ಲೋಕಸಭೆಯಲ್ಲಿ ಆಪರೇಷನ್ ಕಮಲ ಪ್ರತಿಧ್ವನಿ: ಕಾಂಗ್ರೆಸ್ ನಿಂದ ಸ್ವಲ್ಪಕಾಲ ಸಭಾತ್ಯಾಗ
ಕರ್ನಾಟಕದ ರಾಜಕೀಯದಲ್ಲಿ ವಿವಾದದ ಬಿರುಗಾಳಿ ಎಬ್ಬಿಸಿರುವ ಆಪರೇಷನ್ ಕಮಲದ ವಿಚಾರ ಲೋಕಸಭೆಯಲ್ಲಿಂದು ಪ್ರತಿಧ್ವನಿಸಿತು.

ನವದೆಹಲಿ: ಕರ್ನಾಟಕದ ರಾಜಕೀಯದಲ್ಲಿ ವಿವಾದದ ಬಿರುಗಾಳಿ ಎಬ್ಬಿಸಿರುವ ಆಪರೇಷನ್ ಕಮಲದ ವಿಚಾರ ಲೋಕಸಭೆಯಲ್ಲಿಂದು ಪ್ರತಿಧ್ವನಿಸಿತು.
ಆಡಿಯೋ ಟೇಪ್ ವಿಚಾರವನ್ನು ಪ್ರಸ್ತಾಪಿಸಿದ ಕಾಂಗ್ರೆಸ್ ಸದಸ್ಯರು ಆಡಳಿತಾರೂಢ ಸಮ್ಮಿಶ್ರದ ಸರ್ಕಾರದ ಶಾಸಕರನ್ನು ಖರೀದಿಸಲು ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ ಪ್ರಯತ್ನಿಸುತ್ತಿದ್ದಾರೆ ಎಂದು ಆರೋಪಿಸಿದರು. ಆದರೆ, ಈ ಆರೋಪವನ್ನು ಕೇಂದ್ರ ಸಚಿವ ಸದಾನಂದಗೌಡ ನಿರಾಕರಿಸಿದರು.
ಈ ವಿಚಾರದಿಂದಾಗಿ ಸೋನಿಯಾಗಾಂಧಿ ಸೇರಿದಂತೆ ಕಾಂಗ್ರೆಸ್ ಸದಸ್ಯರು ಸ್ವಲ್ಪ ಕಾಲ ಸಭಾತ್ಯಾಗ ನಡೆಸಿದರು. ಆದರೆ, ಕೆಲವು ನಿಮಿಷಗಳ ನಂತರ ಮತ್ತೆ ಸದನಕ್ಕೆ ಆಗಮಿಸಿದರು.
ಶೂನ್ಯ ವೇಳೆಯಲ್ಲಿ ಬಿಎಸ್ ಯಡಿಯೂರಪ್ಪ ಅವರ ಆಡಿಯೋ ಕ್ಲಿಪ್ ಬಗ್ಗೆ ಮಾತನಾಡಿದ ಲೋಕಸಭೆಯಲ್ಲಿನ ಕಾಂಗ್ರೆಸ್ ನಾಯಕ ಮಲ್ಲಿಕಾರ್ಜುನ ಖರ್ಗೆ, ಆಡಳಿತಾರೂಢ ಕಾಂಗ್ರೆಸ್- ಜೆಡಿಎಸ್ ಸರ್ಕಾರವನ್ನು ಅಸ್ಥಿರಗೊಳಿಸಲು ಬಿಜೆಪಿ ನಾಯಕರೇ ಕುದುರೆ ವ್ಯಾಪಾರಕ್ಕಿಳಿದಿದ್ದಾರೆ ಎಂದು ಆರೋಪಿಸಿದರು.
ಕರ್ನಾಟಕದಲ್ಲಿನ ಪರಿಸ್ಥಿತಿ ಬಗ್ಗೆ ಮಾತನಾಡಿದ ಮಲ್ಲಿಕಾರ್ಜುನ ಖರ್ಗೆ, ಆಡಿಯೋ ಟೇಪ್ ನಲ್ಲಿ ರಾಜ್ಯದಲ್ಲಿನ ಸ್ಪೀಕರ್ ಹಾಗೂ ಜಡ್ಜ್ ಅವರನ್ನು ನಿರ್ವಹಿಸುವುದಾಗಿ ಹೇಳಿರುವ ಅಂಶವಿದೆ ಎಂದು ಹೇಳಿದರು. ಖರ್ಗೆ ಅವರ ಹೇಳಿಕೆಗೆ ಸಚಿವ ಸದಾನಂದಗೌಡ ಆಕ್ಷೇಪ ವ್ಯಕ್ತಪಡಿಸಿದರು.ಈ ರೀತಿಯ ಆಪರೇಷನ್ ಕಮಲ ದೇಶದಲ್ಲಿ ನಡೆಯಬಾರದು ಎಂದು ಹೇಳಿದರು.
ಆದರೆ, ಇವರ ಹೇಳಿಕೆಯನ್ನು ನಿರಾಕರಿಸಿದ ಕೇಂದ್ರ ಸಾಂಖ್ಯಿಕ ಮತ್ತು ಕಾರ್ಯಕ್ರಮ ಅನುಷ್ಠಾನ ಸಚಿವ ಸದಾನಂದಗೌಡ, ಕಾಂಗ್ರೆಸ್ ಹಾಗೂ ಜೆಡಿಎಸ್ ನಲ್ಲಿ ಈಗಾಗಲೇ ಆಂತರಿಕ ಜಗಳ ಆರಂಭವಾಗಿದ್ದು, ಉಭಯ ಪಕ್ಷಗಳು ನಕಲಿ ಚಟುವಟಿಕೆಗಳಲ್ಲಿ ತೊಡಗಿವೆ ಎಂದು ಆರೋಪಿಸಿದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


