ಶಿಲ್ಲಾಂಗ್: ಸಿಬಿಐ ನಿಂದ ಕೋಲ್ಕತಾ ಪೊಲೀಸ್ ಆಯುಕ್ತರ ತೀವ್ರ ವಿಚಾರಣೆ
ಶಾರದಾ ಚಿಟ್ ಫಂಡ್ ಮತ್ತು ರೋಸ್ ವ್ಯಾಲಿ ಪಾಂಝಿ ಹಗರಣಕ್ಕೆ ಸಂಬಂಧಿಸಿದಂತೆ ಕೋಲ್ಕತಾ ಪೊಲೀಸ್ ಆಯುಕ್ತ ರಾಜೀವ್ ಕುಮಾರ್ ಅವರನ್ನು ಶಿಲ್ಲಾಂಗ್ ನಲ್ಲಿ ಸಿಬಿಐ ಅಧಿಕಾರಿಗಳು ವಿಚಾರಣೆಗೊಳಪಡಿಸಿದ್ದಾರೆ.

Published On :
ಶಿಲ್ಲಾಂಗ್: ಶಾರದಾ ಚಿಟ್ ಫಂಡ್ ಮತ್ತು ರೋಸ್ ವ್ಯಾಲಿ ಪಾಂಝಿ ಹಗರಣಕ್ಕೆ ಸಂಬಂಧಿಸಿದಂತೆ ಕೋಲ್ಕತಾ ಪೊಲೀಸ್ ಆಯುಕ್ತ ರಾಜೀವ್ ಕುಮಾರ್ ಅವರನ್ನು ಶಿಲ್ಲಾಂಗ್ ನಲ್ಲಿ ಸಿಬಿಐ ಅಧಿಕಾರಿಗಳು ವಿಚಾರಣೆಗೊಳಪಡಿಸಿದ್ದಾರೆ.
ಈ ಹಿಂದೆ ಕೋಲ್ಕತಾದ ಪೊಲೀಸ್ ಆಯುಕ್ತರ ಕಚೇರಿ ಮೇಲೆ ಸಿಬಿಐ ಅಧಿಕಾರಿಗಳು ದಾಳಿ ಮಾಡಿದ್ದಾಗ ದೊಡ್ಡ ಹೈಡ್ರಾಮ ಸೃಷ್ಟಿಯಾಗಿತ್ತು. ಬಳಿಕ ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ಕೂಡ ಕೇಂದ್ರ ಸರ್ಕಾರದ ವಿರುದ್ಧ ಅಹೋರಾತ್ರಿ ಧರಣಿ ಕುಳಿತಿದ್ದರು. ಬಳಿಕ ಈ ಬಗ್ಗೆ ಸುಪ್ರೀಂ ಕೋರ್ಟ್ ರಾಜೀವ್ ಕುಮಾರ್ ಅವರ ವಿಚಾರಣೆ ನಡೆಯಬೇಕು ಎಂದು ಹೇಳಿದ್ದು ಮಾತ್ರವಲ್ಲದೆ ರಾಜೀವ್ ಕುಮಾರ್ ಸಿಬಿಐ ತನಿಖೆಗೆ ಸಹಕರಿಸಬೇಕು ಎಂದು ತೀರ್ಪು ನೀಡಿತು.
ಅದರಂತೆ ಇಂದು ರಾಜೀವ್ ಕುಮಾರ್ ಅವರು ಶಿಲ್ಲಾಂಗ್ ಗೆ ತೆರಳಿದ್ದು, ಇಂದು ಸಿಬಿಐ ಅಧಿಕಾರಿಗಳ ಮುಂದೆ ವಿಚಾರಣೆಗೆ ಹಾಜರಾಗಿದ್ದಾರೆ. ದೆಹಲಿಯಿಂದ ತೆರಳಿರುವ ಹಿರಿಯ ಸಿಬಿಐ ಅಧಿಕಾರಿಗಳು ಕೂಡ ಶಿಲ್ಲಾಂಗ್ ತೆರಳಿದ್ದು, ಅಲ್ಲಿ ರಾಜೀವ್ ಕುಮಾರ್ ಅವರನ್ನು ವಿಚಾರಣೆ ನಡೆಸಲಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
ಪಶ್ಚಿಮ ಬಂಗಾಳWest BengalKolkataಕೋಲ್ಕತಾModi governmentಮೋದಿ ಸರ್ಕಾರCM Mamata Banerjeeಸಿಎಂ ಮಮತಾ ಬ್ಯಾನರ್ಜಿKolkata Police-CBI Clashಕೋಲ್ಕತಾ ಪೊಲೀಸ್-ಸಿಬಿಐ ತಿಕ್ಕಾಟ
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


