ದೆಹಲಿ: ಕರೋಲ್ ಬಾಗ್ ಹೊಟೆಲ್ ಅಗ್ನಿ ದುರಂತ, ಸಾವಿನ ಸಂಖ್ಯೆ 17ಕ್ಕೆ ಏರಿಕೆ
ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಮಂಗಳವಾರ ಮುಂಜಾನೆ ನಡೆದ ಭೀಕರ ಅಗ್ನಿ ದುರಂತದಲ್ಲಿ ಸಾವಿಗೀಡಾದವರ ಸಂಖ್ಯೆ 17ಕ್ಕೆ ಏರಿಕೆಯಾಗಿದೆ.

Published On :
ನವದೆಹಲಿ: ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಮಂಗಳವಾರ ಮುಂಜಾನೆ ನಡೆದ ಭೀಕರ ಅಗ್ನಿ ದುರಂತದಲ್ಲಿ ಸಾವಿಗೀಡಾದವರ ಸಂಖ್ಯೆ 17ಕ್ಕೆ ಏರಿಕೆಯಾಗಿದೆ.
ದೆಹಲಿಯ ಅರ್ಪಿತ್ ಪ್ಯಾಲೇಸ್ ಹೋಟೆಲ್ನಲ್ಲಿ ಮಂಗಳವಾರ ಬೆಳಿಗ್ಗೆ ಸಂಭವಿಸಿದ ಅಗ್ನಿ ಅವಘಡದಲ್ಲಿ ಸಾವನ್ನಪ್ಪಿದವರ ಸಂಖ್ಯೆ 17ಕ್ಕೆ ಏರಿಕೆಯಾಗಿದೆ. ಕರೋಲ್ ಬಾಗ್ ನಲ್ಲಿ ಈ ಅರ್ಪಿತ್ ಪ್ಯಾಲೇಸ್ ಹೋಟೆಲ್ ಇದ್ದು, ಇಂದು ಮುಂಜಾನೆ 4.30ರ ಸುಮಾರಿಗೆ ಬೆಂಕಿ ಕಾಣಿಸಿಕೊಂಡಿದೆ. ಕ್ಷಣಮಾತ್ರದಲ್ಲಿ ಬೆಂಕಿಯ ಕೆನ್ನಾಲಿಗೆ ಇಡೀ ಹೋಟೆಲ್ ಆವರಿಸಿದೆ. ಅಂತೆಯೇ ಹೊಟೆಲ್ ನಲ್ಲಿದ್ದ ಸಿಬ್ಬಂದಿಗಳೂ ಸೇರಿದಂತೆ ಹಲವರು ಬೆಂಕಿಯ ಕೆನ್ನಾಲಿಗೆಗೆ ಸಿಲುಕಿದ್ದಾರೆ.
ಹೋಟೆಲ್ ನ ನಾಲ್ಕನೇ ಅಂತಸ್ತಿನಲ್ಲಿ ಮೊದಲು ಬೆಂಕಿ ಕಾಣಿಸಿಕೊಂಡಿತ್ತು. ನಂತರ ಎರಡನೇ ಅಂತಸ್ತಿನವರೆಗೂ ಬೆಂಕಿ ಹಬ್ಬಿದೆ. ಮೊದಲ ಅಂತಸ್ತು ಹಾಗೂ ನೆಲಮಹಡಿ ಸುರಕ್ಷಿತವಾಗಿದೆ. ಬೆಳಗ್ಗೆ 7 ಗಂಟೆಯವರೆಗೂ ದಟ್ಟವಾದ ಹೊಗೆ ಆವರಿಸಿತ್ತು. ಬೆಂಕಿಯನ್ನು ಸಂಪೂರ್ಣವಾಗಿ ಆರಿಸುವಲ್ಲಿ ಅಗ್ನಿಶಾಮಕ ದಳದ ಸಿಬ್ಬಂದಿ ಯಶಸ್ವಿಯಾಗಿದ್ದಾರೆ. ಸದ್ಯ, ಹೋಟೆಲ್ನಲ್ಲಿ ಶೋಧ ಕಾರ್ಯಾಚಾರಣೆ ಆರಂಭಿಸಲಾಗಿದೆ. ಹೋಟೆಲ್ ನಲ್ಲಿ ಹಲವರು ಸಿಲುಕಿರುವ ಶಂಕೆ ಇದೆ ಎನ್ನಲಾಗಿದೆ. ಅಗ್ನಿಶಾಮಕ ದಳದ ಸಿಬ್ಬಂದಿ ಸ್ಥಳಕ್ಕೆ ಆಗಮಿಸಿದ್ದಾರೆ. ಶಾರ್ಟ್ ಸರ್ಕ್ಯೂಟ್ನಿಂದ್ ಬೆಂಕಿ ಕಾಣಿಸಿಕೊಂಡಿರಬಹುದು ಎಂದು ಶಂಕಿಸಲಾಗಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
ನವದೆಹಲಿNew DelhiHotel Arpit PalaceKarol Bagh Fire Accidentಕರೋಲ್ ಬಾಗ್ ಅಗ್ನಿ ದುರಂತಹೊಟೆಲ್ ಅರ್ಪಿತ್ ಪ್ಯಾಲೆಸ್
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


