ದ್ವೇಷಪೂರಿತ ಮೋದಿ ಸರ್ಕಾರದಿಂದ ನನ್ನ ತಾಯಿಗೆ ಕಿರುಕುಳ- ರಾಬರ್ಟ್ ವಾದ್ರಾ
ದ್ವೇಷಪೂರಿತ ಮೋದಿ ಸರ್ಕಾರದಿಂದ ನನ್ನ ತಾಯಿಗೆ ಕಿರುಕುಳ ನೀಡಲಾಗುತ್ತಿದೆ ಎಂದು ಸೋನಿಯಾಗಾಂಧಿ ಆಳಿಯ ರಾಬರ್ಟ್ ವಾದ್ರಾ ಆರೋಪಿಸಿದ್ದಾರೆ.

ನವದೆಹಲಿ: ದ್ವೇಷಪೂರಿತ ಮೋದಿ ಸರ್ಕಾರದಿಂದ ನನ್ನ ತಾಯಿಗೆ ಕಿರುಕುಳ ನೀಡಲಾಗುತ್ತಿದೆ ಎಂದು ಸೋನಿಯಾಗಾಂಧಿ ಅಳಿಯ ರಾಬರ್ಟ್ ವಾದ್ರಾ ಆರೋಪಿಸಿದ್ದಾರೆ.
ಬಿಕಾನೇರ್ ಭೂ ಹಗರಣಕ್ಕೆ ಸಂಬಂಧಿಸಿದಂತೆ ಜೈಪುರದಲ್ಲಿ ಇಂದು ರಾಬರ್ಟ್ ವಾದ್ರಾ ಹಾಗೂ ಅವರ ತಾಯಿ ಹಾಜರಾಗಿ ವಿಚಾರಣೆ ಎದುರಿಸಿದ ನಂತರ ಫೇಸ್ ಬುಕ್ ನಲ್ಲಿ ಹೀಗೆ ಬರೆದುಕೊಂಡಿದ್ದಾರೆ.
'' ನನ್ನ ತಾಯಿ 75ರ ವೃದ್ಧೆ. ಆಕೆ ಕಾರು ಅಪಘಾತದಲ್ಲಿ ತನ್ನ ಮಗಳನ್ನು ಕಳೆದುಕೊಂಡಿದ್ದಾಳೆ. ಮಧುಮೇಹದಿಂದ ಬಳಲುತ್ತಿದ್ದ ಒರ್ವ ಮಗ ಹಾಗೂ ಆಕೆಯ ಪತಿಯನ್ನು ಕೂಡಾ ಕಳೆದುಕೊಂಡಿದ್ದಾರೆ. ಮೂವರನ್ನು ಕಳೆದುಕೊಂಡು ನನ್ನೊಂದಿಗೆ ಸಮಯ ಕಳೆಯುತ್ತಿದ್ದಾರೆ. ಆದ್ದರಿಂದ ಆಕೆಯನ್ನು ನೋಡಿಕೊಳ್ಳುತ್ತಿದ್ದೇನೆ. ಆದರೆ, ಈಗ ಅವರು ನನ್ನ ಕಚೇರಿಯಲ್ಲಿರುತ್ತಿದ್ದರಿಂದ ಆರೋಪಿ ಎಂಬಂತೆ ವಿಚಾರಣೆ ನಡೆಸುತ್ತಿದ್ದು, ಕಿರುಕುಳ ನೀಡಲಾಗುತ್ತಿದೆ ಎಂದು ಆರೋಪಿಸಿದ್ದಾರೆ.
ಲೋಕಸಭಾ ಚುನಾವಣೆ ಹತ್ತಿರವಿದ್ದಂತೆ ತಮ್ಮನ್ನು ಟಾರ್ಗೆಟ್ ಮಾಡಿರುವ ಉದ್ದೇಶ ತಿಳಿಯುತ್ತಿಲ್ಲ ಎಂದಿರುವ ರಾಬರ್ಟ್ ವಾದ್ರಾ, ನಾಲ್ಕು ವರ್ಷ ಎಂಟು ತಿಂಗಳಿಂದ ವಿಚಾರಣೆ ನಡೆಸದೆ ಈಗ ವಿಚಾರಣೆ ನಡೆಸುವ ಉದ್ದೇಶವೇನಿದೆ ಎಂದು ಪ್ರಶ್ನಿಸಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


