ಗೋವಾ: ಅರಣ್ಯ ಪ್ರದೇಶ ನಾಶ ಆರೋಪ, ಪರಿಕ್ಕರ್ ಪುತ್ರನಿಗೆ ನೋಟಿಸ್ ಜಾರಿ
ಗೋವಾದಲ್ಲಿ ಅರಣ್ಯ ನಾಶ ಆರೋಪದ ಮೇರೆಗೆ ಮುಖ್ಯಮಂತ್ರಿ ಮನೋಹರ್ ಪರಿಕ್ಕರ್ ಪುತ್ರ ಅಭಿಜತ್ ಅವರಿಗೆ ಬಾಂಬೆ ಹೈಕೋರ್ಟಿನ ಪಣಜಿ ವಿಭಾಗೀಯ ಪೀಠ ನೋಟಿಸ್ ಜಾರಿ ಮಾಡಿದೆ.

ಪಣಜಿ: ಗೋವಾದಲ್ಲಿ ಅರಣ್ಯ ನಾಶ ಆರೋಪದ ಮೇರೆಗೆ ಮುಖ್ಯಮಂತ್ರಿ ಮನೋಹರ್ ಪರಿಕ್ಕರ್ ಪುತ್ರ ಅಭಿಜತ್ ಅವರಿಗೆ ಬಾಂಬೆ ಹೈಕೋರ್ಟಿನ ಪಣಜಿ ವಿಭಾಗೀಯ ಪೀಠ ನೋಟಿಸ್ ಜಾರಿ ಮಾಡಿದೆ.
ಪರಿಕ್ಕರ್ ಪ್ರಾಯೋಜಕತ್ವದ ಪರಿಸರ ಸ್ನೇಹಿ ರೆಸಾರ್ಟ್ ನಿರ್ಮಾಣಕ್ಕೆ ತಡೆ ನೀಡುವಂತೆ ಕೋರಿ ನೇತ್ರಾವಳಿ ಪಂಚಾಯತ್ ಉಪ ಸರಪಂಚ್ ಅಭಿಜಿತ್ ದೇಸಾಯಿ ಕಳೆದ ವಾರ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿದ್ದರು.
ವನ್ಯಜೀವಿ ಅಭಯಾರಣ್ಯಕ್ಕೆ ಹೊಂದಿಕೊಂಡಂತೆ ಸುಮಾರು 90, ಸಾವಿರ ಚದರ ಕಿಲೋಮೀಟರ್ ವ್ಯಾಪ್ತಿಯಲ್ಲಿ ನಿರ್ಮಿಸಲಾಗುತ್ತಿರುವ ರೆಸಾರ್ಟ್ ಯೋಜನೆಗಾಗಿ ಹಲವಾರು ಕಾನೂನುಗಳನ್ನು ಅಂಗೀಕರಿಸಲಾಗಿದ್ದು, ಈ ಯೋಜನೆಯಿಂದ ಅರಣ್ಯ ಪ್ರದೇಶಗಳ ನಾಶವಾಗುತ್ತದೆ ಎಂದು ಅಭಿಜಿತ್ ದೇಸಾಯಿ ಆರೋಪಿಸಿದ್ದಾರೆ.
ದಕ್ಷಿಣ ಗೋವಾ ಜಿಲ್ಲೆಯ ನೇತ್ರಾವಳಿ ವನ್ಯಜೀವಿ ಅಭಯಾರಣ್ಯ ಬಳಿ ನಿರ್ಮಿಸಲಾಗುತ್ತಿರುವ ಪರಿಸರ ಸ್ನೇಹಿ ರೆಸಾರ್ಟ್ ನಿಂದ ಅರಣ್ಯ ಪ್ರದೇಶಗಳ ನಾಶವಾಗಲಿದೆ ಎಂದು ಆರೋಪಿಸಿ ಪರಿಕ್ಕರ್ ಪುತ್ರ ಅಭಿಜತ್ ವಿರುದ್ಧ ಸಲ್ಲಿಸಿರುವ ಅರ್ಜಿಯ ಹಿನ್ನೆಲೆಯಲ್ಲಿ ನೋಟಿಸ್ ಜಾರಿಗೊಳಿಸಲಾಗಿದೆ ಎಂದು ದೇಸಾಯಿ ಪರ ವಕೀಲ ಕಾರ್ಲೋಸ್ ಫೆರೀರಾ ಹೇಳಿದ್ದಾರೆ.
ಅಭಿಜತ್ ಮಾತ್ರವಲ್ಲದೆ ಈ ಪ್ರಕರಣದಲ್ಲಿ ತೊಡಗಿಸಿಕೊಂಡಿರುವ ಇತರ ಆರು ಮಂದಿಗೂ ನೋಟಿಸ್ ಜಾರಿಗೊಳಿಸಲಾಗಿದೆ. ಮಾರ್ಚ್ 14ರಂದು ವಿವರಣೆ ನೀಡುವಂತೆ ನೋಟಿಸ್ ನಲ್ಲಿ ಸೂಚಿಸಲಾಗಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


