ಸಂಸದೆ ಶೋಭಾ ಕರಂದ್ಲಾಜೆ ಎಸ್‌ಬಿಐ ಖಾತೆಗೆ ಕನ್ನ; 20 ಲಕ್ಷ ರು. ಎಗರಿಸಿದ ಖದೀಮರು!
ಉಡುಪಿ-ಚಿಕ್ಕಮಗಳೂರು ಸಂಸದೆ ಶೋಭಾ ಕರಂದ್ಲಾಜೆ ಅವರ ಎಸ್‌ಬಿಐ ಖಾತೆಗೆ ಕನ್ನ ಹಾಕಿರುವ ದುಷ್ಕರ್ಮಿಗಳು 20 ಲಕ್ಷ ರುಪಾಯಿ ದೋಚಿರುವ ಘಟನೆ ತಡವಾಗಿ ಬೆಳಕಿಗೆ ಬಂದಿದೆ.

Published On :
ನವದೆಹಲಿ: ಉಡುಪಿ-ಚಿಕ್ಕಮಗಳೂರು ಸಂಸದೆ ಶೋಭಾ ಕರಂದ್ಲಾಜೆ ಅವರ ಎಸ್‌ಬಿಐ ಖಾತೆಗೆ ಕನ್ನ ಹಾಕಿರುವ ದುಷ್ಕರ್ಮಿಗಳು 20 ಲಕ್ಷ ರುಪಾಯಿ ದೋಚಿರುವ ಘಟನೆ ತಡವಾಗಿ ಬೆಳಕಿಗೆ ಬಂದಿದೆ.
ಸಂಸತ್ ಭವನ ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾದಲ್ಲಿ ಪ್ರತಿಯೊಬ್ಬ ಸಂಸದರಿಗೂ ಖಾತೆ ತೆರೆಯಲಾಗಿರುತ್ತದೆ. ಸಂಸದರ ವೇತನ, ಇರತೆ ಭತ್ಯೆಗಳು ನೇರವಾಗಿ ಈ ಬ್ಯಾಂಕಿನ ಖಾತೆಗಳಿಗೆ ನೇರವಾಗಿ ಸಂದಾಯವಾಗುತ್ತದೆ. ಈ ಖಾತೆ ಹ್ಯಾಕ್ ಆಗಿರುವುದಾಗಿ ಶೋಭಾ ಕರಂದ್ಲಾಜೆ ಒಪ್ಪಿಕೊಂಡಿದ್ದಾರೆ.
ಈ ಸಂಬಂಧ ಶೋಭಾ ಅವರು ಸಂಸತ್ ಭವನ ಮಾರ್ಗದ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


