ಲೋಕಸಭೆ ಚುನಾವಣೆ: ಮಕ್ಕಳ್ ನೀಧಿ ಮಯ್ಯಂ ಪಕ್ಷ ಸ್ವತಂತ್ರ ಸ್ಪರ್ಧೆ, ಕಮಲ್ ಹಾಸನ್ ಘೋಷಣೆ
ನಟ, ರಾಜಕಾರಣಿ ಕಮಲ್ ಹಾಸನ್ ಅವರ ಹೊಸ ರಾಜಕೀಯ ಪಕ್ಷ 'ಮಕ್ಕಳ್ ನೀಧಿ ಮಯ್ಯಂ' ಮುಂಬರುವ ಲೋಕಸಭಾ ಚುನಾವಣೆಯಲ್ಲಿ ತಮಿಳುನಾಡಿನ 39 ಕ್ಷೇತ್ರಗಳಲ್ಲಿಯೂ ಸ್ಪರ್ಧಿಸಲಿದೆ ಎಂದು ಘೋಷಿಸಿದ್ದಾರೆ.

Published On :
ಕೊಯಮತ್ತೂರ್: ನಟ, ರಾಜಕಾರಣಿ ಕಮಲ್ ಹಾಸನ್ ಅವರ ಹೊಸ ರಾಜಕೀಯ ಪಕ್ಷ 'ಮಕ್ಕಳ್ ನೀಧಿ ಮಯ್ಯಂ' ಮುಂಬರುವ ಲೋಕಸಭಾ ಚುನಾವಣೆಯಲ್ಲಿ ತಮಿಳುನಾಡಿನ 39 ಕ್ಷೇತ್ರಗಳಲ್ಲಿಯೂ ಸ್ಪರ್ಧಿಸಲಿದೆ ಎಂದು ಘೋಷಿಸಿದ್ದಾರೆ. ಇದೇ ವೇಳೆ ಅವರು ತಮ್ಮ ಪಕ್ಷ ಯಾವುದೇ ರಾಜಕೀಯ ಪಕ್ಷದೊಡನೆ ಮೈತ್ರಿ ಮಾಡಿಕೊಳ್ಳುವುದಿಲ್ಲ ಎಂದಿದ್ದಾರೆ.
"ನಾವು ಸ್ವಚ್ಚ ಕೈಗಳಿಂದ ಜನರಿಗೆ ಉತ್ತಮ ಸೇವೆಯನ್ನು ನೀಡಲು ಪ್ರಯತ್ನಿಸುತ್ತಿದ್ದೇವೆ, ಯಾವುದೇ ದ್ರಾವಿಡ ಪಕ್ಷಗಳೊಂದಿಗೆ ಹೊಂದಾಣಿಕೆ ಮಾಡಿಕೊಳ್ಳದೆ ಸ್ವತಂತ್ರವಾಗಿ ಚುನಾವಣೆ ಎದುರಿಸುತ್ತೇವೆ" ಕಮಲ್ ಹಾಸನ್ ಹೇಳಿದ್ದಾರೆ.
ತಮ್ಮ ಪಕ್ಷ ತಮಿಳುನಾಡಿನಲ್ಲಿ 39 ಲೋಕಸಭಾ ಸ್ಥಾನಗ ಹಾಗೂ ನೆರೆಯ ಪುದುಚೇರಿಯಲ್ಲಿ ಕೂಡ ಸ್ಪರ್ಧಿಸಲಿದೆ.ಎಂದು ಅವರು ಸ್ಪಷ್ಟಪಡಿಸಿದ್ದಾರೆ.
ಇದಕ್ಕೆ ಮುನ್ನ ಅವರು ತಮ್ಮ ಪಕ್ಷ ಇತರೆ ಸಮಾನ ಮನಸ್ಕ ಪಕ್ಷಗಳೊಡನೆ ಸೇರಿ ಚುನಾವಣೆ ಎದುರಿಸಲಿದೆ ಎಂದು ಹೇಳಿದ್ದರು.
ಜಿಲ್ಲಾ ವಿಧಾನಸಭೆ ಕ್ಷೇತ್ರ ಪೊಲ್ಲಾಚಿಯಲ್ಲಿ ನಡೆದ ಎರಡು ದಿನಗಳ ಸಭೆಯಲ್ಲಿ ಅವರು ಭಾಗವಝಿಸಿದ ಬಳಿಕ ಸುದ್ದಿಗಾರರೊಡನೆ ಮಾತನಾಡಿದ್ದಾರೆ., ಚುನಾವಣೆಗಿಂತ ಮುನ್ನ ಗಮನ ನೀಡಬೇಕಾದ ಆದ್ಯತೆಯ ಕ್ಷೇತ್ರಗಳ ಬಗೆಗೆ ಚರ್ಚೆ ನಡೆದಿದೆಎಂದು ಅವರು ಹೇಳಿದರು. ಕಳೆದ ವರ್ಷ ಫೆಬ್ರವರಿಯಲ್ಲಿ ಕಮಲ್ ಹಾಸನ್ ತಾವು ಹೊಸ ರಾಜಕೀಯ ಪಕ್ಷವನ್ನು ಸ್ಥಾಪಿಸಿದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Kamal Haasanಕಮಲ್ ಹಾಸನ್2019 ಲೋಕಸಭಾ ಚುನಾವಣೆಮಕ್ಕಳ್ ನೀಧಿ ಮಯ್ಯಂ2019 Lok Sabha electionsSMakkal Needhi Maiam
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


