ಕೇಂದ್ರ ಸರ್ಕಾರವನ್ನು ಟೀಕಿಸಿದ್ದಕ್ಕಾಗಿ ಅಮೋಲ್ ಪಾಲೇಕರ್ ಭಾಷಣಕ್ಕೆ ಪದೇ ಪದೇ ಅಡ್ಡಿ
ಸರ್ಕಾರವನ್ನು ಟೀಕಿಸಿದ್ದಕ್ಕಾಗಿ ಹಿರಿಯ ನಟ, ನಿರ್ದೇಶಕ ಅಮೋಲ್ ಪಾಲೇಕರ್ ಭಾಷಣಕ್ಕೆ ರಾಷ್ಟ್ರೀಯ ಆಧುನಿಕ ಕಲಾ ಗ್ಯಾಲರಿಯ ಕೆಲ ಸದಸ್ಯರು ಪದೇ ಪದೇ ಅಡ್ಡಿಪಡಿಸಿರುವ ಘಟನೆ ನಡೆದಿದೆ.

Published On :
ಮುಂಬೈ: ಸರ್ಕಾರವನ್ನು ಟೀಕಿಸಿದ್ದಕ್ಕಾಗಿ ಹಿರಿಯ ನಟ, ನಿರ್ದೇಶಕ ಅಮೋಲ್ ಪಾಲೇಕರ್ ಭಾಷಣಕ್ಕೆ ರಾಷ್ಟ್ರೀಯ ಆಧುನಿಕ ಕಲಾ ಗ್ಯಾಲರಿಯ ಕೆಲ ಸದಸ್ಯರು ಪದೇ ಪದೇ ಅಡ್ಡಿಪಡಿಸಿರುವ ಘಟನೆ ನಡೆದಿದೆ.
ಖ್ಯಾತ ಕಲಾವಿದ ಪ್ರಭಾಕರ್ ಬಾರ್ವೆ ಸ್ಮರಣೆಯ ಹಿನ್ನೆಯಲ್ಲಿ ಆಯೋಜಿಸಿದ್ದ ಪ್ರದರ್ಶನದ ಆರಂಭದಲ್ಲಿ ಅಮೋಲ್ ಪಾಲೇಕರ್ ಮಾತನಾಡುವಾಗ ಈ ಘಟನೆ ನಡೆದಿದೆ.
ಈ ಸಂದರ್ಭದಲ್ಲಿ ರಾಷ್ಟ್ರೀಯ ಆಧುನಿಕ ಕಲಾ ಗ್ಯಾರಿಯ ಕೆಲ ಸದಸ್ಯರು ವೇದಿಕೆ ಮೇಲೆರಿ ಭಾಷಣಕ್ಕೆ ಅಡ್ಡಿಪಡಿಸಿದ್ದಾರೆ. ಪಾಲೇಕರ್ ಕಾರ್ಯಕ್ರಮದ ಬಗ್ಗೆ ಮಾತನಾಡುವಂತೆ ಒತ್ತಾಯಿಸಿದ್ದಾರೆ.
ಇದಕ್ಕೆ ಪ್ರತಿಕ್ರಿಯಿಸಿದ ಪಾಲೇಕರ್ , ಅದನ್ನೇ ನಾನು ಮಾತನಾಡುತ್ತಿದ್ದು, ಅದನ್ನು ನಿರ್ಬಂಧಿಸುತ್ತೀರಾ ಎಂದು ಪ್ರಶ್ನಿಸಿದ್ದಾರೆ. ಸ್ಥಳೀಯ ಕಲಾವಿದರ ಸಮಿತಿ ರದ್ದುಗೊಳಿಸಿದ ನಂತರ ದೆಹಲಿಯ ಸಂಸ್ಕೃತಿ ಸಚಿವಾಲಯ ನಿರ್ಧಾರ ಕೈಗೊಳ್ಳಬೇಕಾಗುತ್ತದೆ ಎಂದು ಹೇಳಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


