ದೇಶ

ಮಹಾತ್ಮ ಗಾಂಧಿ ಪ್ರತಿಕೃತಿಗೆ ಗುಂಡು ಹಾರಿಸಿದ್ದ ಹಿಂದೂ ಮಹಸಭಾ ನಾಯಕಿ ಬಂಧನ

ಜನವರಿ 30 ರಂದು ಹುತಾತ್ಮ ದಿನಾಚರಣೆ ವೇಳೆ ರಾಷ್ಟ್ರಪಿತ ಮಹಾತ್ಮ ಗಾಂಧಿ ಅವರ ಪ್ರತಿಕೃತಿಗೆ ಗುಂಡು ಹಾರಿಸಿದ ಸಂಬಂಧ ಹಿಂದೂ ಮಹಾಸಭಾ ನಾಯಕಿ ...

ಮಹಾತ್ಮ ಗಾಂಧಿ ಪ್ರತಿಕೃತಿಗೆ ಗುಂಡು ಹಾರಿಸಿದ್ದ ಹಿಂದೂ ಮಹಸಭಾ ನಾಯಕಿ ಬಂಧನ
ಪೂಜಾ ಶಕುನ್ ಪಾಂಡೆ
Published On :
ಅಲಿಗಡ: ಜನವರಿ 30 ರಂದು ಹುತಾತ್ಮ ದಿನಾಚರಣೆ ವೇಳೆ ರಾಷ್ಟ್ರಪಿತ ಮಹಾತ್ಮ ಗಾಂಧಿ ಅವರ ಪ್ರತಿಕೃತಿಗೆ ಗುಂಡು ಹಾರಿಸಿದ ಸಂಬಂಧ ಹಿಂದೂ ಮಹಾಸಭಾ ನಾಯಕಿ ಪೂದಾ ಶಕುನ್ ಪಾಂಡೆಯನ್ನು ಪೊಲೀಸರು ಬಂಧಿಸಿದ್ದಾರೆ,
ಮಹಾತ್ಮ ಗಾಂಧೀಜಿ ಅವರ 71 ಪುಣ್ಯ ಸ್ಮರಣೆ ಅಂಗವಾಗಿ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಭಾರತ ಹಿಂದೂ ಮಹಸಭಾ ರಾಷ್ಟ್ರೀಯ ಕಾರ್ಯದರ್ಶಿ  ಪೂಜಾ ಶಕುನ್ ಪಾಂಡೆ ಮತ್ತವರ ತಂಡ ಗಾಂಧೀಜಿ ಪ್ರತಿಕೃತಿಗೆ ಗುಂಡು ಹಾರಿಸಿದ್ದರು. ಈ ಸಂಬಂಧ ಉತ್ತರ ಪ್ರದೇಶ ಪೊಲೀಸರು 12 ಮಂದಿ ವಿರುದ್ಧ ಪ್ರಕರಣ ದಾಖಲಿಸಿದ್ದರು.
ಪ್ರಕರಣ ದಾಖಲಾದ ಮೇಲೆ ಆರೋಪಿಗಳು ನಾಪತ್ತೆಯಾಗಿದ್ದರು. ವಿಡಿಯೋದಲ್ಲಿ ಕಾಣಿಸಿಕೊಂಡಿದ್ದ ಇತರೆ ಮೂವರನ್ನು ಪೊಲೀಸರು ಕಳೆದ ವಾರ ಬಂಧಿಸಿದ್ದರು. ಪೂಜಾ ಪತಿ ಅಶೋಕ್ ಪಾಂಡೆಯನ್ನು ಬಂಧಿಸಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.