ವಾದ್ರಾ ವಿಚಾರಣೆಯ ನಡುವೆಯೇ ಎಐಸಿಸಿ ಪ್ರಧಾನ ಕಾರ್ಯದರ್ಶಿಯಾಗಿ ಪತ್ನಿ ಪ್ರಿಯಾಂಕಾ ಗಾಂಧಿ ಅಧಿಕಾರ ಸ್ವೀಕಾರ
ಜಾರಿ ನಿರ್ದೇಶನಾಲಯ(ಇಡಿ)ದಿಂದ ಪತಿ ರಾಬರ್ಟ್ ವಾದ್ರಾ ಅವರ ತೀವ್ರ ವಿಚಾರಣೆಯ ನಡುವೆಯೇ ಪತ್ನಿ ಪ್ರಿಯಾಂಕಾ ಗಾಂಧಿ ವಾದ್ರಾ ಅವರು ಎಐಸಿಸಿ ಪ್ರಧಾನ....

Published On :
ನವದೆಹಲಿ: ಜಾರಿ ನಿರ್ದೇಶನಾಲಯ(ಇಡಿ)ದಿಂದ ಪತಿ ರಾಬರ್ಟ್ ವಾದ್ರಾ ಅವರ ತೀವ್ರ ವಿಚಾರಣೆಯ ನಡುವೆಯೇ ಪತ್ನಿ ಪ್ರಿಯಾಂಕಾ ಗಾಂಧಿ ವಾದ್ರಾ ಅವರು ಎಐಸಿಸಿ ಪ್ರಧಾನ ಕಾರ್ಯದರ್ಶಿಯಾಗಿ ಬುಧವಾರ ಅಧಿಕಾರ ಸ್ವೀಕರಿಸಿದ್ದಾರೆ.
ಪ್ರಿಯಾಂಕಾ ಗಾಂಧಿ ಅವರು ಅಕ್ರಮವಾಗಿ ವಿದೇಶಿ ಸ್ವತ್ತುಗಳನ್ನು ಹೊಂದಿರುವ ಆರೋಪ ಎದುರಿಸುತ್ತಿರುವ ಪತಿ ರಾಬರ್ಟ್ ವಾದ್ರಾ ಅವರನ್ನು ವಿಚಾರಣೆಗಾಗಿ ಇಡಿ ಕಚೇರಿಗೆ ಡ್ರಾಪ್ ಮಾಡಿ, ಬಳಿಕ ಕಾಂಗ್ರೆಸ್ ಪ್ರಧಾನ ಕಚೇರಿಗೆ ಆಗಮಿಸಿ ಎಐಸಿಸಿ ಪ್ರಧಾನ ಕಾರ್ಯದರ್ಶಿಯಾಗಿ ಅಧಿಕಾರ ಸ್ವೀಕರಿಸಿದರು.
ಇತ್ತೀಚಿಗಷ್ಟೇ ಪೂರ್ವ ಉತ್ತರ ಪ್ರದೇಶ ಕಾಂಗ್ರೆಸ್ ಉಸ್ತುವಾರಿಯಾಗಿ ನೇಮಕಗೊಳ್ಳುವ ಮೂಲಕ ಸಕ್ರಿಯ ರಾಜಕೀಯ ಅಖಾಡಕ್ಕೆ ಧುಮುಕಿದ ಪ್ರಿಯಾಂಕಾ ಗಾಂಧಿ, ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿಗೆ ಸಾಥ್ ನೀಡಿದ್ದಾರೆ.
ಎಐಸಿಸಿ ಕಚೇರಿಯಲ್ಲಿ ರಾಹುಲ್ ಗಾಂಧಿ ಪಕ್ಕದ ಕೊಠಡಿಯನ್ನೇ ಪ್ರಿಯಾಂಕಾ ಗಾಂಧಿ ಅವರಿಗೆ ನೀಡಲಾಗಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Robert Vadraರಾಬರ್ಟ್ ವಾದ್ರಾPriyanka Gandhiಪ್ರಿಯಾಂಕಾ ಗಾಂಧಿCongress general secretaryಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


