ ಬೆನ್ನಲ್ಲೇ ಶುಕ್ಲಾ ಅವರು ಮಮತಾ ಬ್ಯಾನರ್ಜಿ ಕೆಂಗಣ್ಣಿಗೆ ಗುರಿಯಾಗಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
CBIಸಿಬಿಐMamata Banerjeeಮಮತಾ ಬ್ಯಾನರ್ಜಿRishi Kumar Shuklaರಿಷಿ ಕುಮಾರ್ ಶುಕ್ಲಾModi vs DidiSaradha Chit Fund Caseಶಾರದ ಚಿಟ್ ಫಂಡ್
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


