2ನೇ ದಿನವೂ ರಾಬರ್ಟ್ ವಾದ್ರಾ ವಿಚಾರಣೆ: ಇಡಿ ಅಧಿಕಾರಿಗಳಿಂದ ಹೆಚ್ಚಿನ ತನಿಖೆ
ಅಕ್ರಮ ಹಣ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ಯುಪಿಎ ಅಧಿನಾಯಕಿ ಸೋನಿಯಾಗಾಂಧಿ ಅವರ ಅಳಿಯ ರಾಬರ್ಟ್ ವಾದ್ರಾ ಅವರನ್ನು ಇಂದು ಸಹ ಜಾರಿ ನಿರ್ದೇಶನಾಲಯ ಅಧಿಕಾರಿಗಳು ವಿಚಾರಣೆ ನಡೆಸಿದ್ದಾರೆ.

Published On :
ದೆಹಲಿ: ಅಕ್ರಮ ಹಣ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ಯುಪಿಎ ಅಧಿನಾಯಕಿ ಸೋನಿಯಾ ಗಾಂಧಿ ಅವರ ಅಳಿಯ ರಾಬರ್ಟ್ ವಾದ್ರಾ ಅವರನ್ನು ಇಂದು ಸಹ ಜಾರಿ ನಿರ್ದೇಶನಾಲಯ ಅಧಿಕಾರಿಗಳು ವಿಚಾರಣೆ ನಡೆಸಿದ್ದಾರೆ.
ಇಬ್ಬರು ಉಪ ನಿರ್ದೇಶಕರು ಹಾಗೂ ಜಂಟಿ ನಿರ್ದೇಶಕರನ್ನೊಳಗೊಂಡ ತಂಡದಿಂದ ರಾಬರ್ಟ್ ವಾದ್ರಾ ಅವರನ್ನು ವಿಚಾರಣೆ ನಡೆಸಲಾಗಿದೆ ಎಂಬುದು ಇಡಿ ಮೂಲಗಳಿಂದ ತಿಳಿದುಬಂದಿದೆ.
ಯುಪಿಎ ಅಧ್ಯಕ್ಷೆ ಸೋನಿಯಾ ಗಾಂಧಿ ಅವರ ಅಳಿಯ ಹಾಗೂ ಪ್ರಿಯಾಂಕಾ ಗಾಂಧಿ ಅವರ ಪತಿ ಆಗಿರುವ ರಾಬರ್ಟ್ ವಾದ್ರಾ ಬುಧವಾರ ಐದೂವರೆ ತಾಸುಗಳ ಕಾಲ ವಿಚಾರಣೆ ಎದುರಿಸಿದ್ದರು.
ಮತ್ತೆ ಇಂದು ಬೆಳಗ್ಗೆ 11-25ಕ್ಕೆ ಕೇಂದ್ರ ದೆಹಲಿಯ ಜಾಜ್ ನಗರ್ ಹೌಸ್ ನಲ್ಲಿರುವ ಇಡಿ ಕಚೇರಿಗೆ ಆಗಮಿಸಿದ ರಾಬರ್ಟ್ ವಾದ್ರಾ ಅವರನ್ನು ಇಡಿ ಅಧಿಕಾರಿಗಳು ಪ್ರಶ್ನಿಸಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


